AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ?

Rajinikanth movie: ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ ಎಂದು ಸುದ್ದಿ ಹರಡಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕ ಬದಲಾಯಿಸಲಾಗಿದೆ.

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ?
Rajinikanth
ಮಂಜುನಾಥ ಸಿ.
|

Updated on: May 21, 2026 | 6:02 PM

Share

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ ಎಂದು ಸುದ್ದಿ ಹರಡಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕ ಬದಲಾಯಿಸಲಾಗಿದೆ.

ಇತ್ತೀಚೆಗಷ್ಟೆ ಸಿನಿಮಾದ ಸೆಟ್​​ನಲ್ಲಿ ಅವಘಡ ನಡೆದ ಸುದ್ದಿ ಹೊರಬಿತ್ತು. ‘ಜೈಲರ್ 2’ ಸಿನಿಮಾದ ಶೂಟಿಂಗ್ ವೇಳೆ ನಡೆದ ಅವಘಡದಲ್ಲಿ ವ್ಯಕ್ತಿಯೊಬ್ಬ ನಿಧನ ಹೊಂದಿದ್ದ. ಅದರ ಬೆನ್ನಲ್ಲೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದ ಸುದ್ದಿ ಹೊರಬಿದ್ದಿದೆ. ಈಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಜೂನ್ 12 ರಂದು ಬಿಡುಗಡೆ ಆಗಬೇಕಿದ್ದ ‘ಜೈಲರ್ 2’ ಸಿನಿಮಾ ಸೆಪ್ಟೆಂಬರ್ 11 ರಂದು ಬಿಡುಗಡೆ ಆಗಲಿದೆ. ಆದರೆ ಇದು ಸಿನಿಮಾದ ಒಳಿತಿಗಾಗಿ ತೆಗೆದುಕೊಳ್ಳಲಾಗಿರುವ ನಿರ್ಣಯ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದುಬಾರಿ ವಿಲನ್ ಈ ನಟ

ಸೆಪ್ಟೆಂಬರ್ 14 ರ ಸೋಮವಾರ ಬರುವ ಗಣೇಶ ಚತುರ್ಥಿ ಹಬ್ಬದ ರಜಾದಿನಗಳ ಲಾಭವನ್ನು ಪಡೆಯಲೆಂದು ‘ಜೈಲರ್ 2’ ಸಿನಿಮಾವನ್ನು ಸೆಪ್ಟೆಂಬರ್ 11 ರಂದು ಬಿಡುಗಡೆ ಮಾಡಲಾಗುತ್ತಿದೆ. ಹಬ್ಬ ಇರುವ ಕಾರಣ ಸತತ 4 ದಿನಗಳ ಲಾಂಗ್ ವೀಕೆಂಡ್ ಸಿಗಲಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಇನ್ನೂ ಹಲವು ರಾಜ್ಯಗಳಲ್ಲಿ ಗಣೇಶ ಹಬ್ಬದ ಸಾರ್ವಜನಿಕ ರಜೆ ಇರುವುದರಿಂದ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಮಾಡಲು ಇದು ಸಹಕಾರಿಯಾಗಲಿದೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಜನಿಕಾಂತ್ ಅವರು ಮತ್ತೊಮ್ಮೆ ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. 2023 ರ ಬ್ಲಾಕ್‌ಬಸ್ಟರ್ ‘ಜೈಲರ್’ ಚಿತ್ರದ ಮುಂದುವರಿದ ಭಾಗವಾಗಿರುವ ಈ ಸೀಕ್ವೆಲ್‌ನಲ್ಲಿ ದೊಡ್ಡ ತಾರಾಬಳಗವೇ ಇದೆ. ಮೊದಲ ಭಾಗದಲ್ಲಿದ್ದ ಶಿವರಾಜ್‌ಕುಮಾರ್ ಮತ್ತು ಮೋಹನ್‌ಲಾಲ್ ಈ ಚಿತ್ರದಲ್ಲೂ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ. ಇವರ ಜೊತೆಗೆ ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಮತ್ತು ಕಮಲ್ ಹಾಸನ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರ ಸಂಗೀತವಿದೆ. ಸಿನಿಮಾನಲ್ಲಿ ಶಾರುಖ್ ಖಾನ್ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಆ ಸುದ್ದಿ ಖಾತ್ರಿ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ