ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಜೈಲರ್’ ಸಿನಿಮಾ; ಮೊದಲ ದಿನದ ಕಲೆಕ್ಷನ್ ವಿವರ ಇಲ್ಲಿದೆ

Jailer Movie First Day Collection: ‘ಜೈಲರ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ‘ಜೈಲರ್’ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕರ್ನಾಟಕದಲ್ಲೂ ಭರ್ಜರಿ ಕಲೆಕ್ಷನ್ ಆಗಿದೆ.

ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದ ‘ಜೈಲರ್’ ಸಿನಿಮಾ; ಮೊದಲ ದಿನದ ಕಲೆಕ್ಷನ್ ವಿವರ ಇಲ್ಲಿದೆ
ರಜನಿ
Follow us
ರಾಜೇಶ್ ದುಗ್ಗುಮನೆ
|

Updated on: Aug 11, 2023 | 7:10 AM

ರಜನಿಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲ ದಿನ ಹಲವು ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರ, ತೆಲಂಗಾಣದಲ್ಲೂ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ ಮೊದಲ ದಿನ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ. ತಮಿಳುನಾಡು ಒಂದರಲ್ಲೇ ‘ಜೈಲರ್’ 23 ಕೋಟಿ ರೂಪಾಯಿ ಗಳಿಕೆ ಮಾಡಿದ ಎಂಬುದು ವಿಶೇಷ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಜೈಲರ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ‘ಜೈಲರ್’ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲಿ 23 ಕೋಟಿ ರೂಪಾಯಿ, ಕರ್ನಾಟಕದಲ್ಲಿ 11 ಕೋಟಿ ರೂಪಾಯಿ, ಕೇರಳದಲ್ಲಿ 5 ಕೋಟಿ ರೂಪಾಯಿ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ 10 ಕೋಟಿ ರೂಪಾಯಿ ಬಾಚಿಕೊಂಡಿದೆ. ಉಳಿದ ರಾಜ್ಯಗಳಿಂದ 3 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಸಿನಿಮಾ ಹಲವು ದಾಖಲೆ ಬರೆದಿದೆ.

ತಮಿಳುನಾಡಿನಲ್ಲಿ 2023ರಲ್ಲಿ ದೊಡ್ಡ ಓಪನಿಂಗ್ ಪಡೆದ ಸಿನಿಮಾ ಎಂಬ ಹೆಗ್ಗಳಿಕೆ ‘ಜೈಲರ್’ ಚಿತ್ರಕ್ಕೆ ಸಿಕ್ಕಿದೆ. ಕೇರಳದಲ್ಲೂ ಈ ಸಿನಿಮಾ ದೊಡ್ಡ ಓಪನಿಂಗ್ ಪಡೆದಿದೆ. ಮೋಹನ್​ಲಾಲ್ ನಟಿಸಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗಿದೆ. ಕರ್ನಾಟಕದಲ್ಲೂ ಸಿನಿಮಾ ಅಬ್ಬರಿಸಿದೆ. ಶಿವರಾಜ್​ಕುಮಾರ್ ಈ ಚಿತ್ರದಲ್ಲಿ ನಟಿಸಿರೋದು ಸಿನಿಮಾಗೆ ಮತ್ತಷ್ಟು ಬಲ ನೀಡಿದೆ.

ಇದನ್ನೂ ಓದಿ: Jailer Movie Review: ಇದು ಮಾಸ್ ಮಸಾಲ ‘ಜೈಲರ್’; ಇಷ್ಟವಾಗುತ್ತೆ ರಜನಿ, ಶಿವಣ್ಣನ ಖದರ್

ಶನಿವಾರ (ಆಗಸ್ಟ್ 12) ಹಾಗೂ ಭಾನುವಾರ (ಆಗಸ್ಟ್ 13) ಚಿತ್ರ ಒಳ್ಳೆಯ ಗಳಿಕೆ ಮಾಡಲಿದೆ. ಆಗಸ್ಟ್ 15ರಂದು ಸರ್ಕಾರಿ ರಜೆ ಇರಲಿದೆ. ಅಂದು ಕೂಡ ಸಿನಿಮಾ ಒಳ್ಳೆಯ ಗಳಿಕೆ ಮಾಡಲಿದೆ. ಹೀಗಾಗಿ, ಚಿತ್ರದ ಒಟ್ಟಾರೆ ಕಲೆಕ್ಷನ್ ನೂರಾರು ಕೋಟಿ ರೂಪಾಯಿ ಆಗಲಿದೆ. ‘ಜೈಲರ್’ ಚಿತ್ರದಲ್ಲಿ ರಜನಿಕಾಂತ್, ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್, ತಮನ್ನಾ ಮೊದಲಾದವರು ನಟಿಸಿದ್ದಾರೆ. ದಕ್ಷಿಣ ಭಾರತದ ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್