ರಜನಿಕಾಂತ್​ ಕಡೆಯಿಂದ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಖುಷಿಪಟ್ಟ ಫ್ಯಾನ್ಸ್​

| Updated By: ರಾಜೇಶ್ ದುಗ್ಗುಮನೆ

Updated on: Aug 26, 2021 | 3:00 PM

ರಜನಿಕಾಂತ್ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಈ ಕಾರಣಕ್ಕೆ ಅವರು ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿದರು. ಇದಲ್ಲದೆ, ರಜನಿ ಏಕಾಏಕಿ ಅಮೆರಿಕಕ್ಕೆ ತೆರಳಿದ್ದು ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು.

ರಜನಿಕಾಂತ್​ ಕಡೆಯಿಂದ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಖುಷಿಪಟ್ಟ ಫ್ಯಾನ್ಸ್​
ಮೆಗಾಸ್ಟಾರ್ ರಜನೀಕಾಂತ್
Follow us on

ರಜನಿಕಾಂತ್​ ಅಭಿಮಾನಿ ಬಳಗ ಹಿರಿದಾಗುತ್ತಲೇ ಇದೆ. ವಯಸ್ಸು 70 ದಾಟಿದರೂ ಅವರು ಸಿನಿಮಾ ಮಾಡುವ ಕಾಯಕವನ್ನು ನಿಲ್ಲಿಸಿಲ್ಲ. ಅನೇಕ ದಶಕಗಳಿಂದ ಸಿನಿಮಾ ರಂಗದಲ್ಲಿ ಇರುವ ಅವರು ಈಗ ‘ಅಣ್ಣಾಥೆ’ ಚಿತ್ರದ ಕೆಲಸ ಪೂರ್ಣಗೊಳಿಸಿದ್ದಾರೆ. ಇದರ ಡಬ್ಬಿಂಗ್​ ಕೆಲಸ ಪೂರ್ಣಗೊಂಡಿದ್ದು, ನವೆಂಬರ್​ನಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಈ ಮಧ್ಯೆ, ರಜನಿ 169ನೇ ಸಿನಿಮಾದ ಬಗ್ಗೆ ಹೊಸ ಅಪ್​ಡೇಟ್​ ಒಂದು ಕೇಳಿ ಬಂದಿದೆ. ಈ ಚಿತ್ರವನ್ನು ಯಾರು ನಿರ್ದೇಶನ ಮಾಡುತ್ತಿದ್ದಾರೆ ಎಂಬುದಕ್ಕೆ ಮೂಲಗಳಿಂದ ಉತ್ತರ ಸಿಕ್ಕಿದೆ.

ರಜನಿಕಾಂತ್ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಈ ಕಾರಣಕ್ಕೆ ಅವರು ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿದರು. ಇದಲ್ಲದೆ, ರಜನಿ ಏಕಾಏಕಿ ಅಮೆರಿಕಕ್ಕೆ ತೆರಳಿದ್ದು ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು. ಅಲ್ಲಿಂದ ಬಂದ ನಂತರದಲ್ಲಿ ಸೂಪರ್​ ಸ್ಟಾರ್​ ಮತ್ತೆ ಶೂಟಿಂಗ್​​ನಲ್ಲಿ ಪಾಲ್ಗೊಂಡಿದ್ದು ಅವರ ಅಭಿಮಾನಿ ಬಳಗಕ್ಕೆ ಖುಷಿ ನೀಡಿದೆ. ಈಗ ಅವರ ಫ್ಯಾನ್ಸ್​ಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ರಜನಿ 169ನೇ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಕಾರ್ತಿಕ್​ ಸುಬ್ಬರಾಜು ಸೇರಿ ಸಾಕಷ್ಟು ನಿರ್ದೇಶಕರ ಹೆಸರು ಈ ವದಂತಿ ಪಟ್ಟಿಯಲ್ಲಿದೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಂದರೆ, ರಜನಿ ಅವರು  ಖ್ಯಾತ ನಿರ್ದೇಶಕ ಪಾಂಡಿರಾಜ್​ ಜತೆ ಸಿನಿಮಾ ಮಾಡೋಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಫ್ಯಾಮಿಲಿ ಎಂಟರ್​ಟೇನ್​ಮೆಂಟ್​ ಸಿನಿಮಾಗಳನ್ನು ನಿರ್ದೇಶನ ಮಾಡೋಕೆ ಪಾಂಡಿರಾಜ್​ ಹೆಸರುವಾಸಿ. ರಜನಿ ಜತೆ ಮಾಡುತ್ತಿರುವ ಸಿನಿಮಾ ಕೂಡ ಹೀಗೆಯೇ ಇರಲಿದೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ ಎಂಬ ಸುದ್ದಿ ಜೋರಾಗಿದೆ. ಸದ್ಯ, ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬರುತ್ತಿದೆ. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​