‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅವರು ನಟಿಸಿದ್ದಾರೆ. ಈ ಸಿನಿಮಾನ ಟಿಜಿ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ‘ಜೈಲರ್’ ಬಳಿಕ ರಜನಿಕಾಂತ್ ಹೀರೋ ಆಗಿ ತೆರೆಮೇಲೆ ಬರುತ್ತಿರುವ ಸಿನಿಮಾ ಇದು. ಈ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾಗಾಗಿ ರಜನಿಕಾಂತ್ ಪಡೆದ ಸಂಭಾವನೆ ವಿಚಾರ ಶಾಕಿಂಗ್ ಎನಿಸಿದೆ.
ರಜನಿಕಾಂತ್ ಅವರು ‘ವೆಟ್ಟೈಯಾನ್’ ಚಿತ್ರಕ್ಕಾಗಿ ಬರೋಬ್ಬರಿ 125 ಕೋಟಿ ರೂಪಾಯಿ ಪಡೆದಿದ್ದಾರಂತೆ. ಅಮಿತಾಭ್ ಬಚ್ಚನ್ ಅವರು ಈ ಚಿತ್ರಕ್ಕಾಗಿ 7 ಕೋಟಿ ರೂಪಾಯಿ ಪಡೆದಿದ್ದಾರೆ. ಫಹಾದ್ ಫಾಸಿಲ್ ಅವರ ಸಂಭಾವನೆ 3 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಮಂಜು ವಾರಿಯರ್ ಸಂಭಾವನೆ 85 ಲಕ್ಷ ರೂಪಾಯಿ. ರಿತಿಕಾ ಸಿಂಗ್ ಅವರಿಗೆ 25 ಲಕ್ಷ ರೂಪಾಯಿ ಪಾವತಿಸಲಾಗಿದೆ.
‘ಜೈಲರ್’ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ರಜನಿಕಾಂತ್ 100 ಕೋಟಿ ರೂಪಾಯಿ ಪಡೆದಿದ್ದರು. ‘ವೆಟ್ಟೈಯಾನ್’ ಚಿತ್ರವನ್ನು ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಅಡಿಯಲ್ಲೇ ನಿರ್ಮಾಣ ಆಗುತ್ತಿದ್ದು, ಇದಕ್ಕಾಗಿ ರಜನಿಕಾಂತ್ 125 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ರಜನಿಕಾಂತ್ ಎನ್ಕೌಂಟರ್ ಸ್ಪೆಷಲಿಸ್ಟ್ ಆಗಿರುತ್ತಾರೆ. ಅವರು ಕ್ರಿಮಿನಿಲ್ಗಳ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಸಿನಿಮಾದ ಕಥೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದ್ದು, ಮಿಶ್ರ ಪ್ತಿಕ್ರಿಯೆ ಪಡೆದುಕೊಂಡಿದೆ. ‘ವೆಟ್ಟೈಯಾನ್’ ಸಿನಿಮಾ ವಿದೇಶದಲ್ಲೂ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆಯಿಂದ ಮನೆಗೆ ಮರಳಿದ ರಜನಿಕಾಂತ್; ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಸೂಪರ್ ಸ್ಟಾರ್
ರಜನಿಕಾಂತ್ ಅವರ ನಟನೆಯ ‘ಜೈಲರ್’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ ಭರ್ಜರಿ ಗೆಲುವು ಕಂಡಿತು. ಈ ಚಿತ್ರದಲ್ಲಿ ರಜನಿ ಅವರ ಆ್ಯಕ್ಷನ್ ಪ್ರೇಕ್ಷಕರಿಗೆ ಇಷ್ಟ ಆಗಿತ್ತು. ಈಗ ‘ವೆಟ್ಟೈಯಾನ್’ ಚಿತ್ರದಿಂದ ಜನರು ಇದೇ ರೀತಿಯದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.