AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ

ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿದೆ. ಅವರು​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ.

ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ಗೆ ಕೊರೊನಾ; ಆರೋಗ್ಯ ಸ್ಥಿತಿ ಚಿಂತಾಜನಕ
ರಾಜೀವ್ ಮಸಂದ್​
ಮದನ್​ ಕುಮಾರ್​
|

Updated on: May 03, 2021 | 1:37 PM

Share

ಕೊರೊನಾ ಕಾಟಕ್ಕೆ ಸಂಬಂಧಿಸಿದ ಕಹಿ ಸುದ್ದಿಗಳು ಪ್ರತಿ ಕ್ಷಣವೂ ಕೇಳಿಬರುತ್ತಿವೆ. ಸೆಲೆಬ್ರಿಟಿಗಳ ವಲಯದಲ್ಲೂ ಅನೇಕರು ಕೊವಿಡ್​ನಿಂದ ತೊಂದರೆ ಅನುಭವಿಸುತ್ತಿದ್ದಾರೆ. ಪತ್ರಕರ್ತರಿಗೂ ಈ ಮಹಾಮಾರಿ ಕಾಟ ಕೊಡುತ್ತಿದೆ. ಹಿರಿಯ ಸಿನಿಮಾ ವಿಮರ್ಶಕ ರಾಜೀವ್​ ಮಸಂದ್​ ಅವರಿಗೆ ಈಗ ಕೊರೊನಾ ಪಾಸಿಟಿವ್​ ಆಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಅನೇಕ ವರ್ಷಗಳಿಂದ ಸಿನಿಮಾ ಪತ್ರಕರ್ತನಾಗಿ ಕೆಲಸ ಮಾಡಿರುವ ರಾಜೀವ್​ ಮಸಂದ್​ ಅವರಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಆಯಿತು. ಕೂಡಲೇ ಅವರನ್ನು ಮುಂಬೈನ ಕೊಕಿಲಾವೆನ್​ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​ ಸೇರಿದಂತೆ ದೇಶದ ಎಲ್ಲ ಪ್ರಮುಖ ಸ್ಟಾರ್​ ಕಲಾವಿದರ ಸಂದರ್ಶನವನ್ನು ರಾಜೀವ್​ ಮಸಂದ್​ ಮಾಡಿದ್ದಾರೆ. ಸಾವಿರಾರು ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ಅವರು ಖ್ಯಾತರಾಗಿದ್ದಾರೆ.

ರಾಜೀವ್​ ಮಸಂದ್​ ಬೇಗ ಗುಣಮುಖರಾಗಲಿ ಎಂದು ಅನೇಕ ಬಾಲಿವುಡ್​ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಮೂಲಕ ಹಾರೈಸಿದ್ದಾರೆ. ಕಲಾವಿದರಾದ ದಿಯಾ ಮಿರ್ಜಾ, ಬಿಪಾಶಾ ಬಸು, ನಿಮ್ರತ್​ ಕೌರ್​, ಸುನೀಲ್​ ಶೆಟ್ಟಿ ಮುಂತಾದವರು ರಾಜೀವ್ ಮಸಂದ್​ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಆಜ್​ ತಕ್​ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್​ ಸರ್ದಾನ ನಿಧನರಾದರು. ಅವರ ಅಗಲಿಕೆ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ರೋಹಿತ್ ಸರ್ದಾನ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ , ‘ದೇಶವು ಇಂದು ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ ನೀಡಲಿ’ ಎಂದಿದ್ದರು.

ಇದನ್ನೂ ಓದಿ:

 Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ