
ರಜನಿಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲ ದಿನ ಹಲವು ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರ, ತೆಲಂಗಾಣದಲ್ಲೂ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ ಮೊದಲ ದಿನ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ. ತಮಿಳುನಾಡು ಒಂದರಲ್ಲೇ ‘ಜೈಲರ್’ 23 ಕೋಟಿ ರೂಪಾಯಿ ಗಳಿಕೆ ಮಾಡಿದ ಎಂಬುದು ವಿಶೇಷ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
‘ಜೈಲರ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ‘ಜೈಲರ್’ ಚಿತ್ರ ಭಾರತದ ಬಾಕ್ಸ್ ಆಫೀಸ್ನಲ್ಲಿ ಮೊದಲ ದಿನ 52 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲಿ 23 ಕೋಟಿ ರೂಪಾಯಿ, ಕರ್ನಾಟಕದಲ್ಲಿ 11 ಕೋಟಿ ರೂಪಾಯಿ, ಕೇರಳದಲ್ಲಿ 5 ಕೋಟಿ ರೂಪಾಯಿ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ 10 ಕೋಟಿ ರೂಪಾಯಿ ಬಾಚಿಕೊಂಡಿದೆ. ಉಳಿದ ರಾಜ್ಯಗಳಿಂದ 3 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಸಿನಿಮಾ ಹಲವು ದಾಖಲೆ ಬರೆದಿದೆ.
ತಮಿಳುನಾಡಿನಲ್ಲಿ 2023ರಲ್ಲಿ ದೊಡ್ಡ ಓಪನಿಂಗ್ ಪಡೆದ ಸಿನಿಮಾ ಎಂಬ ಹೆಗ್ಗಳಿಕೆ ‘ಜೈಲರ್’ ಚಿತ್ರಕ್ಕೆ ಸಿಕ್ಕಿದೆ. ಕೇರಳದಲ್ಲೂ ಈ ಸಿನಿಮಾ ದೊಡ್ಡ ಓಪನಿಂಗ್ ಪಡೆದಿದೆ. ಮೋಹನ್ಲಾಲ್ ನಟಿಸಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗಿದೆ. ಕರ್ನಾಟಕದಲ್ಲೂ ಸಿನಿಮಾ ಅಬ್ಬರಿಸಿದೆ. ಶಿವರಾಜ್ಕುಮಾರ್ ಈ ಚಿತ್ರದಲ್ಲಿ ನಟಿಸಿರೋದು ಸಿನಿಮಾಗೆ ಮತ್ತಷ್ಟು ಬಲ ನೀಡಿದೆ.
ಇದನ್ನೂ ಓದಿ: Jailer Movie Review: ಇದು ಮಾಸ್ ಮಸಾಲ ‘ಜೈಲರ್’; ಇಷ್ಟವಾಗುತ್ತೆ ರಜನಿ, ಶಿವಣ್ಣನ ಖದರ್
ಶನಿವಾರ (ಆಗಸ್ಟ್ 12) ಹಾಗೂ ಭಾನುವಾರ (ಆಗಸ್ಟ್ 13) ಚಿತ್ರ ಒಳ್ಳೆಯ ಗಳಿಕೆ ಮಾಡಲಿದೆ. ಆಗಸ್ಟ್ 15ರಂದು ಸರ್ಕಾರಿ ರಜೆ ಇರಲಿದೆ. ಅಂದು ಕೂಡ ಸಿನಿಮಾ ಒಳ್ಳೆಯ ಗಳಿಕೆ ಮಾಡಲಿದೆ. ಹೀಗಾಗಿ, ಚಿತ್ರದ ಒಟ್ಟಾರೆ ಕಲೆಕ್ಷನ್ ನೂರಾರು ಕೋಟಿ ರೂಪಾಯಿ ಆಗಲಿದೆ. ‘ಜೈಲರ್’ ಚಿತ್ರದಲ್ಲಿ ರಜನಿಕಾಂತ್, ಶಿವರಾಜ್ಕುಮಾರ್, ಮೋಹನ್ಲಾಲ್, ಜಾಕಿ ಶ್ರಾಫ್, ತಮನ್ನಾ ಮೊದಲಾದವರು ನಟಿಸಿದ್ದಾರೆ. ದಕ್ಷಿಣ ಭಾರತದ ಪ್ರಮುಖ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ