ಸಖತ್ ಶ್ರೀಮಂತ ರಜನಿಕಾಂತ್; ಒಂದು ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?  

ಫೋರ್ಬ್ಸ್ ಇಂಡಿಯಾ ವರದಿ ಪ್ರಕಾರ ರಜನಿಕಾಂತ್ ಅವರು 150ರಿಂದ 210 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಇದು ಅವರು ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ. ‘ಜೈಲರ್’ ಚಿತ್ರದ ನಟನೆಗೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. 

ಸಖತ್ ಶ್ರೀಮಂತ ರಜನಿಕಾಂತ್; ಒಂದು ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?  
ರಜಿನಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Dec 12, 2024 | 7:56 AM

ರಜನಿಕಾಂತ್ ಅವರಿಗೆ ಇಂದು (ಡಿಸೆಂಬರ್ 12) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಜೈಲರ್’ ಅಲ್ಟಿಮೇಟ್ ಹಿಟ್ ಆದರೆ, ಈ ವರ್ಷ ರಿಲೀಸ್ ಆದ ‘ವೆಟ್ಟೈಯಾನ್’ ಸಾಧಾರಣ ಯಶಸ್ಸು ಕಂಡಿದೆ. ಅವರು ಶ್ರೀಮಂತ ನಟರಲ್ಲಿ ಒಬ್ಬರು. ಅವರು ಅತಿ ಹೆಚ್ಚು ಸಂಭಾವನೆ ಪಡೆಯು ನಟರ ಸಾಲಿನಲ್ಲಿ ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಫೋರ್ಬ್ಸ್ ಇಂಡಿಯಾ ವರದಿ ಪ್ರಕಾರ ರಜನಿಕಾಂತ್ ಅವರು 150ರಿಂದ 210 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ಇದು ಅವರು ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ. ‘ಜೈಲರ್’ ಚಿತ್ರದ ನಟನೆಗೆ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ರಜನಿಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದವರು. ಆ ಬಳಿಕ ಸಿನಿಮಾ ಮಾಡುವ ಹುಮ್ಮಸ್ಸು ಅವರಿಗೆ ಬಂತು. ಈ ಕಾರಣದಿಂದಲೇ ರಜನಿಕಾಂತ್ ಅವರು ಚೆನ್ನೈಗೆ ತೆರಳಿದರು. ಅಲ್ಲಿ ಅವರ ಅದೃಷ್ಟವೇ ಬದಲಾಗಿ ಹೋಯಿತು. ರಜನಿ ಸೂಪರ್​ಸ್ಟಾರ್ ಆದರು. ತಮಿಳುನಾಡಿನಲ್ಲಿ ಅವರನ್ನು ಆರಾಧಿಸುವ ಲಕ್ಷಾಂತರ ಮಂದಿ ಇದ್ದಾರೆ.

ರಜನಿಕಾಂತ್ ಅವರ ಆಸ್ತಿ 430 ಕೋಟಿ ರೂಪಾಯಿ ಎನ್ನಲಾಗಿದೆ. ಅವರು ಪ್ರತಿ ವರ್ಷ ಹಣವನ್ನು ಸಾಕಷ್ಟು ಸಂಖ್ಯೆಯಲ್ಲಿ ಖರ್ಚು ಮಾಡುತ್ತಾರೆ. ಸಾಕಷ್ಟು ಸಾಮಾಜಿಕ ಕೆಲಸಗಳು ಅವರ ಕಡೆಯಿಂದ ಆಗಿವೆ. ಈ ಕಾರಣದಿಂದಲೂ ರಜನಿಕಾಂತ್ ಅವರು ಅನೇಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ರಜನಿಕಾಂತ್ ಅವರು ಲಕ್ಷುರಿ ಪ್ರಾಪರ್ಟಿಗಳನ್ನು ಹೊಂದಿದ್ದಾರೆ. ಚೆನ್ನೈನ ದುಬಾರಿ ಪ್ರದೇಶ ಎನಿಸಿಕೊಂಡಿರೋ ಪೋಯಿಸ್ ಗಾರ್ಡನ್​ನಲ್ಲಿ ಅವರು 2002ರಲ್ಲಿ ಮನೆ ಕಟ್ಟಿದರು. ಈ ಮನೆಯ ಬೆಲೆ 35 ಕೋಟಿ ರೂಪಾಯಿ ಆಗಿದೆ. ಅವರು ಚೆನ್ನೈನಲ್ಲಿ ಕಲ್ಯಾಣ ಮಂಟಪ ಹೊಂದಿದ್ದು, ಇದರ ಬೆಲೆ 20 ಕೋಟಿ ರೂಪಾಯಿ.

ರಜನಿಕಾಂತ್​ಗೆ ಕಾರ್​ಗಳ ಬಗ್ಗೆ ಕ್ರೇಜ್ ಇದೆ. ಅವರು ರೋಲ್ಸ್ ರಾಯ್ಸ್ ಘೋಸ್ಟ್​, ರೋಲ್ಸ್ ರಾಯ್ಸ್ ಪ್ಯಾಂಟಮ್ ಕಾರುಗಳನ್ನು ಹೊಂದಿದ್ದಾರೆ. ಇದಲ್ಲದೆ, ಬಿಎಂಡಬ್ಲ್ಯೂ ಎಕ್ಸ್​5, ಮರ್ಸಿಡೀಸ್ ಬೆಂಜ್ ಜಿ ವ್ಯಾಗನ್, ಲ್ಯಾಂಬೋರ್ಗಿನಿ ಉರುಸ್, ಬೆಂಟ್ಲಿ ರೀತಿಯ ಕಾರುಗಳು ಅವರ ಗ್ಯಾರೇಜ್​ನಲ್ಲಿ ಇವೆ. ಇದಲ್ಲದೆ ಸಾಮಾನ್ಯ ಕಾರುಗಳಾದ ಟೊಯಾಟೋ ಇನೋವಾ, ಹೊಂಡಾ ಸಿವಿ, ಪ್ರೀಮಿಯರ್ ಪದ್ಮಿನಿ, ಹಿಂದೂಸ್ತಾನ್ ಮೋಟರ್ ಅಂಬಾಸಿಡರ್ ಕಾರುಗಳ ಕಲೆಕ್ಷನ್ ಅವರ ಬಳಿ ಇದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಕಂಡಕ್ಟರ್ ಆಗಿದ್ದಾಗ ರಜನಿಕಾಂತ್​​ಗೆ ಹುಡುಗಿ ಮೇಲೆ ಮೂಡಿತ್ತು ಪ್ರೀತಿ; ಆಮೇಲೆ ಏನಾಯ್ತು?

ರಜನಿಕಾಂತ್ ಕೊನೆಯದಾಗಿ ಕಾಣಿಸಿಕೊಂಡಿದ್ದು ‘ವೆಟ್ಟೈಯಾನ್’ ಸಿನಿಮಾದಲ್ಲಿ. ಈಗ ಅವರು ‘ಕೂಲಿ’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವಾಹನ ಖರೀದಿ ಯಾವ ದಿನ, ಹೇಗೆ ಮಾಡಬೇಕು? ಇಲ್ಲಿದೆ ಜ್ಯೋತಿಷ್ಯ ಸಲಹೆ
ಹೊಸ ವಾಹನ ಖರೀದಿ ಯಾವ ದಿನ, ಹೇಗೆ ಮಾಡಬೇಕು? ಇಲ್ಲಿದೆ ಜ್ಯೋತಿಷ್ಯ ಸಲಹೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಲಾಭವಾಗಲಿದೆ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ