AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ನಿಮಿಷದ ಪಾತ್ರ; ಪ್ರತಿ ನಿಮಿಷಕ್ಕೆ 1 ಕೋಟಿ ರೂ. ಸಂಭಾವನೆ: ದುಬಾರಿ ರಜನಿಕಾಂತ್​

ಫೆಬ್ರವರಿ 9ರಂದು ಬಿಡುಗಡೆ ಆಗಲಿರುವ ‘ಲಾಲ್​ ಸಲಾಂ’ ಚಿತ್ರಕ್ಕೆ ರಜನಿಕಾಂತ್​ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಮಗಳ ನಿರ್ದೇಶನದ ಸಿನಿಮಾ ಆಗಿದ್ದರೂ ಸಹ ರಜನಿಕಾಂತ್​ ಅವರು ಸಂಭಾವನೆಯಲ್ಲಿ ರಾಜಿ ಆಗಿಲ್ಲ. ಈ ಸಿನಿಮಾಗೆ ಅವರು ಬರೋಬ್ಬರಿ 40 ಕೋಟಿ ರೂಪಾಯಿ ಸಂಭಾವನೆಯನ್ನು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

40 ನಿಮಿಷದ ಪಾತ್ರ; ಪ್ರತಿ ನಿಮಿಷಕ್ಕೆ 1 ಕೋಟಿ ರೂ. ಸಂಭಾವನೆ: ದುಬಾರಿ ರಜನಿಕಾಂತ್​
ರಜನಿಕಾಂತ್​
ಮದನ್​ ಕುಮಾರ್​
|

Updated on: Feb 07, 2024 | 6:47 PM

Share

‘ಸೂಪರ್​ ಸ್ಟಾರ್​’ ರಜನಿಕಾಂತ್​ (Rajinikanth) ಅವರಿಗೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಈಗ ಅವರಿಗೆ 73 ವರ್ಷ ವಯಸ್ಸು. ಈಗಲೂ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಕಳೆದ ವರ್ಷ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ನಂತರ ಅವರ ಬೇಡಿಕೆ ಇನ್ನಷ್ಟು ಹೆಚ್ಚಾಯಿತು. ಈಗ ಅವರು ನಟಿಸಿರುವ ‘ಲಾಲ್​ ಸಲಾಂ’ (Lal Salaam) ಸಿನಿಮಾ ಬಿಡುಗಡೆ ಆಗುತ್ತಿದೆ. ಫೆಬ್ರವರಿ 9ರಂದು ಈ ಸಿನಿಮಾ ತೆರೆಕಾಣುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕಾಗಿ ರಜನಿಕಾಂತ್​ ಪಡೆದಿರುವ ಸಂಭಾವನೆ (Rajinikanth Remuneration) ಬಗ್ಗೆ ಅಂತೆ-ಕಂತೆ ಹರಿದಾಡುತ್ತಿದೆ.

ಅಂದಹಾಗೆ, ರಜನಿಕಾಂತ್​ ಅವರು ‘ಲಾಲ್​ ಸಲಾಂ’ ಸಿನಿಮಾದಲ್ಲಿ ಮಾಡಿರುವುದು ಪ್ರಧಾನ ಪಾತ್ರ ಅಲ್ಲ. ಬದಲಿಗೆ ಒಂದು ಅತಿಥಿ ಪಾತ್ರ ಮಾಡಿದ್ದಾರೆ. ಹಾಗಂತ ಇದು ಹೀಗೆ ಬಂದು ಹಾಗೆ ಮಾಯವಾಗುವ ಅತಿಥಿ ಪಾತ್ರವಲ್ಲ. ಸಿನಿಮಾದ ಒಂದಷ್ಟು ದೃಶ್ಯಗಳಲ್ಲಿ ಈ ಪಾತ್ರ ಕಾಣಿಸಿಕೊಳ್ಳಲಿದೆ. ಅಲ್ಲದೇ, ಕಥೆಗೆ ಪ್ರಮುಖ ತಿರುವುಗಳನ್ನು ಈ ಪಾತ್ರ ನೀಡುತ್ತದೆ. ಹಾಗಾಗಿ ರಜನಿಕಾಂತ್​ ಅವರು ಈ ಪಾತ್ರವನ್ನು ಒಪ್ಪಿಕೊಂಡು ನಟಿಸಿದ್ದಾರೆ.

ಇದನ್ನೂ ಓದಿ: ಮೊಯಿದ್ದೀನ್​ ಭಾಯ್​ ಆಗಿ ಧರ್ಮಗಳ ನಡುವೆ ಸಾಮರಸ್ಯ ಮೂಡಿಸಲು ಬಂದ ರಜನಿಕಾಂತ್​

ಮೊಯಿದ್ದೀನ್​ ಭಾಯ್​ ಎಂಬುದು ರಜನಿಕಾಂತ್ ಮಾಡಿರುವ ಪಾತ್ರದ ಹೆಸರು. ಆ ಪಾತ್ರದಲ್ಲಿ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ವರದಿಗಳ ಪ್ರಕಾರ, ‘ಲಾಲ್​ ಸಲಾಂ’ ಸಿನಿಮಾದಲ್ಲಿ ಈ ಪಾತ್ರ ಅಂದಾಜು 40 ನಿಮಿಷ ಬರುತ್ತದೆ. ಅದಕ್ಕಾಗಿ ಅವರು ಬರೋಬ್ಬರಿ 40 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಅಂದರೆ, ಪ್ರತಿ ನಿಮಿಷಕ್ಕೆ ಒಂದು ಕೋಟಿ ರೂಪಾಯಿ ಚಾರ್ಜ್​ ಮಾಡಿದಂತೆ ಆಗಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ.

‘ಲಾಲ್​ ಸಲಾಂ’ ಸಿನಿಮಾದ ಟ್ರೇಲರ್​:

‘ಲಾಲ್​ ಸಲಾಂ’ ಸಿನಿಮಾಗೆ ರಜನಿಕಾಂತ್​ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್​ ಅವರು ನಿರ್ದೇಶನ ಮಾಡಿದ್ದಾರೆ. ಮಗಳ ನಿರ್ದೇಶನದ ಸಿನಿಮಾ ಆಗಿದ್ದರೂ ಕೂಡ ಅವರು ಸಂಭಾವನೆಯಲ್ಲಿ ರಾಜಿ ಆಗಿಲ್ಲ. ಹಲವು ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆಯು ‘ಲಾಲ್​ ಸಲಾಂ’ ಚಿತ್ರಕ್ಕೆ ಬಂಡವಾಳ ಹೂಡಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರುವ ಕಥೆ ಈ ಸಿನಿಮಾದಲ್ಲಿ ಇದೆ ಎಂದು ಹೇಳಲಾಗುತ್ತಿದೆ. ಟ್ರೇಲರ್​ನಲ್ಲಿ ಆ ಬಗ್ಗೆ ಸುಳಿವು ಸಿಕ್ಕಿದೆ.

ಇದನ್ನೂ ಓದಿ: ‘ಸಂಘಿ ಎನ್ನುವ ಶಬ್ದ ಕೆಟ್ಟದ್ದು ಎಂದು ನನ್ನ ಮಗಳು ಹೇಳಿಲ್ಲ’; ಐಶ್ವರ್ಯಾ ಪರ ರಜನಿಕಾಂತ್ ಬ್ಯಾಟಿಂಗ್  

ಮಾಜಿ ಕ್ರಿಕೆಟರ್​ ಕಪಿಲ್​ ದೇವ್​ ಅವರು ‘ಲಾಲ್ ಸಲಾಂ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದಾರೆ. ಉಳಿದಂತೆ ವಿಷ್ಣು ವಿಶಾಲ್​, ವಿಕ್ರಾಂತ್​ ಮುಂತಾದವರು ನಟಿಸಿದ್ದಾರೆ. ಕ್ರಿಕೆಟ್​ ಹಿನ್ನೆಲೆಯಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ. ಈ ಸಿನಿಮಾವನ್ನು ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. 9 ವರ್ಷಗಳ ಬಳಿಕ ಐಶ್ವರ್ಯಾ ರಜನಿಕಾಂತ್​ ಅವರು ನಿರ್ದೇಶನ ಮಾಡಿರುವ ಸಿನಿಮಾ ಎಂಬ ಕಾರಣಕ್ಕೂ ‘ಲಾಲ್​ ಸಲಾಂ’ ಹೈಪ್​ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ