AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಬಿಡುಗಡೆ ದಿನಾಂಕ ಮುಂದೂಡಿಕೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ನಿರ್ಮಾಪಕರು

‘ಜೈಲರ್ 2’ ಸಿನಿಮಾ ಮೇಲೆ ರಜನಿಕಾಂತ್ ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ರಿಲೀಸ್ ದಿನಾಂಕದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಆ ಬಗ್ಗೆ ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಜೈಲರ್ 2’ ಬಿಡುಗಡೆ ದಿನಾಂಕ ಮುಂದೂಡಿಕೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ನಿರ್ಮಾಪಕರು
Rajinikanth
ಮದನ್​ ಕುಮಾರ್​
|

Updated on: Sep 02, 2026 | 6:45 PM

Share

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಡಲಿದೆ ಮತ್ತು ಚಿತ್ರದ ಹಲವು ಭಾಗಗಳ ಮರು-ಚಿತ್ರೀಕರಣ ನಡೆಯುತ್ತಿದೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದೀಗ ಈ ಎಲ್ಲಾ ವದಂತಿಗಳಿಗೆ ನಿರ್ಮಾಣ ಸಂಸ್ಥೆ ‘ಸನ್ ಪಿಕ್ಚರ್ಸ್’ ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದೆ. ಈ ಸಿನಿಮಾ ಅಕ್ಟೋಬರ್‌ 15ಕ್ಕೆ ಗ್ರ್ಯಾಂಡ್ ರಿಲೀಸ್ ಆಗಲಿದೆ.

ಬುಧವಾರ (ಸೆಪ್ಟೆಂಬರ್ 2) ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಂಡಿರುವ ಸನ್ ಪಿಕ್ಚರ್ಸ್ ಸಂಸ್ಥೆಯು ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿಲ್ಲ ಎಂದು ಖಚಿತಪಡಿಸಿದೆ. ಪೋಸ್ಟರ್ ಜೊತೆಗೆ ‘ಅಕ್ಟೋಬರ್ 15ಕ್ಕೆ ಸಿನಿಮಾ ಧೂಳೆಬ್ಬಿಸಲಿದೆ’ ಎಂದು ಬರೆದುಕೊಂಡಿದೆ. ದಸರಾ ಹಬ್ಬದ ರಜಾದಿನಗಳ ಸಂದರ್ಭದಲ್ಲೇ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ, ಆರಂಭಿಕ ವಾರಾಂತ್ಯದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆ ಮಾಡುವ ನಿರೀಕ್ಷೆಯಿದೆ.

ಜುಲೈ ತಿಂಗಳಿನಲ್ಲಿ ರಜನಿಕಾಂತ್ ಅವರ ರಗಡ್ ಲುಕ್ ಮತ್ತು ಆ್ಯಕ್ಷನ್‌ನಿಂದ ಕೂಡಿದ ಟೀಸರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ದಿನಾಂಕವನ್ನು ಪ್ರಕಟಿಸಲಾಗಿತ್ತು. ರಜನಿಕಾಂತ್ ಅವರ ಜನಪ್ರಿಯ ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರವು ಹೊಸ ಮತ್ತು ಅಪಾಯಕಾರಿ ಮಿಷನ್‌ಗೆ ಹೆಜ್ಜೆ ಇಡುವುದನ್ನು ಟೀಸರ್‌ನಲ್ಲಿ ಸೂಚಿಸಲಾಗಿತ್ತು. ಆಗಸ್ಟ್‌ನಲ್ಲಿ ಅನಿರುದ್ಧ್ ರವಿಚಂದರ್ ಸಂಯೋಜನೆಯ ‘ಅಲಾ ಬೊಲೆಲೊ’ ಎಂಬ ಮೊದಲ ಪೆಪ್ಪಿ ಡ್ಯಾನ್ಸ್ ಹಾಡು ಬಿಡುಗಡೆಯಾಗಿದ್ದು, ಅದರಲ್ಲಿ ರಜನಿಕಾಂತ್ ಅವರ ಮಾಸ್ ಲುಕ್ ಅಭಿಮಾನಿಗಳಿಗೆ ಇಷ್ಟ ಆಗಿದೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಮತ್ತು ಕಲಾನಿಧಿ ಮಾರನ್ (ಸನ್ ಪಿಕ್ಚರ್ಸ್) ನಿರ್ಮಿಸಿರುವ ಈ ಚಿತ್ರವು 2023ರ ಸೂಪರ್ ಹಿಟ್ ‘ಜೈಲರ್’ ಸಿನಿಮಾದ ಸೀಕ್ವೆಲ್ ಆಗಿದೆ. ರಜನಿಕಾಂತ್ ಮತ್ತು ರಮ್ಯಾ ಕೃಷ್ಣನ್ ಮತ್ತೆ ಗಂಡ-ಹೆಂಡತಿಯಾಗಿ ಕಾಣಿಸಿಕೊಳ್ಳಲಿದ್ದು, ಯೋಗಿ ಬಾಬು, ಮಿರ್ನಾ ಹಾಗೂ ರಿತ್ವಿಕ್ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ.

ಇದನ್ನೂ ಓದಿ: ವಿಜಯ್ ಸಿಎಂ ಆಗಿ ಕಳೆಯಿತು 100 ದಿನ: ಮಾಧ್ಯಮದ ಪ್ರಶ್ನೆಗೆ ಮುಗುಳ್ನಕ್ಕು ಹೊರಟ ರಜನಿಕಾಂತ್

ಮೊದಲ ಭಾಗದಲ್ಲಿದ್ದ ಮೋಹನ್‌ಲಾಲ್, ಶಿವರಾಜ್‌ಕುಮಾರ್ ಮತ್ತು ಜಾಕಿ ಶ್ರಾಫ್ ಅವರ ಜೊತೆಗೆ ಈ ಬಾರಿ ಎಸ್‌ಜೆ ಸೂರ್ಯ, ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಸೂರಜ್ ವೆಂಜಾರಮೂಡು ಮುಂತಾದವರು ತಾರಾಗಣಕ್ಕೆ ಸೇರ್ಪಡೆಗೊಂಡಿದ್ದಾರೆ. ಹೃತಿಕ್ ರೋಷನ್ ಹಾಗೂ ವಿಜಯ್ ಸೇತುಪತಿ ಕೂಡ ವಿಶೇಷ ಪಾತ್ರದಲ್ಲಿದ್ದಾರೆ ಎಂಬ ಗಾಸಿಪ್‌ಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್