AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ

ನಿರ್ದೇಶಕ ರಾಜಮೌಳಿ 'ವಾರಣಾಸಿ' ಸಿನಿಮಾದ ಕೆಲಸಗಳ ನಡುವೆ ಜಪಾನಿ ಸ್ಟುಡಿಯೋಗಳೊಂದಿಗೆ ದೊಡ್ಡ ಒಪ್ಪಂದಕ್ಕೆ ಮುಂದಾಗಿದ್ದಾರೆ. 'ಆರ್ಆರ್ಆರ್' ಚಿತ್ರವನ್ನು ಅನಿಮೆ ರೂಪದಲ್ಲಿ ನಿರ್ಮಿಸಲು ಮಾತುಕತೆ ನಡೆಸಲಾಗುತ್ತಿದೆ. ಈ ಕುರಿತು ಅವರೇ ಖಚಿತಪಡಿಸಿದ್ದು, ಡೀಲ್ ಅಂತಿಮವಾದರೆ 'ಆರ್ಆರ್ಆರ್' ಅನಿಮೆ ಭಾಗವಾಗುವ ಸಾಧ್ಯತೆ ಇದೆ. ಮಹೇಶ್ ಬಾಬು ನಟನೆಯ 'ವಾರಣಾಸಿ' 2027ರಲ್ಲಿ ತೆರೆ ಕಾಣಲಿದೆ.

ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Feb 07, 2026 | 2:21 PM

Share

ನಿರ್ದೇಶಕ ರಾಜಮೌಳಿ (Rajamouli) ಅವರು ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ರಾಜಮೌಳಿ ಅವರು ಸದ್ದಿಲ್ಲದೆ, ಸೈಡಲ್ಲಿ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ಈ ವಿಷಯ ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ವಿಷಯವನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಈಗಲೇ ಪ್ರಚಾರ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ಪ್ರಿಯಾಂಕಾ ಚೋಪ್ರಾ, ಮಹೇಶ್ ಬಾಬು, ಪೃಥ್ವಿರಾಜ್ ಸುಕುಮಾರನ್ ಜೊತೆ ಹಾಲಿವುಡ್ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದ ವೇಳೆ ರಾಜಮೌಳಿ ಅವರು ಈ ವಿಷಯ ಹೇಳಿದ್ದಾರೆ.

‘ಆರ್​ಆರ್​​ಆರ್​’ಸಿನಿಮಾನ ಜಪಾನ್ ಅಲ್ಲೂ ನೋಡಿದ್ದಾರೆ. ಅಲ್ಲಿಯೂ ಈ ಚಿತ್ರ ಇಷ್ಟಪಟ್ಟಿದ್ದಾರೆ. ಈ ಸಿನಿಮಾನ ಅನಿಮೇ ವರ್ಷನ್ ಅಲ್ಲಿ ಮಾಡಲು ಜಪಾನ್ ಸ್ಟುಡಿಯೋಗಳ ಜೊತೆ ಮಾತುಕತೆ ನಡೆದಿದೆ. ಆದರೆ, ಯಾವುದೂ ಫೈನಲ್ ಆಗಿಲ್ಲವಂತೆ. ಒಂದೊಮ್ಮೆ ಈ ಡೀಲ್ ಫೈನಲ್ ಆದರೆ, ಇದರ ಕೆಲಸಗಳಲ್ಲಿ ಅವರು ತೊಡಗಿಕೊಳ್ಳಬಹುದು.

‘ವಾರಣಾಸಿ’ ಸಿನಿಮಾ ಶೂಟಿಂಗ್ ಹಂತದಲ್ಲಿ ಇದೆ. ಈ ಚಿತ್ರ ರಿಲೀಸ್​​ಗೆ ಇನ್ನೂ ಒಂದು ವರ್ಷ ಇದೆ. ಈ ಸಿನಿಮಾ ಟೈಟಲ್ ರಿವೀಲ್​​ಗೆ ದೊಡ್ಡ ಮಟ್ಟದಲ್ಲಿ ಈವೆಂಟ್ ಮಾಡಲಾಗಿತ್ತು. ಕೆಲ ತಾಂತ್ರಿಕ ಸಮಸ್ಯೆ ಬಿಟ್ಟರೆ ಈ ಕಾರ್ಯಕ್ರಮ ಯಶಸ್ಸು ಕಂಡಿತ್ತು.

ಇದನ್ನೂ ಓದಿ: ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ?

ರಾಜಮೌಳಿ ‘ಆರ್​​ಆರ್​​ಆರ್​’ ಚಿತ್ರದ ಅನಿಮೇ ಚಿತ್ರದ ಭಾಗ ಆಗುತ್ತಾರಾ ಎಂಬ ಕುತೂಹಲ ಮೂಡಿದೆ. ಕೆಲವು ಬದಲಾವಣೆಗಳನ್ನು ಅವರು ಮಾಡಿಕೊಳ್ಳಲು ರಾಜಮೌಳಿ ಸಹಾಯ ಮಾಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ