ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಒಟ್ಟಾಗಿ ಪೋಸ್​ ಕೊಟ್ಟ ರಜನಿಕಾಂತ್-ಅಮಿತಾಭ್ ಬಚ್ಚನ್; ಫೋಟೋ ವೈರಲ್
ರಜಿನಿ-ಅಮಿತಾಭ್

Updated on: May 04, 2024 | 10:34 AM

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಸದ್ಯ ಸಖತ್ ಬ್ಯುಸಿ ಇದ್ದಾರೆ. ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋ ಜೊತೆಗೆ ಸಿನಿಮಾಗಳ ಶೂಟ್​ನಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರು ಮುಂದಿನ ಸಿನಿಮಾ ‘ವೆಟ್ಟೈಯನ್’ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ತಮಿಳಿನ ಸಿನಿಮಾ ಇದಾಗಿದ್ದು, ರಜನಿಕಾಂತ್ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ‘ವೆಟ್ಟೈಯನ್’ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದೆ.

ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅನೇಕರು ಈ ಫೋಟೋಗೆ ಹಾರ್ಟ್ ಎಮೋಜಿ ಹಾಕಿದ್ದಾರೆ.

ಇತ್ತೀಚೆಗೆ ಚಿತ್ರತಂಡದವರು ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ. ರಜನಿಕಾಂತ್ ಅವರು ಗನ್ ಹಿಡಿದು ಪೋಸ್ ಕೊಟ್ಟಿದ್ದರು. ಈ ಸಿನಿಮಾದಲ್ಲಿ ರಜನಿ ಹಾಗೂ ಅಮಿತಾಭ್ ಕಾಂಬಿನೇಷನ್ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ.

ಇದನ್ನೂ ಓದಿ: ಮೇ ತಿಂಗಳಿಂದ ಡಿಸೆಂಬರ್​ವರೆಗೆ ಸಿನಿಪ್ರಿಯರಿಗೆ ಸುಗ್ಗಿ; ರಿಲೀಸ್ ಆಗಲಿವೆ ದಕ್ಷಿಣದ ಈ ಬಿಗ್​ ಬಜೆಟ್ ಸಿನಿಮಾಗಳು

ಕಳೆದ ವರ್ಷ ‘ಜೈಲರ್’ ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರು. ಈ ಸಿನಿಮಾ ಪವರ್​ಫುಲ್ ಆ್ಯಕ್ಷನ್​ನೊಂದಿಗೆ ಕೂಡಿತ್ತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿತ್ತು. ರೆಟ್ರೋ ಕಾಲದ ರಜನಿಕಾಂತ್ ಅವರು ಕಾಣಿಸಿದ್ದರು. ಈ ಸಿನಿಮಾದಿಂದ ರಜನಿಕಾಂತ್ ಖ್ಯಾತಿ ಹೆಚ್ಚಿದೆ. ಇದೇ ರೀತಿಯ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us