ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?
Hrithik Roshan, Rajinikanth

Updated on: May 27, 2026 | 10:34 PM

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿನಿಮಾ ಬಿಡುಗಡೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬೀಳುತ್ತಿವೆ. ಸದ್ಯ ಕಾಲಿವುಡ್ ಅಂಗಳದಿಂದ ಕೇಳಿಬರುತ್ತಿರುವ ಬಿಸಿಬಿಸಿ ಸುದ್ದಿಯೆಂದರೆ, ಈ ಬಿಗ್ ಬಜೆಟ್ ಚಿತ್ರದ ಒಂದು ಅತಿಥಿ ಪಾತ್ರಕ್ಕಾಗಿ ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ (Hrithik Roshan) ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ‘ಜೈಲರ್ 2’ ಚಿತ್ರತಂಡವು ಹೃತಿಕ್ ರೋಷನ್ ಅವರನ್ನು ವಿಶೇಷ ಪಾತ್ರವೊಂದಕ್ಕಾಗಿ ಸಂಪರ್ಕಿಸಿದೆ. ಆದರೆ ಚಿತ್ರತಂಡವು ಮೊದಲಿಗೆ ಈ ಪಾತ್ರಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಸಂಪರ್ಕಿಸಿತ್ತು ಎಂಬ ಮಾಹಿತಿ ಇದೆ. ಆದರೆ, ಶಾರುಖ್ ಖಾನ್ ಅವರು ಬಹುನಿರೀಕ್ಷಿತ ‘ಕಿಂಗ್’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಆಗಿರುವುದರಿಂದ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ಸಾಧ್ಯವಾಗಲಿಲ್ಲ.

ಶಾರುಖ್ ಖಾನ್ ಅವರ ಅಲಭ್ಯತೆಯಿಂದಾಗಿ, ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಈಗ ಈ ಪವರ್‌ಫುಲ್ ಪಾತ್ರಕ್ಕೆ ಹೃತಿಕ್ ರೋಷನ್ ಅವರನ್ನು ಕರೆತರಲು ಮಾತುಕತೆ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಒಂದು ವೇಳೆ ಹೃತಿಕ್ ರೋಷನ್ ಅವರು ಒಪ್ಪಿಕೊಂಡರೆ ‘ಜೈಲರ್ 2’ ಸಿನಿಮಾದ ಸ್ಟಾರ್ ಮೆರುಗು ಹೆಚ್ಚಲಿದೆ.

ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದಲ್ಲಿ ಮತ್ತೊಮ್ಮೆ ಮುತ್ತುವೇಲ್ ಪಾಂಡಿಯನ್ ಆಗಿ ಅಬ್ಬರಿಸಲಿದ್ದಾರೆ. ಮೊದಲ ಭಾಗದಲ್ಲಿದ್ದಂತೆ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಮತ್ತು ಕನ್ನಡದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಈ ಸೀಕ್ವೆಲ್‌ನಲ್ಲೂ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ ಎಂಬ ನಿರೀಕ್ಷೆ ಇದೆ. ಇದರೊಂದಿಗೆ ಈ ಬಾರಿ ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಮತ್ತು ಸೂರಜ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್

‘ಜೈಲರ್ 2’ ಚಿತ್ರದ ಅಧಿಕೃತ ಬಿಡುಗಡೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲವಾದರೂ, ಚಿತ್ರವು ಇದೇ ವರ್ಷ ಸೆಪ್ಟೆಂಬರ್ 11ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಒಂದು ವೇಳೆ ಹೃತಿಕ ರೋಷನ್ ಈ ಪ್ರಾಜೆಕ್ಟ್‌ಗೆ ಗ್ರೀನ್ ಸಿಗ್ನಲ್ ನೀಡಿದರೆ, ಚಿತ್ರದ ಹೈಪ್ ಮತ್ತೊಂದು ಹಂತಕ್ಕೆ ತಲುಪುವುದು ಖಚಿತ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us