‘ವೆಟ್ಟೈಯಾನ್’ ಸಿನಿಮಾ ಮೊದಲ ದಿನ ಗಳಿಸಿದ್ದು ಇಷ್ಟೇನಾ? ಇಲ್ಲಿದೆ ವಿವರ

‘ವೆಟ್ಟೈಯಾನ್’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 30 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳಿನಿಂದ ಈ ಚಿತ್ರಕ್ಕೆ ಸಿಕ್ಕಿರೋದು ಕೇವಲ 26 ಕೋಟಿ ರೂಪಾಯಿ. ತೆಲುಗಿನಲ್ಲಿ 3.2 ಕೋಟಿ ರೂಪಾಯಿ, ಹಿಂದಿಯಲ್ಲಿ ಕೇವಲ 60 ಲಕ್ಷ ರೂಪಾಯಿ ಗಳಿಕೆ ಆಗಿದೆ.

‘ವೆಟ್ಟೈಯಾನ್’ ಸಿನಿಮಾ ಮೊದಲ ದಿನ ಗಳಿಸಿದ್ದು ಇಷ್ಟೇನಾ? ಇಲ್ಲಿದೆ ವಿವರ
ವೆಟ್ಟೈಯಾನ್
Follow us
|

Updated on: Oct 11, 2024 | 10:15 AM

ರಜನಿಕಾಂತ್, ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ನಟನೆಯ ‘ವೆಟ್ಟೈಯನ್’ ಸಿನಿಮಾ ಮೊದಲ ದಿನ ಸಾಧಾರಣ ಗಳಿಕೆ ಮಾಡಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ, ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದಿದೆ. ಈ ಕಾರಣದಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಈ ಚಿತ್ರ ಮೊದಲ ದಿನ ಕಲೆಕ್ಷನ್ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ವೆಟ್ಟೈಯಾನ್’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 30 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳಿನಿಂದ ಈ ಚಿತ್ರಕ್ಕೆ ಸಿಕ್ಕಿರೋದು ಕೇವಲ 26 ಕೋಟಿ ರೂಪಾಯಿ. ತೆಲುಗಿನಲ್ಲಿ 3.2 ಕೋಟಿ ರೂಪಾಯಿ, ಹಿಂದಿಯಲ್ಲಿ ಕೇವಲ 60 ಲಕ್ಷ ರೂಪಾಯಿ ಗಳಿಕೆ ಆಗಿದೆ. ಕನ್ನಡದಲ್ಲಿ ಕೇವಲ 5 ಲಕ್ಷ ರೂಪಾಯಿ ವ್ಯವಹಾರ ಆಗಿದೆ. 30 ಕೋಟಿ ರೂಪಾಯಿ ಎಂದರೆ ಅದು ದೊಡ್ಡ ಮೊತ್ತವೇ. ಆದರೆ, ರಜನಿಕಾಂತ್​ಗೆ ಇರೋ ಹೈಪ್​ಗೆ ಅದು ಕಡಿಮೆ.

ಅಮಿತಾಭ್ ಬಚ್ಚನ್ ಅವರು ‘ವೆಟ್ಟೈಯನ್’ ಚಿತ್ರದಲ್ಲಿ ನಟಿಸಿದ್ದಾರೆ. ಅವರು ನಟಿಸಿದ ಕಾರಣಕ್ಕೆ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಬೇಕಿತ್ತು. ಆದರೆ, ಚಿತ್ರವು ಹಿಂದಿಯಲ್ಲೂ ಅಂಥ ದೊಡ್ಡ ಹವಾ ಸೃಷ್ಟಿ ಮಾಡಿಲ್ಲ. ಇದು ತಂಡದ ಬೇಸರ ಹೆಚ್ಚಿಸಿದೆ. ಇಂದು (ಅಕ್ಟೋಬರ್ 11) ದಸರಾ ಪ್ರಯುಕ್ತ ರಜಾ ಇದೆ. ಇಂದು ಸಿನಿಮಾ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಲಿದೆಯೇ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ರತನ್ ಟಾಟಾಗೆ ತಲೆಬಾಗಿ ನಮಸ್ಕಾರ ಮಾಡಿದ್ದ ರಜನಿಕಾಂತ್; ನೆನಪು ಹಂಚಿಕೊಂಡ ಸೂಪರ್ ಸ್ಟಾರ್

ಹಲವು ವರ್ಷಗಳ ಬಳಿಕ ಅಮಿತಾಭ್ ಬಚ್ಚನ್ ಹಾಗೂ ರಜನಿಕಾಂತ್ ಅವರು ‘ವೆಟ್ಟೈಯಾನ್’ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರವನ್ನು ಇನ್ನೂ ಉತ್ತಮವಾಗಿ ಮಾಡಬಹುದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ