AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪೈರಸಿ ಮತ್ತು ವಿಡಿಯೋ ಲೀಕ್ ಹಾವಳಿ ಮುಂದುವರಿದಿದೆ. ದಳಪತಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ಲೀಕ್ ಬೆನ್ನಲ್ಲೇ ಈಗ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಜೈಲರ್ 2’ ಚಿತ್ರಕ್ಕೂ ಬಿಸಿ ತಟ್ಟಿದೆ. ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ.

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್
Rajinikanth
ಮದನ್​ ಕುಮಾರ್​
|

Updated on: Apr 17, 2026 | 9:43 PM

Share

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಶೂಟಿಂಗ್ ಸೆಟ್‌ನ ವಿಡಿಯೋವೊಂದು ಲೀಕ್ ಆಗಿದೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ತಲೆನೋವು ಶುರವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ (Sun Pictures) ಪ್ರತಿಕ್ರಿಯೆ ನೀಡಿದೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

‘ಜೈಲರ್ 2’ ಸಿನಿಮಾದ ಸೆಟ್‌ನಲ್ಲಿ ಚಿತ್ರೀಕರಿಸಲಾದ ಸಣ್ಣ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ‘ಸನ್ ಪಿಕ್ಚರ್ಸ್’ ವಕ್ತಾರರು, ‘ನಮ್ಮ ಆ್ಯಂಟಿ ಪೈರಸಿ ತಂಡವು ಪರಿಸ್ಥಿತಿಯನ್ನು ಗಮನಿಸುತ್ತಿದೆ. ಲೀಕ್ ಆಗಿರುವ ವಿಡಿಯೋಗಳನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ. ಈ ವಿಡಿಯೋಗಳನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಸಾಮಾಜಿಕ ಜಾಲತಾಣಗಳ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ವಿಶೇಷವಾಗಿ ಅಭಿಮಾನಿಗಳಿಗೆ ಮತ್ತು ಮಾಧ್ಯಮಗಳಿಗೆ ಕೂಡ ಎಚ್ಚರಿಕೆ ನೀಡಿರುವ ಸಂಸ್ಥೆಯು, ‘ಈ ವಿಡಿಯೋವನ್ನು ಹಂಚಿಕೊಳ್ಳಬೇಡಿ ಅಥವಾ ಮರುಪೋಸ್ಟ್ ಮಾಡಬೇಡಿ. ಇದರಿಂದ ನಿಮ್ಮ ಖಾತೆಗಳು ಸಸ್ಪೆಂಡ್ ಆಗಬಹುದು ಅಥವಾ ನಿರ್ಬಂಧಕ್ಕೆ ಒಳಗಾಗಬಹುದು. ಒಂದು ವೇಳೆ ಖಾತೆ ಸಸ್ಪೆಂಡ್ ಆದರೆ ಅದಕ್ಕೆ ನಿರ್ಮಾಣ ಸಂಸ್ಥೆ ಜವಾಬ್ದಾರಿಯಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ.

ಏಪ್ರಿಲ್ 9ರಂದು ನಟ ದಳಪತಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಈಗಾಗಲೇ 9 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬರು ಬೇರೆ ಸಿನಿಮಾದ ಫ್ರೀಲಾನ್ಸ್ ಅಸಿಸ್ಟೆಂಟ್ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ತಮಿಳು ಚಿತ್ರರಂಗಕ್ಕೆ ಪದೇ ಪದೇ ಲೀಕ್ ಕಾಟ ಎದುರಾಗುತ್ತಿದೆ. ದೊಡ್ಡ ದೊಡ್ಡ ಪ್ರೊಡಕ್ಷನ್ ಕಂಪನಿಗಳನ್ನೇ ಕಿಡಿಗೇಡಿಗಳು ಟಾರ್ಗೆಟ್ ಮಾಡುತ್ತಿದ್ದಾರೆ. ‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾದ ಶೂಟಿಂಗ್ ದೃಶ್ಯವನ್ನು ಸೋರಿಕೆ ಮಾಡಲಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಚಿತ್ರತಂಡಗಳಿಗೆ ತೊಂದರೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು