‘ಹಲ್ಲು, ಕೂದಲು ಉದುರಿದರೂ ರಜನಿಕಾಂತ್ ನಟಿಸುತ್ತಿದ್ದಾರೆ’; ಟೀಕಿಸಿದ ಡಿಎಂಕೆ ನಾಯಕನ ಟೀಕೆ

ನಟ ರಜನೀಕಾಂತ್ ಭಾರತದ ಸೂಪರ್ ಸ್ಟಾರ್​ಗಳಲ್ಲಿ ಒಬ್ಬರು. ಕಳೆದ ವರ್ಷವಷ್ಟೆ ಒಂದು ಬ್ಲಾಕ್ ಬಸ್ಟರ್ ಸಿನಿಮಾ ಕೊಟ್ಟಿದ್ದಾರೆ. ಈಗಲೂ ಎರಡು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ರಾಜಕೀಯ ಮುಖಂಡರೊಬ್ಬರು, ರಜನೀಕಾಂತ್​ ಕೂದಲು, ಹಲ್ಲು ಉದುರಿ ಮುದುಕನಾಗಿದ್ದರೂ ನಟಿಸುತ್ತಿದ್ದಾರೆ ಎಂದಿದ್ದಾರೆ.

‘ಹಲ್ಲು, ಕೂದಲು ಉದುರಿದರೂ ರಜನಿಕಾಂತ್ ನಟಿಸುತ್ತಿದ್ದಾರೆ’; ಟೀಕಿಸಿದ ಡಿಎಂಕೆ ನಾಯಕನ ಟೀಕೆ
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Aug 28, 2024 | 9:21 PM

ನಟ ರಜನಿಕಾಂತ್ ಅವರ ತಲೆಯಲ್ಲಿ ಕೂದಲು ಇಲ್ಲ. ಆದರೆ ಸಿನಿಮಾ ಸಂದರ್ಭದಲ್ಲಿ ಅವರು ಟೋಪನ್ ಧರಿಸುತ್ತಾರೆ. 73ನೇ ವಯಸ್ಸಿನಲ್ಲೂ ರಜನಿಕಾಂತ್ ಅವರು ನಟನೆ ಮಾಡುತ್ತಿದ್ದಾರೆ. ಅವರು ಸಿನಿಮಾಗಳಲ್ಲಿ ಆ್ಯಕ್ಷನ್ ಮೆರೆಯುತ್ತಿದ್ದಾರೆ. ಈ ಮೂಲಕ ಅನೇಕರಿಗೆ ಮಾದರಿ. ಆದರೆ, ಇದನ್ನು ಕೆಲವರು ನೆಗೆಟಿವ್ ಆಗಿ ತೆಗೆದುಕೊಂಡಿದ್ದಾರೆ. ಈ ವಯಸ್ಸಿನಲ್ಲಿ ರಜನಿಕಾಂತ್ ನಟಿಸುತ್ತಿರವುದಕ್ಕೆ ಉಳಿದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ಕೆಲವರು ಹೇಳಿದ್ದಾರೆ. ಆ ಬಗ್ಗೆ ಈ ಸ್ಟೋರಿಯಲ್ಲಿ ವಿವರಣೆ ಇದೆ.

ಡಿಎಂಕೆ ನಾಯಕ ದೊರೈ ಮುರುಗನ್ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ‘ರಜನಿಕಾಂತ್ ಅವರು ಹಲ್ಲು-ಕೂದಲು ಕಳೆದುಕೊಂಡ ಬಳಿಕವೂ ನಟನೆ ಮಾಡುತ್ತಿದ್ದಾರೆ. ರಜನಿಕಾಂತ್ ಅಂಥ ವಯಸ್ಸಾದ ನಟರು ಈಗಲೂ ನಟಿಸುತ್ತಿರುವುದಕ್ಕೆ ಯುವ ಕಲಾವಿದರಿಗೆ ಸಿನಿಮಾದಲ್ಲಿ ನಟಿಸೋ ಚಾನ್ಸ್ ಸಿಗುತ್ತಿಲ್ಲ’ ಎಂದು ಹೇಳಿದ್ದರು. ದೊರೈ ಮುರುಗನ್ನು ಅವರು ಈ ರೀತಿಯ ಹೇಳಿಕೆ ನೀಡಲು ಒಂದು ಕಾರಣ ಇದೆ.

ಇದನ್ನೂ ಓದಿ:ಶಿವಣ್ಣನ ಬಳಿಕ ರಜನೀಕಾಂತ್ ಜೊತೆ ನಟಿಸಲಿದ್ದಾರೆ ಕನ್ನಡದ ಮತ್ತೊಬ್ಬ ಸ್ಟಾರ್ ನಟ

ರಜನಿಕಾಂತ್ ಅವರು ಇತ್ತೀಚೆಗೆ ಡಿಎಂಕೆ ಹಿರಿಯ ನಾಯಕರ ಬಗ್ಗೆ ಮಾತನಾಡಿದ್ದರು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದರು. ಈ ವೇಳೆ ರಜನಿಕಾಂತ್ ಅವರು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರನ್ನು ಹೊಗಳಿದ್ದರು. ಪಕ್ಷದ ಹಳೆಯ ತಲೆಗಳನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದೀರಿ ಎಂದು ಸ್ಟಾಲಿನ್ಗೆ ಹೇಳಿದ್ದರು. ಹಳೆಯ ನಾಯಕರನ್ನು ಹಳೆಯ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡಿದ್ದರು. ಹೊಸ ನಾಯಕರು ಬರೋಕೆ ಹಳೆಯ ನಾಯಕರು ಅವಕಾಶ ಮಾಡಿಕೊಡಲ್ಲ ಎಂದಿದ್ದರು. ಇದು ದುರೈ ಮುರುಗನ್ ಅವರಿಗೆ ಇಷ್ಟ ಆಗಿಲ್ಲ. ಹೀಗಾಗಿ ಅವರದ್ದೇ ಸ್ಟೈಲ್ನಲ್ಲಿ ದೊರೈ ಉತ್ತರ ನೀಡಿದ್ದಾರೆ.

ರಜನಿಕಾಂತ್ ಹಾಗೂ ಮುರುಗನ್ ಮಧ್ಯೆ ಎಲ್ಲವೂ ಸರಿ ಇದೆ ಎನ್ನಲಾಗಿದೆ. ದೊರೈ ಮುರುಗನ್ ಏನೇ ಹೇಳಿದರೂ ನನಗೆ ತೊಂದರೆ ಇಲ್ಲ ಎಂದು ರಜನಿಕಾಂತ್ ಹೇಳಿದ್ದಾರಂತೆ. ಅದೇ ರೀತಿ ರಜನಿಕಾಂತ್ ಬಗ್ಗೆ ದೊರೈ ಮುರುಗನ್ಗೆ ಯಾವುದೇ ದ್ವೇಷ ಇಲ್ಲ ಎಂದು ಹೇಳಲಾಗಿದೆ.

ರಜನಿಕಾಂತ್ ಅವರು ‘ವೆಟ್ಟೈಯನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ. ಟಿಜಿ ಜ್ಞಾನವೇಲ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಅಮಿತಾಭ್ ಬಚ್ಚನ್, ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರು ‘ಕೂಲಿ’ ಚಿತ್ರದಲ್ಲೂ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ