AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್ ರೋಷನ್ 25 ಕೋಟಿ ರೂ. ಸಂಭಾವನೆ ಪಡೆದಿಲ್ಲವೇ? ‘ಜೈಲರ್ 2’ ಅತಿಥಿ ಪಾತ್ರದ ಬಗ್ಗೆ ಅಪ್‌ಡೇಟ್

ಹೃತಿಕ್ ರೋಷನ್ ಅವರು ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು ಎಂದು ಈ ಮೊದಲು ಸುದ್ದಿ ಹರಿದಾಡಿತ್ತು. ಆದರೆ ಈಗ ಬೇರೆಯದೇ ಮಾಹಿತಿ ಕೇಳಿಬರುತ್ತಿದೆ. ಸಂಭಾವನೆಗಿಂತ ಹೆಚ್ಚಾಗಿ ರಜನಿಕಾಂತ್ ಮೇಲಿನ ಗೌರವಕ್ಕಾಗಿ ಹೃತಿಕ್ ರೋಷನ್ ಅವರು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡರು ಎನ್ನಲಾಗಿದೆ.

ಹೃತಿಕ್ ರೋಷನ್ 25 ಕೋಟಿ ರೂ. ಸಂಭಾವನೆ ಪಡೆದಿಲ್ಲವೇ? ‘ಜೈಲರ್ 2’ ಅತಿಥಿ ಪಾತ್ರದ ಬಗ್ಗೆ ಅಪ್‌ಡೇಟ್
Rajinikanth, Hrithik RoshanImage Credit source: PTI
ಮದನ್​ ಕುಮಾರ್​
|

Updated on: Oct 22, 2026 | 4:39 PM

Share

ಬಾಲಿವುಡ್‌ನ ‘ಗ್ರೀಕ್ ಗಾಡ್’ ಎಂದೇ ಕರೆಯಲ್ಪಡುವ ನಟ ಹೃತಿಕ್ ರೋಷನ್ ಅವರು ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರ ನಿಭಾಯಿಸಿದ್ದಾರೆ. ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡು ಭರ್ಜರಿ ಸದ್ದು ಮಾಡುತ್ತಿದ್ದಾರೆ. ಬಾಕ್ಸ್‌ಆಫೀಸ್‌ನಲ್ಲಿ 600 ಕೋಟಿ ರೂಪಾಯಿ ಕ್ಲಬ್‌ನತ್ತ ದಾಪುಗಾಲಿಡುತ್ತಿರುವ ಈ ಚಿತ್ರದಲ್ಲಿ ಹೃತಿಕ್ ನಟಿಸಲು ಬರೋಬ್ಬರಿ 25 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ವರದಿಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದವು.

ಆದರೆ ಈಗ ಈ ಸುದ್ದಿಯ ಕುರಿತು ದಿಢೀರ್ ಯು-ಟರ್ನ್ ಪಡೆದುಕೊಂಡಿರುವ ಹೊಸ ವರದಿಗಳು ಹೊರಬಂದಿವೆ. ಹೊಸ ಮೂಲಗಳ ಪ್ರಕಾರ, ಹೃತಿಕ್ ರೋಷನ್ ಯಾವುದೇ ಸಂಭಾವನೆ ಪಡೆಯದೇ ಸಂಪೂರ್ಣ ಉಚಿತವಾಗಿ ಈ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ರಜನಿಕಾಂತ್ ಮೇಲಿನ ಗೌರವ ಮತ್ತು ಕೃತಜ್ಞತೆಯ ಕಾರಣದಿಂದ ಅವರು ಒಂದು ರೂಪಾಯಿಯೂ ಹಣ ತೆಗೆದುಕೊಳ್ಳದೆ ಈ ಪಾತ್ರಕ್ಕೆ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಈಗ ವೈರಲ್ ಆಗಿದೆ.

ಹೃತಿಕ್ ರೋಷನ್ ಅವರು ತಮ್ಮ ಸಾಮಾನ್ಯ ಸಂಭಾವನೆಯಂತೆ 25 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಆರಂಭಿಕ ವರದಿಗಳು ಹೇಳಿದ್ದವು. ಆದರೆ ನಿರ್ಮಾಣ ಸಂಸ್ಥೆಯಾದ ‘ಸನ್ ಪಿಕ್ಚರ್ಸ್’ ಅಷ್ಟು ದೊಡ್ಡ ಮೊತ್ತವನ್ನು ನೀಡಲು ಹಿಂಜರಿಯಿತು ಎನ್ನಲಾಗಿದೆ. ಈ ವಿಷಯದಲ್ಲಿ ಸ್ವತಃ ರಜನಿಕಾಂತ್ ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ ಎಂದೂ ಹೇಳಲಾಗಿತ್ತು.

ಅಂತಿಮವಾಗಿ ಹೃತಿಕ್ ರೋಷನ್ ಅವರು ಸಂಭಾವನೆ ಪಡೆಯದೆ ನಟಿಸಿದರಾ ಅಥವಾ ಬೇರೆ ಒಪ್ಪಂದವಾಯಿತೇ ಎಂಬುದು ನಿರ್ಮಾಪಕರಿಗೆ ಮತ್ತು ನಟರಿಗೆ ಮಾತ್ರ ತಿಳಿದಿರುವ ಸತ್ಯ. ಮುಂದಿನ ದಿನಗಳಲ್ಲಿ ಈ ಕುರಿತು ಸ್ಪಷ್ಟನೆ ಸಿಗುವ ನಿರೀಕ್ಷೆಯಿದೆ. ಒಟ್ಟಿನಲ್ಲಿ ಹೃತಿಕ್ ರೋಷನ್ ಅವರ ಎಂಟ್ರಿಯಿಂದಾಗಿ ‘ಜೈಲರ್ 2’ ಸಿನಿಮಾದ ಸ್ಟಾರ್ ಮೆರುಗು ಹೆಚ್ಚಿದೆ.

ಇದನ್ನೂ ಓದಿ: ಬೆಂಕಿಗೆ ತುಪ್ಪ ಸುರಿಯಬೇಡಿ: ಹೃತಿಕ್ ರೋಷನ್ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್

‘ಜೈಲರ್ 2’ ಚಿತ್ರವು ಬಾಕ್ಸ್‌ಆಫೀಸ್‌ನಲ್ಲಿ ಭರ್ಜರಿ ಆರಂಭಿಕ ಯಶಸ್ಸು ಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ 59.70 ಕೋಟಿ ರೂ. ನೆಟ್ ಗಳಿಕೆ ಮಾಡಿದ ಚಿತ್ರವು, 2ನೇ ದಿನ 37.10 ಕೋಟಿ ರೂ., 3ನೇ ದಿನ 47.25 ಕೋಟಿ ರೂ. ಹಾಗೂ 4ನೇ ದಿನ 55.85 ಕೋಟಿ ರೂ. ಸಂಗ್ರಹಿಸಿದೆ.

ನಂತರದ ದಿನಗಳಲ್ಲಿ 5ನೇ ದಿನ 42.35 ಕೋಟಿ ರೂ., 6ನೇ ದಿನ 46.80 ಕೋಟಿ ರೂ. ಮತ್ತು 7ನೇ ದಿನ 28.15 ಕೋಟಿ ರೂ. ಗಳಿಸುವುದರೊಂದಿಗೆ, ಮೊದಲ ವಾರದಲ್ಲೇ ಭಾರತದಲ್ಲಿ ಒಟ್ಟು 317.20 ಕೋಟಿ ರೂ. ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ 7ನೇ ದಿನ ವಿದೇಶಿ ಮಾರುಕಟ್ಟೆಯಲ್ಲಿ 5.00 ಕೋಟಿ ರೂ. ಗಳಿಕೆ ಹಾಗೂ ಒಟ್ಟಾರೆ ಅಂತಾರಾಷ್ಟ್ರೀಯ ಗ್ರಾಸ್ 205.00 ಕೋಟಿ ರೂ. ಸೇರಿ, ಚಿತ್ರದ ಒಟ್ಟು ವಿಶ್ವಾದ್ಯಂತ ಬಾಕ್ಸ್‌ಆಫೀಸ್ ಗಳಿಕೆಯು 576.45 ಕೋಟಿ ರೂ. ತಲುಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ!
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ