ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ಬೆಂಗಳೂರಿಗೆ ಬಂದು ಆಸ್ಪತ್ರೆಗೆ ಸೇರಿಸಿದ ತಲೈವಾ

ಖ್ಯಾತ ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಾಘಾತ ಆಗಿದ್ದರಿಂದ ಅವರಿಗೆ ನಾರಾಯಣ ಹೃದಯಾಲಯದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಹೋದರನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ಬೆಂಗಳೂರಿಗೆ ಬಂದು ಆಸ್ಪತ್ರೆಗೆ ಸೇರಿಸಿದ ತಲೈವಾ
Rajinikanth, Sathyanarayana Rao Gaikwad
Updated By: ಮದನ್​ ಕುಮಾರ್​

Updated on: Nov 07, 2025 | 10:50 PM

‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತ (Heart Attack) ಆಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲು ಖುದ್ದು ರಜನಿಕಾಂತ್ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ (Sathyanarayana Rao Gaikwad) ಅವರಿಗೆ ಈಗ 84 ವರ್ಷ ವಯಸ್ಸು. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಅವರನ್ನು ಈಗ ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಹೃದಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯನಾರಾಯಣ ರಾವ್ ಅವರಿಗೆ ಹೃದಯಾಘಾತ ಆಗಿರುವರಿಂದ ರಜನಿಕಾಂತ್ (Rajinikanth) ಅವರ ಕುಟುಂಬದಲ್ಲಿ ಆತಂಕ ಮೂಡಿದೆ.

ಅಣ್ಣನ ಅನಾರೋಗ್ಯದ ವಿಷಯ ತಿಳಿಯುತ್ತಿದ್ದಂತೆಯೇ ರಜನಿಕಾಂತ್ ಅವರು ಇಂದು (ನವೆಂಬರ್ 7) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅಣ್ಣನನ್ನು ಅವರೇ ಆಸ್ಪತ್ರೆಗೆ ಸೇರಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತೀವ್ರ ನಿಗಾ ಘಟಕದಲ್ಲಿ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಅವರ ಹೆಲ್ತ್ ಅಪ್​​ಡೇಟ್ ತಿಳಿಯಲು ನಿರೀಕ್ಷಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:39 pm, Fri, 7 November 25