ರಜನಿಕಾಂತ್ ನಟನೆಯ ‘ಲಾಲ್ ಸಲಾಂ’ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗತ್ತಾ? ಗೊಂದಲ ಶುರು
2024ರ ಸಂಕ್ರಾಂತಿ ಹಬ್ಬದ ವೇಳೆಗೆ ರಜನಿಕಾಂತ್ ನಟನೆಯ ‘ಲಾಲ್ ಸಲಾಂ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಆದರೆ ಅದು ಸಾಧ್ಯವಾಗತ್ತೋ ಅಥವಾ ಇಲ್ಲವೋ ಎಂಬ ಅನುಮಾನ ಈಗ ಮೂಡಿದೆ. ಕೆಲವು ವರದಿಗಳ ಪ್ರಕಾರ ‘ಲಾಲ್ ಸಲಾಂ’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ.

‘ಸೂಪರ್ ಸ್ಟಾರ್’ ರಜನಿಕಾಂತ್ (Rajinikanth) ಅವರು ಸಖತ್ ಬ್ಯುಸಿ ಆಗಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇದ್ದು, ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. 2024ರ ಆರಂಭದಲ್ಲೇ ಅವರ ‘ಲಾಲ್ ಸಲಾಂ’ (Lal Salaam) ಸಿನಿಮಾ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕಾದಿದ್ದಾರೆ. ಆದರೆ ಅದು ಸಾಧ್ಯವಾಗತ್ತೋ ಇಲ್ಲವೋ ಎಂಬ ಅನುಮಾನ ಈಗ ಮೂಡಿದೆ. ಕೆಲವು ವರದಿಗಳ ಪ್ರಕಾರ ‘ಲಾಲ್ ಸಲಾಂ’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ. 2024ರ ಸಂಕ್ರಾಂತಿಗೆ ಈ ಸಿನಿಮಾ ರಿಲೀಸ್ ಆಗುವುದು ಅನುಮಾನ ಎನ್ನಲಾಗುತ್ತಿದೆ.
‘ಲಾಲ್ ಸಲಾಂ’ ಸಿನಿಮಾಗೆ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಜನಿಗೆ ಡಿಫರೆಂಟ್ ಆದಂತಹ ಗೆಟಪ್ ಇದೆ. ಇತ್ತೀಚೆಗೆ ತಲೈವ ಜನ್ಮದಿನದ ಪ್ರಯುಕ್ತ ಹೊಸ ಟೀಸರ್ ಬಿಡುಗಡೆ ಮಾಡಲಾಗಿತ್ತು. ಆದಷ್ಟು ಬೇಗ ಈ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ರಜನಿಕಾಂತ್ ಫ್ಯಾನ್ಸ್ ಆಸೆ ಇಟ್ಟುಕೊಂಡಿದ್ದಾರೆ. ಆದರೆ ರಿಲೀಸ್ ದಿನಾಂಕದ ಮುಂದೂಡಿಕೆ ಬಗ್ಗೆ ಗಾಸಿಪ್ ಶುರುವಾಗಿದೆ.
2024ರ ಸಂಕ್ರಾಂತಿ ಹಬ್ಬದ ವೇಳೆಗೆ ‘ಲಾಲ್ ಸಲಾಂ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಆದರೆ ಹಬ್ಬದ ಸಂದರ್ಭದಲ್ಲಿ ಸ್ಟಾರ್ ನಟರ ಬೇರೆ ಬೇರೆ ಸಿನಿಮಾಗಳು ಕೂಡ ಬಿಡುಗಡೆ ಆಗುತ್ತಿವೆ. ಇದೇ ವೇಳೆ ‘ಲಾಲ್ ಸಲಾಂ’ ಕೂಡ ಬಿಡುಗಡೆಯಾದರೆ ಚಿತ್ರಮಂದಿರದ ಕೊರತೆ ಉಂಟಾಗಲಿದೆ. ಆ ಕಾರಣದಿಂದಲೇ ‘ಲಾಲ್ ಸಲಾಂ’ ರಿಲೀಸ್ ಡೇಟ್ ಮುಂದೂಡಿಕೆ ಆಗಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: ರಜನಿಕಾಂತ್ ಹೊಸ ಸಿನಿಮಾ ಹೆಸರು ‘ವೆಟ್ಟೈಯನ್’; ಧೂಳೆಬ್ಬಿಸಿದ ಟೈಟಲ್ ಟೀಸರ್
‘ಲಾಲ್ ಸಲಾಂ’ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಗಿರುವ ಬಗ್ಗೆ ಚಿತ್ರತಂಡದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇದೇ ಸಂಸ್ಥೆಯ ‘ವೆಟ್ಟೈಯಾನ್’ ಸಿನಿಮಾದಲ್ಲೂ ರಜನಿಕಾಂತ್ ನಟಿಸುತ್ತಿದ್ದಾರೆ. ಅದು ಅವರ 170ನೇ ಸಿನಿಮಾ ಎಂಬುದು ವಿಶೇಷ. ಆ ಚಿತ್ರಕ್ಕೆ ಟಿ.ಜೆ. ಜ್ಞಾನವೇಲ್ ನಿರ್ದೇಶನ ಮಾಡುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




