AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ

‘ಲಾಲ್​ ಸಲಾಂ’ ಸಿನಿಮಾದ ಟೀಸರ್​ ನವೆಂಬರ್​ 12ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಮೊಯಿದ್ದೀನ್​ ಭಾಯ್​ ಎಂಬ ಮುಂಬೈ ಮೂಲದ ಗ್ಯಾಂಗ್​ಸ್ಟರ್​ ಪಾತ್ರ ಮಾಡುತ್ತಿದ್ದಾರೆ. ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಎ.ಆರ್​. ರೆಹಮಾನ್​ ಸಂಗೀತ ನಿರ್ದೇಶನ ಮಾಡುತ್ತಿದಾರೆ.

ರಜನಿಕಾಂತ್​ ನಟನೆಯ ‘ಲಾಲ್​ ಸಲಾಂ’ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಇಲ್ಲ ಬದಲಾವಣೆ
ರಜನಿಕಾಂತ್
ಮದನ್​ ಕುಮಾರ್​
|

Updated on: Nov 11, 2023 | 7:29 AM

Share

ನಟ ರಜನಿಕಾಂತ್ (Rajinikanth) ಅವರು ಬ್ಯಾಕ್ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಆ ಪೈಕಿ ‘ಲಾಲ್​ ಸಲಾಂ’ ಸಿನಿಮಾದ ಮೇಲೆ ಹೆಚ್ಚು ನಿರೀಕ್ಷೆ ಮೂಡಿದೆ. ಯಾಕೆಂದರೆ, ಈ ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದು ರಜನಿಕಾಂತ್​ ಅವರ ಪುತ್ರಿ ಐಶ್ವರ್ಯಾ. ಈ ಮೊದಲು ಐಶ್ವರ್ಯಾ ರಜನಿಕಾಂತ್​ ಅವರು ಧನುಶ್​ ನಟನೆಯ ‘3’ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಈಗ ‘ಲಾಲ್​ ಸಲಾಂ’ (Lal Salaam Movie) ಜೊತೆ ಬರುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ಬಗ್ಗೆ ಒಂದು ಗಾಸಿಪ್​ ಕೇಳಿಬಂದಿತ್ತು. ಈ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಬಹುದು ಎಂದು ಹೇಳಲಾಗಿತ್ತು. ಆದರೆ ಆ ರೀತಿ ಆಗುತ್ತಿಲ್ಲ. ಚಿತ್ರತಂಡದಿಂದ ‘ಲಾಲ್​ ಸಲಾಂ’ ಟೀಸರ್ (Lal Salaam Teaser)​ ಬಗ್ಗೆ ಅಧಿಕೃತವಾಗಿ ಮಾಹಿತಿ ಸಿಕ್ಕಿದೆ.

ಕ್ರಿಕೆಟ್​ ಮತ್ತು ಕೋಮುವಾದದ ಬಗ್ಗೆ ‘ಲಾಲ್​ ಸಲಾಂ’ ಸಿನಿಮಾದಲ್ಲಿ ಹೇಳಲಾಗುವುದು ಎಂಬ ಮಾಹಿತಿ ಇದೆ. ರಜನಿಕಾಂತ್​ ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರ ಜೊತೆ ವಿಷ್ಣು ವಿಶಾಲ್​ ಮತ್ತು ವಿಕ್ರಾಂತ್​ ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಇನ್ನೂ ವಿಶೇಷ ಏನೆಂದರೆ ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಕಪಿಲ್​ ದೇವ್​ ಕೂಡ ಇದರಲ್ಲಿ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅಭಿಮಾನಿಗಳ ವಲಯದಲ್ಲಿ ‘ಲಾಲ್​ ಸಲಾಂ’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ.

2024ರ ಸಂಕ್ರಾಂತಿ ವೇಳೆಗೆ ‘ಲಾಲ್​ ಸಲಾಂ’ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಹಾರ್ಡ್​ ಡಿಸ್ಕ್​ನಲ್ಲಿದ್ದ ರಜನಿಕಾಂತ್ ಅವರ ದೃಶ್ಯಗಳು ಮಿಸ್ಸಿಂಗ್ ಆಗಿವೆ ಎಂದು ಗಾಸಿಪ್​ ಹಬ್ಬಿತ್ತು. ಆ ಕಾರಣದಿಂದ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಗಾಸಿಪ್​ ಮಂದಿ ಮಾತನಾಡಿಕೊಂಡಿದ್ದರು. ಆದರೆ ಈಗ ಚಿತ್ರತಂಡದವರು ಟೀಸರ್​ ರಿಲೀಸ್​ ದಿನಾಂಕವನ್ನು ತಿಳಿಸಿದ್ದಾರೆ. ಸಿನಿಮಾದ ಬಿಡುಗಡೆ ಬಗ್ಗೆ ಮಾಹಿತಿ ಇರುವ ಹೊಸ ಪೋಸ್ಟರ್​ ಕೂಡ ಹಂಚಿಕೊಂಡಿದ್ದಾರೆ. ಆ ಮೂಲಕ ಗಾಸಿಪ್​ಗೆ ಫುಲ್​ ಸ್ಟಾಪ್​ ಹಾಕಿದ್ದಾರೆ.

ಇದನ್ನೂ ಓದಿ: ‘ನನ್ನ ಗುರು ಜೊತೆ ಮತ್ತೆ ಕೆಲಸ ಮಾಡುತ್ತಿದ್ದೇನೆ’: ಅಮಿತಾಭ್​ ಬಗ್ಗೆ ರಜನಿಕಾಂತ್​ ಗೌರವದ ಮಾತು

‘ಲಾಲ್​ ಸಲಾಂ’ ಸಿನಿಮಾದ ಟೀಸರ್​ ನವೆಂಬರ್​ 12ರಂದು ಬೆಳಗ್ಗೆ 10.45ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ರಜನಿಕಾಂತ್​ ಅವರು ಮೊಯಿದ್ದೀನ್​ ಭಾಯ್​ ಎಂಬ ಮುಂಬೈ ಮೂಲದ ಗ್ಯಾಂಗ್​ಸ್ಟರ್​ ಪಾತ್ರ ಮಾಡುತ್ತಿದ್ದಾರೆ. ಟೀಸರ್​ ಬಿಡುಗಡೆ ಆದ ಬಳಿಕ ಸಿನಿಮಾದ ಕಥೆಯ ಬಗ್ಗೆ ಇನ್ನಷ್ಟು ಸುಳಿವು ಸಿಗಲಿದೆ. ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಎ.ಆರ್​. ರೆಹಮಾನ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದಾರೆ. ಈ ಸಿನಿಮಾ ತಮಿಳು, ಹಿಂದಿ, ಕನ್ನಡ, ಮಲಯಾಳಂ ಹಾಗೂ ತೆಲುಗಿನಲ್ಲಿ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್