AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ತಪಾಸಣೆ ಬಳಿಕ ಇಂದು ಭಾರತಕ್ಕೆ ವಾಪಸ್ ಆಗಲಿರುವ ರಜನಿಕಾಂತ್

ರಜನಿಕಾಂತ್ ಜೂನ್ 19 ರಂದು ಅಮೆರಿಕಕ್ಕೆ ಹೋಗಿದ್ದರು. ವಿದೇಶಕ್ಕೆ ಹೊರಟಿದ್ದ ರಜನಿಕಾಂತ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ತನ್ನ ಪತ್ನಿ ಲತಾ ಜೊತೆ ಕಾಣಿಸಿಕೊಂಡಿದ್ದರು. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಸೂಪರ್ ಸ್ಟಾರ್​ನ ಕೆಲವು ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆರೋಗ್ಯ ತಪಾಸಣೆ ಬಳಿಕ ಇಂದು ಭಾರತಕ್ಕೆ ವಾಪಸ್ ಆಗಲಿರುವ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್
TV9 Web
| Edited By: sandhya thejappa|

Updated on:Jul 08, 2021 | 9:59 AM

Share

ಆರೋಗ್ಯ ತಪಾಸಣೆಗೆಂದು ಅಮೇರಿಕಕ್ಕೆ ತೆರಳಿದ್ದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಇಂದು (ಜುಲೈ 8) ಭಾರತಕ್ಕೆ ವಾಪಾಸಾಗಲಿದ್ದಾರೆ. ಮೂತ್ರಪಿಂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ತಲೈವಾ ವಿಶೇಷ ವಿಮಾನದಲ್ಲಿ ಇಂದು ಚೆನ್ನೈಗೆ ಆಗಮಿಸುತ್ತಾರೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ರಜನಿಕಾಂತ್ ಆರೋಗ್ಯ ತಪಾಸಣೆಗೆಂದು ಅಮೆರಿಕಾಗೆ ತೆರಳಿದ್ದರು. ಅಲ್ಲಿ ಧೀರ್ಘಕಾಲದ ತಪಾಸಣೆ ಮತ್ತು ವಿಶ್ರಾಂತಿ ಬಳಿಕ ಅವರು ಭಾರತಕ್ಕೆ ಬರುತ್ತಿದ್ದಾರೆ.

ರಜನಿಕಾಂತ್ ಜೂನ್ 19 ರಂದು ಅಮೆರಿಕಕ್ಕೆ ಹೋಗಿದ್ದರು. ವಿದೇಶಕ್ಕೆ ಹೊರಟಿದ್ದ ರಜನಿಕಾಂತ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ತನ್ನ ಪತ್ನಿ ಲತಾ ಜೊತೆ ಕಾಣಿಸಿಕೊಂಡಿದ್ದರು. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಸೂಪರ್ ಸ್ಟಾರ್​ನ ಕೆಲವು ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಅನುಮಾನ ವ್ಯಕ್ತಪಡಿಸಿದ ನಟಿ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಭಾರತೀಯರಿಗೆ ನೇರವಾಗಿ ಅಮೆರಿಕಕ್ಕೆ ತೆರಳಲು ಅವಕಾಶವಿರಲಿಲ್ಲ. ಹೀಗಿದ್ದರೂ ನಟ ರಜನಿಕಾಂತ್ ಭಾರತ ಸರ್ಕಾರದಿಂದ ಅನುಮತಿ ಪಡೆದು ಅಮೆರಿಕಕ್ಕೆ ಹಾರಿದ್ದರು.

‘ಭಾರತದ ಪ್ರಜೆಗಳು ಅಮೆರಿಕಕ್ಕೆ ನೇರವಾಗಿ ಎಂಟ್ರಿ ಪಡೆಯುವುದರ ಮೇಲೆ ಅಲ್ಲಿನ ದೇಶ ನಿರ್ಬಂಧ ಹೇರಿದೆ. ಆದರೆ, ವೈದ್ಯಕೀಯ ಸಮಸ್ಯೆ ಆದರೆ ಮಾತ್ರ ವಿನಾಯತಿ ಇದೆ. ಈ ಸಂದರ್ಭದಲ್ಲಿ ರಜನಿಕಾಂತ್ ಏಕೆ ಮತ್ತು ಹೇಗೆ ಅಮೆರಿಕಕ್ಕೆ ತೆರಳಿದರು. ಅವರು ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದಿದ್ದರು. ಈಗ ಅವರು ಅಮೆರಿಕಕ್ಕೆ ತೆರಳಿದ ವಿಚಾರ ಅನುಮಾನ ಹುಟ್ಟು ಹಾಕಿದೆ. ರಜನಿ ಸರ್ ದಯವಿಟ್ಟು ಇದನ್ನು ಸ್ಪಷ್ಟಪಡಿಸಿ’ ಎಂದು ಕಸ್ತೂರಿ ಕೇಳಿದ್ದಾರೆ.

ಇದನ್ನೂ ಓದಿ

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ

ಮುಂದಿನ ಚುನಾವಣೆಯಲ್ಲಿ ಸುಮಲತಾ ಸೋಲಿಸಲು ಹೆಚ್​ಡಿ ಕುಮಾರಸ್ವಾಮಿ ಶಪಥ.. ಇದಕ್ಕೆ ಸುಮಲತಾ ಕೌಂಟರ್ ಪ್ಲಾನ್ ಏನು?

(Rajinikant is coming to India from USA today)

Published On - 9:28 am, Thu, 8 July 21

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?