ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ ವೀಕ್ಷಿಸಲಿದ್ದಾರೆ ರಜನಿ; ಅಯೋಧ್ಯೆಗೂ ಭೇಟಿ ನೀಡಲಿರುವ ತಲೈವಾ

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ರಜನಿಕಾಂತ್ ಅವರು ರಾಜಭವನದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಇನ್ನು ರಜನಿಕಾಂತ್ ಅವರು ಭಾನುವಾರ (ಆಗಸ್ಟ್ 19) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ ವೀಕ್ಷಿಸಲಿದ್ದಾರೆ ರಜನಿ; ಅಯೋಧ್ಯೆಗೂ ಭೇಟಿ ನೀಡಲಿರುವ ತಲೈವಾ
ಯೋಗಿ-ರಜನಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 19, 2023 | 3:10 PM

ರಜನಿಕಾಂತ್ ನಟನೆಯ ಜೈಲರ್’ ಸಿನಿಮಾ ಕೇವಲ ದಕ್ಷಿಣ ಮಾತ್ರವಲ್ಲದೆ ಉತ್ತರ ಭಾರತದಲ್ಲೂ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಸದ್ಯ ರಜನಿಕಾಂತ್ (Rajinikanth) ಅವರು ಉತ್ತರ ಪ್ರದೇಶದಲ್ಲಿದ್ದಾರೆ. ಲಖನೌನಲ್ಲಿ ತಂಗಿರುವ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ‘ಜೈಲರ್’ (Jailer Movie) ವೀಕ್ಷಣೆ ಮಾಡಲಿದ್ದಾರೆ. ಈ ವಿಚಾರವನ್ನು ಸ್ವತಃ ರಜನಿಕಾಂತ್ ಅವರೇ ಖಚಿತಪಡಿಸಿದ್ದಾರೆ.

‘ಜೈಲರ್’ ಚಿತ್ರದಲ್ಲಿ ರಜನಿ ಆ್ಯಕ್ಟಿಂಗ್ ಗಮನ ಸೆಳೆದಿದೆ. ನಿವೃತ್ತ ಜೈಲರ್ ಪಾತ್ರದಲ್ಲಿ ಅವರು ಮೋಡಿ ಮಾಡಿದ್ದಾರೆ. ಮಗನಿಗಾಗಿ ಮಿಡಿಯುವ ತಂದೆಯಾಗಿ ಅವರು ಮಿಂಚಿದ್ದಾರೆ. ಈ ಚಿತ್ರವನ್ನು ಯೋಗಿ ಆದಿತ್ಯನಾಥ್ ಕೂಡ ನೋಡಲಿದ್ದಾರೆ ಅನ್ನೋದು ವಿಶೇಷ. ಈ ಬಗ್ಗೆ ಮಾಹಿತಿ ನೀಡಿರುವ ರಜನಿಕಾಂತ್ ಅವರು, ‘ನಾನು ಸಿಎಂ ಯೋಗಿ ಆದಿತ್ಯನಾಥ್ ಜೊತೆ ಜೈಲರ್ ಸಿನಿಮಾ ವೀಕ್ಷಿಸುತ್ತೇನೆ. ದೇವರ ಆಶೀರ್ವಾದದಿಂದ ಸಿನಿಮಾ ಹಿಟ್ ಆಗಿದೆ’ ಎಂದು ರಜನಿಕಾಂತ್ ಅವರು ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ವಿಶೇಷ ಶೋನಲ್ಲಿ ಭಾಗಿ ಆಗಲಿದ್ದಾರೆ.

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ರಜನಿಕಾಂತ್ ಅವರು ರಾಜಭವನದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಇನ್ನು ರಜನಿಕಾಂತ್ ಅವರು ಭಾನುವಾರ (ಆಗಸ್ಟ್ 19) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ರಜನಿಕಾಂತ್ ಅವರು ಸದ್ಯ ಆಧ್ಯಾತ್ಮದ ಪ್ರವಾಸದಲ್ಲಿದ್ದಾರೆ. ‘ಜೈಲರ್’ ರಿಲೀಸ್​ಗೂ ಮೊದಲೇ ಅವರು ಹಿಮಾಲಯಕ್ಕೆ ತೆರಳಿದ್ದರು. ಪ್ರಮುಖ ಅಧ್ಯಾತ್ಮ ಕೇಂದ್ರಗಳಿಗೆ ಭೇಟಿ ನೀಡಿ ಅವರು ಧ್ಯಾನ ಮಾಡಿದ್ದರು. ಹಲವು ಅಧ್ಯಾತ್ಮ ಗುರುಗಳನ್ನು ಅವರು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಈ ಟ್ರಿಪ್​ನ ಭಾಗವಾಗಿ ಅವರು ಅಯೋಧ್ಯೆಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್

‘ಜೈಲರ್’ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಸನ್ ಪಿಕ್ಚರ್ಸ್ ಚಿತ್ರವನ್ನು ನಿರ್ಮಾಣ ಮಾಡಿದೆ. ಕನ್ನಡದ ನಟ ಶಿವರಾಜ್​ಕುಮಾರ್, ಮಲಯಾಳಂ ಸ್ಟಾರ್ ನಟ ಮೋಹನ್​ಲಾಲ್ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:08 pm, Sat, 19 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ