ಚಂದ್ರಬಾಬು ನಾಯ್ಡು ಪ್ರಮಾಣವಚನ ಕಾರ್ಯಕ್ರಮದಲ್ಲಿ ಆಪ್ತತೆಯಿಂದ ಮಾತನಾಡಿದ ರಜನಿ-ಚಿರಂಜೀವಿ

ರಜನಿಕಾಂತ್ ಹಾಗೂ ಚಿರಂಜೀವಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಜನಿಕಾಂತ್ ಹಾಗೂ ಚಿರಂಜೀವಿ ಅವರು ವೇದಿಕೆ ಮೇಲೆ ಅಕ್ಕ-ಪಕ್ಕ ಕುಳಿತಿದ್ದರು. ಈ ವೇಳೆ ರಜನಿಕಾಂತ್ ಕೈನ ಚಿರಂಜೀವಿ ಅವರು ಹಿಡಿದಿದ್ದಾರೆ.

ಚಂದ್ರಬಾಬು ನಾಯ್ಡು ಪ್ರಮಾಣವಚನ ಕಾರ್ಯಕ್ರಮದಲ್ಲಿ ಆಪ್ತತೆಯಿಂದ ಮಾತನಾಡಿದ ರಜನಿ-ಚಿರಂಜೀವಿ
ರಜನಿ-ಚಿರಂಜೀವಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Jun 13, 2024 | 10:54 AM

ಚಂದ್ರಬಾಬು ನಾಯ್ಡು (Chandrababu Naidu) ಅವರ ಪ್ರಮಾಣವಚನ ಕಾರ್ಯಕ್ರಮ ವಿಜಯವಾಡದಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ತಮಿಳು ಸೂಪರ್​ಸ್ಟಾರ್ ರಜನಿಕಾಂತ್ ಅವರು ಚೆನ್ನೈನಿಂದ ವಿಜಯವಾಡಕ್ಕೆ ಆಗಮಿಸಿದ್ದಾರೆ. ರಜನಿಕಾಂತ್ ಹಾಗೂ ಚಿರಂಜೀವಿ ಅವರು ವೇದಿಕೆ ಮೇಲೆ ಕೈ ಕೈ ಹಿಡಿದುಕೊಂಡು ಚರ್ಚೆ ಮಾಡುತ್ತಿರುವುದು ಕಂಡು ಬಂತು. ಈ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಜನಿಕಾಂತ್ ಹಾಗೂ ಚಿರಂಜೀವಿ ಅವರು ವೇದಿಕೆ ಮೇಲೆ ಅಕ್ಕ-ಪಕ್ಕ ಕುಳಿತಿದ್ದರು. ಈ ವೇಳೆ ರಜನಿಕಾಂತ್ ಕೈನ ಚಿರಂಜೀವಿ ಅವರು ಹಿಡಿದಿದ್ದಾರೆ. ಇಬ್ಬರೂ ಪರಸ್ಪರ ಚರ್ಚೆ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ರಜನಿಕಾಂತ್ ಜೊತೆ ಅವರ ಪತ್ನಿ ಲತಾ ಕೂಡ ಇದ್ದರು. ವೇದಿಕೆ ಮೇಲೆ ಇನ್ನೂ ಪ್ರಮಾಣವಚನ ಕಾರ್ಯಕ್ರಮ ಆರಂಭ ಆಗಿರಲಿಲ್ಲ. ಆಗ ಚಿರಂಜೀವಿ ಜೊತೆ ರಜನಿಕಾಂತ್ ಚರ್ಚೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನಂದಮೂರಿ ಬಾಲಕೃಷ್ಣ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಇದ್ದರು.

ಈ ಬಾರಿ ಆಂಧ್ರ ಪ್ರದೇಶ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ 135 ಸ್ಥಾನಗಳನ್ನು ಪಡೆದಿದೆ. ಈ ಮೂಲಕ ಚಂದ್ರಬಾಬು ನಾಯ್ಡು ಆಂಧ್ರದ ಸಿಎಂ ಆಗುತ್ತಿದ್ದಾರೆ. ಅವರು ಸಿಎಂ ಆಗಿರುವುದು ನಾಲ್ಕನೇ ಬಾರಿಗೆ. ಗವರ್ನರ್ ಎಸ್ ಅಬ್ದುಲ್ ನಜೀರ್ ಅವರು ಪ್ರತಿಜ್ಞಾವಿಧಿ ಮಾಡಿಸಿದರು. ಈ ವಿಡಿಯೋಗಳು ವೈರಲ್ ಆಗುತ್ತಿದೆ. ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಆಗಮಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ರಜನಿಕಾಂತ್; ಅದೊಂದು ಕನಸು ಎಲ್ಲವನ್ನೂ ಬದಲಿಸಿತು 

ರಜನಿಕಾಂತ್ ಅವರು ಈಗ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರ ನಟನೆಯ ‘ವೆಟ್ಟೈಯನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಟಿಜಿ ಜ್ಞಾನವೇಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಅಕ್ಟೋಬರ್​ನಲ್ಲಿ ರಿಲೀಸ್ ಆಗೋ ಸಾಧ್ಯತೆ ಇದೆ. ಈ ಚಿತ್ರದ ಬಜೆಟ್ 160 ಕೋಟಿ ರೂಪಾಯಿ ಎನ್ನಲಾಗಿದೆ. ಇದಾದ ಬಳಿಕ ಅವರು ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:08 pm, Wed, 12 June 24