‘ಲಾಲ್ ಸಲಾಂ’ ಸೋಲಿನ ನಡುವೆ ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ ರಜನಿಕಾಂತ್
‘ಲಾಲ್ ಸಲಾಂ’ ಸಿನಿಮಾಗೆ ಬಂಡವಾಳ ಹೂಡಿರುವ ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆಯೇ ‘ವೆಟ್ಟೈಯನ್’ ಚಿತ್ರವನ್ನು ನಿರ್ಮಿಸುತ್ತಿದೆ. ‘ಈ ಚಿತ್ರಕ್ಕೆ ಶೇಕಡ 80 ಭಾಗ ಚಿತ್ರೀಕರಣ ಮುಕ್ತಾಯ ಆಗಿದೆ. ಉಳಿದ ಶೇ.20 ಭಾಗ ಕೆಲಸಗಳು ಭರದಿಂದ ಸಾಗುತ್ತಿವೆ’ ಎಂದು ರಜನಿಕಾಂತ್ ಮಾಹಿತಿ ಹಂಚಿಕೊಂಡಿದ್ದಾರೆ. ಇದು ಅವರ 170ನೇ ಸಿನಿಮಾ ಎಂಬುದು ವಿಶೇಷ.
ನಟ ರಜನಿಕಾಂತ್ (Rajinikanth) ಅಭಿನಯದ ‘ಲಾಲ್ ಸಲಾಂ’ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಈ ಸಿನಿಮಾದಲ್ಲಿ ಅವರು ಡಿಫರೆಂಟ್ ಆದಂತಹ ಪಾತ್ರ ಮಾಡಿದ್ದರು ಎಂಬ ಕಾರಣಕ್ಕೆ ನಿರೀಕ್ಷೆ ಹೆಚ್ಚಿತ್ತು. ಈ ಸಿನಿಮಾಗೆ ನಿರ್ದೇಶನ ಮಾಡಿದ್ದು ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್. ಗಲ್ಲಾಪೆಟ್ಟಿಗೆಯಲ್ಲಿ ಮೋಡಿ ಮಾಡಲು ಈ ಸಿನಿಮಾ ವಿಫಲ ಆಗಿದೆ. ಮೊದಲ ದಿನ ‘ಲಾಲ್ ಸಲಾಂ’ (Lal Salaam) ಸಿನಿಮಾ ಗಳಿಸಿದ್ದು ಕೇವಲ 4 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಈ ನಡುವೆ ರಜನಿಕಾಂತ್ ಅವರು ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ‘ವೆಟ್ಟೈಯನ್’ (Vettaiyan) ಚಿತ್ರದ ಶೂಟಿಂಗ್ ಹೇಗೆ ಸಾಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಜನಿಕಾಂತ್ ಅವರು ತಮ್ಮ ಸಿನಿಮಾಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ‘ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಲಾಲ್ ಸಲಾಂ ಸಿನಿಮಾದ ತಂಡದವರು ನನಗೆ ಹೇಳಿದ್ದಾರೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಹಾಗೂ ನಿರ್ದೇಶನ ಮಾಡಿದ ಐಶ್ವರ್ಯಾಗೆ ಧನ್ಯವಾದಗಳು’ ಎಂದಿದ್ದಾರೆ ರಜನಿಕಾಂತ್.
ಇದನ್ನು ಓದಿ: ಪ್ರೇಕ್ಷಕರೇ ಇಲ್ಲದೇ ರಜನಿಕಾಂತ್ ಸಿನಿಮಾ ಕ್ಯಾನ್ಸಲ್; ‘ಲಾಲ್ ಸಲಾಂ’ ಚಿತ್ರಕ್ಕೆ ಹಿನ್ನಡೆ
‘ಲಾಲ್ ಸಲಾಂ’ ನಿರ್ಮಾಣ ಮಾಡಿರುವ ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆಯೇ ‘ವೆಟ್ಟೈಯನ್’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ‘ಈ ಸಿನಿಮಾಗೆ ಶೇಕಡ 80ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಇನ್ನುಳಿದ ಶೇಕಡ 20ರಷ್ಟು ಕೆಲಸಗಳು ಭರದಿಂದ ಸಾಗುತ್ತಿವೆ’ ಎಂದು ರಜನಿಕಾಂತ್ ಮಾಹಿತಿ ನೀಡಿದ್ದಾರೆ. ಇದು ಅವರು ನಟಿಸುತ್ತಿರುವ 170ನೇ ಸಿನಿಮಾ. ಟೈಟಲ್ ಟೀಸರ್ ನೋಡಿದ ಎಲ್ಲರೂ ಈಗಾಗಲೇ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾಗೆ ‘ಜೈ ಭೀಮ್’ ಖ್ಯಾತಿಯ ಟಿ.ಜೆ. ಜ್ಞಾನವೇಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ.
ಇದನ್ನು ಓದಿ: 40 ನಿಮಿಷದ ಪಾತ್ರ; ಪ್ರತಿ ನಿಮಿಷಕ್ಕೆ 1 ಕೋಟಿ ರೂ. ಸಂಭಾವನೆ: ದುಬಾರಿ ರಜನಿಕಾಂತ್
2023ರಲ್ಲಿ ಬಂದ ‘ಜೈಲರ್’ ಸಿನಿಮಾದಿಂದ ರಜನಿಕಾಂತ್ ಅವರಿಗೆ ದೊಡ್ಡ ಗೆಲುವು ಸಿಕ್ಕಿತ್ತು. ಹಾಗಾಗಿ ‘ಲಾಲ್ ಸಲಾಂ’ ಸಿನಿಮಾ ಕೂಡ ಸೂಪರ್ ಹಿಟ್ ಆಗಬಹುದು ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿ ಆಯಿತು. ಹಾಗಿದ್ದರೂ ರಜನಿಕಾಂತ್ ಅವರಿಗೆ ಇರುವ ಡಿಮ್ಯಾಂಡ್ ಕಡಿಮೆ ಆಗಿಲ್ಲ. 73ನೇ ವಯಸ್ಸಿನಲ್ಲೂ ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಅನೇಕ ನಿರ್ದೇಶಕರು, ನಿರ್ಮಾಪಕರು ರಜನಿಕಾಂತ್ ಜೊತೆ ಸಿನಿಮಾ ಮಾಡಲು ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ