ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​

‘ವೆಟ್ಟೈಯನ್​’ ಸಿನಿಮಾದಲ್ಲೂ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಟೈಟಲ್​ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ರಜನಿಕಾಂತ್​ ಅವರ ಅಭಿಮಾನಿಗಳಿಗೆ ಈ ಟೀಸರ್​ ಇಷ್ಟವಾಗಿದೆ. ‘ಜೈ ಭೀಮ್​’ ಖ್ಯಾತಿಯ ಟಿಜೆ ಜ್ಞಾನವೇಲ್​ ಅವರು ‘ವೆಟ್ಟೈಯನ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ರಜನಿಕಾಂತ್​ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್​’​; ಧೂಳೆಬ್ಬಿಸಿದ ಟೈಟಲ್​​ ಟೀಸರ್​
ರಜನಿಕಾಂತ್​

Updated on: Dec 13, 2023 | 11:46 AM

ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಅವರು ದಣಿವರಿಯದ ಯುವಕನಂತೆ ಕೆಲಸ ಮಾಡುತ್ತಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ನಟಿಸುತ್ತಿರುವ 170ನೇ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ರಜನಿಕಾಂತ್​ ಅವರ ಜನ್ಮದಿನದ (Rajinikanth Birthday) ಪ್ರಯುಕ್ತ ಈ ಸಿನಿಮಾದ ಟೈಟಲ್​ ಏನು ಎಂಬುದು ರಿವೀಲ್​ ಮಾಡಲಾಗಿದೆ. ಈ ಚಿತ್ರಕ್ಕೆ ‘ವೆಟ್ಟೈಯನ್​’ (Vettaiyan) ಎಂದು ಹೆಸರು ಇಡಲಾಗಿದೆ. ಶೀರ್ಷಿಕೆ ಅನಾವರಣ ಮಾಡಲು ಬಿಡುಗಡೆ ಮಾಡಿರುವ ಟೀಸರ್​ ಗಮನ ಸೆಳೆಯುತ್ತಿದೆ. ಯೂಟ್ಯೂಬ್​ನಲ್ಲಿ 24 ಗಂಟೆ ಕಳೆಯುವುದರೊಳಗೆ 34 ಲಕ್ಷಕ್ಕೂ ಅಧಿಕ ಬಾರಿ ಇದು ವೀಕ್ಷಣೆ ಕಂಡಿದೆ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಈ ವರ್ಷ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಆ ಬಳಿಕ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಅನೇಕ ನಿರ್ಮಾಪಕರು ಮುಂದೆ ಬಂದಿದ್ದಾರೆ. ‘ವೆಟ್ಟೈಯನ್​’ ಸಿನಿಮಾಗೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಟೀಸರ್​ ಗಮನ ಸೆಳೆಯುತ್ತಿದೆ.

Vettaiyan - Title Teaser | Rajinikanth | T.J. Gnanavel | Anirudh | Subaskaran | Lyca Productions

ರಜನಿಕಾಂತ್​ ಅವರಿಗೆ ಈಗ 73 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಆ್ಯಕ್ಷನ್​ ದೃಶ್ಯಗಳಲ್ಲಿ ನಟಿಸುತ್ತಿದ್ದಾರೆ. ‘ವೆಟ್ಟೈಯನ್​’ ಸಿನಿಮಾದಲ್ಲೂ ಸಾಹಸ ದೃಶ್ಯಗಳು ಇರಲಿವೆ ಎಂಬುದಕ್ಕೆ ಟೈಟಲ್​ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಅಭಿಮಾನಿಗಳಿಗೆ ಈ ಟೀಸರ್​ ಇಷ್ಟವಾಗಿದೆ. ‘ಜೈ ಭೀಮ್​’ ಖ್ಯಾತಿಯ ಟಿಜೆ ಜ್ಞಾನವೇಲ್​ ಅವರು ‘ವೆಟ್ಟೈಯನ್​’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ

ಇದಲ್ಲದೇ, ‘ಲಾಲ್​ ಸಲಾಂ’ ಸಿನಿಮಾದಲ್ಲೂ ರಜನಿಕಾಂತ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ನಿರ್ದೇಶಕಿ. ತಲೈವ ಜನ್ಮದಿನದ ಪ್ರಯುಕ್ತ ‘ಲಾಲ್​ ಸಲಾಂ’ ಸಿನಿಮಾದ ಟೀಸರ್​ ಕೂಡ ಬಿಡುಗಡೆ ಆಗಿದ್ದು, ಇದರಲ್ಲೂ ಆ್ಯಕ್ಷನ್​ ದೃಶ್ಯ ಮತ್ತು ಹಿನ್ನಲೆ ಸಂಗೀತ ಗಮನ ಸೆಳೆದಿದೆ. ಈ ಸಿನಿಮಾ ಕೂಡ ‘ಲೈಕಾ ಪ್ರೊಡಕ್ಷನ್ಸ್​’ ಮೂಲಕ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us