AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?

‘ಜೈಲರ್’ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ರಜನಿಕಾಂತ್ 100 ಕೋಟಿ ರೂಪಾಯಿ ಪಡೆದಿದ್ದರು. ‘ವೆಟ್ಟೈಯಾನ್’ ಚಿತ್ರವನ್ನು ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಅಡಿಯಲ್ಲೇ ನಿರ್ಮಾಣ ಆಗುತ್ತಿದ್ದು, ಇದಕ್ಕಾಗಿ ರಜನಿಕಾಂತ್ 125 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?
ರಾಜೇಶ್ ದುಗ್ಗುಮನೆ
|

Updated on: Oct 05, 2024 | 2:40 PM

Share

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅವರು ನಟಿಸಿದ್ದಾರೆ. ಈ ಸಿನಿಮಾನ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ‘ಜೈಲರ್’ ಬಳಿಕ ರಜನಿಕಾಂತ್ ಹೀರೋ ಆಗಿ ತೆರೆಮೇಲೆ ಬರುತ್ತಿರುವ ಸಿನಿಮಾ ಇದು. ಈ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾಗಾಗಿ ರಜನಿಕಾಂತ್ ಪಡೆದ ಸಂಭಾವನೆ ವಿಚಾರ ಶಾಕಿಂಗ್ ಎನಿಸಿದೆ.

ರಜನಿಕಾಂತ್ ಅವರು ‘ವೆಟ್ಟೈಯಾನ್’ ಚಿತ್ರಕ್ಕಾಗಿ ಬರೋಬ್ಬರಿ 125 ಕೋಟಿ ರೂಪಾಯಿ ಪಡೆದಿದ್ದಾರಂತೆ. ಅಮಿತಾಭ್ ಬಚ್ಚನ್ ಅವರು ಈ ಚಿತ್ರಕ್ಕಾಗಿ 7 ಕೋಟಿ ರೂಪಾಯಿ ಪಡೆದಿದ್ದಾರೆ. ಫಹಾದ್ ಫಾಸಿಲ್ ಅವರ ಸಂಭಾವನೆ 3 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಮಂಜು ವಾರಿಯರ್ ಸಂಭಾವನೆ 85 ಲಕ್ಷ ರೂಪಾಯಿ. ರಿತಿಕಾ ಸಿಂಗ್ ಅವರಿಗೆ 25 ಲಕ್ಷ ರೂಪಾಯಿ ಪಾವತಿಸಲಾಗಿದೆ.

‘ಜೈಲರ್’ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ರಜನಿಕಾಂತ್ 100 ಕೋಟಿ ರೂಪಾಯಿ ಪಡೆದಿದ್ದರು. ‘ವೆಟ್ಟೈಯಾನ್’ ಚಿತ್ರವನ್ನು ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಅಡಿಯಲ್ಲೇ ನಿರ್ಮಾಣ ಆಗುತ್ತಿದ್ದು, ಇದಕ್ಕಾಗಿ ರಜನಿಕಾಂತ್ 125 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

ರಜನಿಕಾಂತ್ ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿರುತ್ತಾರೆ. ಅವರು ಕ್ರಿಮಿನಿಲ್​ಗಳ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಸಿನಿಮಾದ ಕಥೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಮಿಶ್ರ ಪ್ತಿಕ್ರಿಯೆ ಪಡೆದುಕೊಂಡಿದೆ.  ‘ವೆಟ್ಟೈಯಾನ್’ ಸಿನಿಮಾ ವಿದೇಶದಲ್ಲೂ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್​; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್

ರಜನಿಕಾಂತ್ ಅವರ ನಟನೆಯ ‘ಜೈಲರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ ಭರ್ಜರಿ ಗೆಲುವು ಕಂಡಿತು. ಈ ಚಿತ್ರದಲ್ಲಿ ರಜನಿ ಅವರ ಆ್ಯಕ್ಷನ್ ಪ್ರೇಕ್ಷಕರಿಗೆ ಇಷ್ಟ ಆಗಿತ್ತು. ಈಗ ‘ವೆಟ್ಟೈಯಾನ್’ ಚಿತ್ರದಿಂದ ಜನರು ಇದೇ ರೀತಿಯದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್