AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ಗಾಗಿ ಹೊಸ ತಂತ್ರಜ್ಞಾನ ತೆಲುಗಿಗೆ ತಂದ ರಾಜಮೌಳಿ

Rajamouli movies: ಎಸ್​​ಎಸ್ ರಾಜಮೌಳಿ, ತಂತ್ರಜ್ಞಾನವನ್ನು ಬಳಸಿಕೊಳ್ಳುವುದರಲ್ಲಿ ಎತ್ತಿದ ಕೈ. ತಮ್ಮ ಸಿನಿಮಾಗಳಲ್ಲಿ ಅತ್ಯುತ್ತಮ ದರ್ಜೆಯ ತಂತ್ರಜ್ಞಾನವನ್ನು ಅವರು ಕಾಲ-ಕಾಲಕ್ಕೆ ಬಳಸುತ್ತಾ ಬಂದಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾಕ್ಕೂ ಸಹ ಅತ್ಯುತ್ತಮವಾದ, ಹೊಸ ತಂತ್ರಜ್ಞಾನವೊಂದನ್ನು ರಾಜಮೌಳಿ ಬಳಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ...

‘ವಾರಣಾಸಿ’ಗಾಗಿ ಹೊಸ ತಂತ್ರಜ್ಞಾನ ತೆಲುಗಿಗೆ ತಂದ ರಾಜಮೌಳಿ
Varanasi Movie
ಮಂಜುನಾಥ ಸಿ.
|

Updated on: Nov 16, 2025 | 2:52 PM

Share

ರಾಜಮೌಳಿ (SS Rajamouli) ಸಿನಿಮಾ ಮೂಲಕ ಅದ್ಭುತವಾಗಿ ಕತೆ ಹೇಳುತ್ತಾರೆ. ಈ ಕತೆ ಹೇಳುವ ಪ್ರಕ್ರಿಯೆಗೆ ತಂತ್ರಜ್ಞಾನವನ್ನು ಅವರಷ್ಟು ಪರಿಣಾಮಕಾರಿಯಾಗಿ ಭಾರತದ ಇನ್ಯಾವ ನಿರ್ದೇಶಕರೂ ಬಳಸಿಕೊಳ್ಳುವುದಿಲ್ಲವೇನೋ. ವಿಎಫ್​​ಎಕ್ಸ್​, ಮಿನಿಯೇಚರ್, ಹೊಸ ರೀತಿಯ ಕ್ಯಾಮೆರಾ-ಲೆನ್ಸ್​ಗಳ ಬಳಕೆ ಎಲ್ಲವೂ ಅತ್ಯುತ್ತಮ ದರ್ಜೆಯಲ್ಲಿಯೇ ಇರುವಂತೆ ನೋಡಿಕೊಳ್ಳುತ್ತಾರೆ. ಇದೀಗ ‘ವಾರಣಾಸಿ’ ಸಿನಿಮಾಕ್ಕೆ ಸಹ ರಾಜಮೌಳಿ ಹೊಸ ತಂತ್ರಜ್ಞಾನವನ್ನು ಮೊದಲ ಬಾರಿಗೆ ಬಳಕೆ ಮಾಡುತ್ತಿದ್ದಾರೆ.

ನಿನ್ನೆ (ನವೆಂಬರ್ 15) ರಾಮೋಜಿರಾವ್ ಫಿಲಂ ಸಿಟಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಮಾತನಾಡಿದ ರಾಜಮೌಳಿ, ಈ ಸಿನಿಮಾಕ್ಕೆ ಕೆಲ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿರುವುದಾಗಿ ಹೇಳಿದರು. ‘ವಾರಣಾಸಿ’ ಸಿನಿಮಾವನ್ನು ಫುಲ್​​ಸ್ಕ್ರೀನ್ ಫಾರ್ಮ್ಯಾಟ್​​ನಲ್ಲಿ ಚಿತ್ರೀಕರಣ ಮಾಡುತ್ತಿರುವುದಾಗಿ ರಾಜಮೌಳಿ ಹೇಳಿದ್ದಾರೆ. ಸಾಮಾನ್ಯವಾಗಿ ಸಿನಿಮಾಗಳನ್ನು ಸಿನಿಮಾ ಸ್ಕೋಪ್​​​ನಲ್ಲಿ ಚಿತ್ರೀಕರಣ ಮಾಡಲಾಗುತ್ತದೆ. ಬಳಿಕ ಅದನ್ನು ಐಮ್ಯಾಕ್ಸ್​​ ಫಾರ್ಮ್ಯಾಟ್​​ಗೆ ಬದಲಾವಣೆ ಮಾಡಲಾಗುತ್ತದೆ. ಆದರೆ ಈ ಸಿನಿಮಾವನ್ನು ನಾವು ಫುಲ್ ಸ್ಕ್ರೀನ್ ಫಾರ್ಮ್ಯಾಟ್​​ನಲ್ಲಿಯೇ ಚಿತ್ರೀಕರಣ ಮಾಡಿದ್ದೇವೆ ಎಂದಿದ್ದಾರೆ.

ರಾಜಮೌಳಿ ಈಗ ಬಳಸುತ್ತಿರುವ ಮಾದರಿಯನ್ನು ‘ಪ್ರೀಮಿಯಮ್ ಫುಲ್ ಸ್ಕ್ರೀಮ್ ಐಮ್ಯಾಕ್ಸ್’ ಫಾರ್ಮ್ಯಾಟ್ ಎಂದು ಕರೆಯಲಾಗುತ್ತದೆ. ಇದು ಅತ್ಯುತ್ತಮ ವೀಕ್ಷಣೆಯ ಅನುಭವವನ್ನು ಪ್ರೇಕ್ಷಕರಿಗೆ ನೀಡುತ್ತದೆ ಮತ್ತು ಚಿತ್ರದ ಗುಣಮಟ್ಟವೂ ಅದ್ಭುತವಾಗಿ ಇರಲಿದೆ. ಈ ಸಿನಿಮಾನಲ್ಲಿ ಪಿಎಸ್ ವಿನೋದ್ ಅವರು ಕ್ಯಾಮೆರಾಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ರಾಜಮೌಳಿ ಜೊತೆಗೆ ಇದು ಅವರ ಮೊದಲ ಕೊಲ್ಯಾಬರೇಷನ್. ‘ಪ್ರೀಮಿಯಮ್ ಫುಲ್ ಸ್ಕ್ರೀಮ್ ಐಮ್ಯಾಕ್ಸ್’ ಮಾತ್ರವೇ ಅಲ್ಲದೆ, ಸಿನಿಮಾದ ಧ್ವನಿ, ಹಿನ್ನೆಲೆ ಧ್ವನಿ, ವಿಎಫ್​ಎಕ್ಸ್ ಇನ್ನಿತರೆ ವಿಭಾಗಗಳಲ್ಲಿಯೂ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಇದಕ್ಕಾಗಿ ಹಾಲಿವುಡ್​​ನ ಟಾಪ್ ಸಂಸ್ಥೆಗಳೊಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು

ರಾಜಮೌಳಿ ತಮ್ಮ ಹಿಂದಿನ ಸಿನಿಮಾಗಳಿಗೆಲ್ಲ ಕೆಕೆ ಸೆಂಥಿಲ್ ಅವರನ್ನೇ ಕ್ಯಾಮೆರಾಮ್ಯಾನ್ ಆಗಿ ಹಾಕಿಕೊಳ್ಳುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ರಾಜಮೌಳಿ ಅವರು ಕ್ಯಾಮೆರಾಮ್ಯಾನ್ ಅನ್ನು ಬದಲಾವಣೆ ಮಾಡಿ ವಿನೋದ್ ಅವರಿಗೆ ಅವಕಾಶ ನೀಡಿದ್ದಾರೆ. ಈ ಸಿನಿಮಾನಲ್ಲಿ ಸಂಗೀತ ನಿರ್ದೇಶಕರು ಸಹ ಬದಲಾವಣೆ ಆಗಲಿದ್ದಾರೆ ಎನ್ನಲಾಗಿತ್ತು, ಆದರೆ ರಾಜಮೌಳಿ ಅವರು ಕೀರವಾಣಿ ಅವರನ್ನೇ ಉಳಿಸಿಕೊಂಡಿದ್ದಾರೆ.

‘ವಾರಣಾಸಿ’ ಸಿನಿಮಾನಲ್ಲಿ ಮಹೇಶ್ ಬಾಬು ಜೊತೆಗೆ ಪ್ರಿಯಾಂಕಾ ಚೋಪ್ರಾ ನಾಯಕಿ. ಪೃಥ್ವಿರಾಜ್ ಸುಕುಮಾರನ್ ವಿಲನ್. ಮಾಧವನ್ ಅವರು ಮಹೇಶ್ ಬಾಬು ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಸಿನಿಮಾನಲ್ಲಿ ಖ್ಯಾತ ಹಾಲಿವುಡ್ ನಟರೊಬ್ಬರು ಸಹ ನಟಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈ ಬಗ್ಗೆ ಖಾತ್ರಿ ಇಲ್ಲ. ಸಿನಿಮಾ 2027ರ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ