AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಸಿನಿಮಾದ ನಿರ್ದೇಶಕನ ಮೇಲೆ ರಜನೀಕಾಂತ್ ಮುನಿಸು?

ಸಿನಿಮಾ ನಿರ್ದೇಶನದ ವೇಳೆ ಅವರು ರಜನೀಕಾಂತ್ ಅವರ ಜೊತೆಗೆ ಮುನಿಸು ಮೂಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಮಲ್ ಹಾಸನ್ ನಿರ್ಮಾಣ ಮಾಡಿ, ರಜನೀಕಾಂತ್ ನಾಯಕನಾಗಿ ನಟಿಸುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಸೆಟ್‌ಗಳಲ್ಲಿ ನಾಯಕ ನಟ ರಜನಿಕಾಂತ್ ಹಾಗೂ ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ಕೆಲ ವರದಿ ಹಬ್ಬಿದೆ.

ತಮ್ಮದೇ ಸಿನಿಮಾದ ನಿರ್ದೇಶಕನ ಮೇಲೆ ರಜನೀಕಾಂತ್ ಮುನಿಸು?
Rajinikanth Movie
ಮಂಜುನಾಥ ಸಿ.
|

Updated on:Oct 11, 2026 | 8:04 PM

Share

ಮುಖ್ಯಾಂಶಗಳು

  • ರಜನೀಕಾಂತ್ ನಟಿಸುತ್ತಿರುವ ಹೊಸ ಸಿನಿಮಾ ‘ಧರ್ಮನ್’
  • ‘ಧರ್ಮನ್’ ನಿರ್ದೇಶಕನ ಜೊತೆಗೆ ರಜನಿ ಭಿನ್ನಾಭಿಪ್ರಾಯ
  • ಈ ಬಗ್ಗೆ ರಜನೀಕಾಂತ್ ತಂಡದಿಂದ ಸ್ಪಷ್ಟನೆ

ರಜನಿಕಾಂತ್ ನಟಿಸುವ ಸಿನಿಮಾ ಅನ್ನು ನಿರ್ದೇಶನ ಮಾಡುವುದು ದೇಶದ ಹಲವು ನಿರ್ದೇಶಕರ ಕನಸು. ಅಂಥಹಾ ಅವಕಾಶ ಹಲವರಲ್ಲಿ ಕೆಲವರಿಗಷ್ಟೆ ಸಿಗುತ್ತದೆ. ಅಂಥಹುದೇ ಅವಕಾಶ ತಮಿಳಿನ ಹೊಸ ನಿರ್ದೇಶಕ ಅಶ್ವತ್ಥ್ ಮಾರಿಮುತ್ತುಗೆ ಲಭಿಸಿದೆ. ಆದರೆ ಸಿನಿಮಾ ನಿರ್ದೇಶನದ ವೇಳೆ ಅವರು ರಜನೀಕಾಂತ್ ಅವರ ಜೊತೆಗೆ ಮುನಿಸು ಮೂಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಮಲ್ ಹಾಸನ್ ನಿರ್ಮಾಣ ಮಾಡಿ, ರಜನೀಕಾಂತ್ ನಾಯಕನಾಗಿ ನಟಿಸುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಸೆಟ್‌ಗಳಲ್ಲಿ ನಾಯಕ ನಟ ರಜನಿಕಾಂತ್ ಹಾಗೂ ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ಕೆಲ ವರದಿ ಹಬ್ಬಿದೆ.

ಅಶ್ವಥ್ ಮಾರಿಮುತ್ತು ನಿರ್ದೇಶನದ ‘ಧರ್ಮನ್’ ಚಿತ್ರದ ಚಿತ್ರೀಕರಣದ ವೇಳೆ ರಜನಿಕಾಂತ್ ಹಾಗೂ ನಿರ್ದೇಶಕರ ನಡುವೆ ವೈಮನಸ್ಸು ಮೂಡಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ರಜನಿಕಾಂತ್ ಅವರ ಆಪ್ತ ತಂಡ, ಈ ವಾದಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಚಿತ್ರದ ಶೂಟಿಂಗ್ ಸೆಟ್‌ನಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅತ್ಯಂತ ಖುಷಿಯಿಂದ ಹಾಗೂ ಆರಾಮದಾಯಕ ವಾತಾವರಣದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಂಡ ತಿಳಿಸಿದೆ. “ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರ ಕ್ರಿಯಾಶೀಲ ಹಾಗೂ ವಿಭಿನ್ನ ಕೆಲಸದ ಶೈಲಿಯಿಂದಾಗಿ ರಜನಿಕಾಂತ್ ಅವರು ಶೂಟಿಂಗ್ ವೇಳೆಯಲ್ಲಿ ಅತ್ಯಂತ ಹಾಯಾಗಿ ಮತ್ತು ಸಂತೋಷದಿಂದ ಇರುವುದನ್ನು ನಾನು ಹಲವು ದಿನಗಳ ಕಾಲ ಹತ್ತಿರದಿಂದ ನೋಡಿದ್ದೇನೆ” ಎಂದು ರಜನೀ ಅವರ ಆಪ್ತರು ಹೇಳಿದ್ದಾರೆ.

ಅಲ್ಲದೆ, ಚಿತ್ರದ ಕೆಲಸಗಳು ಯಾವುದೇ ತೊಂದರೆಯಿಲ್ಲದೆ ಅತ್ಯಂತ ವೇಗವಾಗಿ ಮತ್ತು ಅತ್ಯುತ್ತಮ ರೀತಿಯಲ್ಲಿ ಮುನ್ನಡೆಯುತ್ತಿವೆ ಎಂದು ತಿಳಿಸುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆಯಲಾಗಿದೆ. ಇತ್ತೀಚೆಗಷ್ಟೆ ಈ ಸಿನಿಮಾದ ಚಿತ್ರೀಕರಣ ಮೈಸೂರಿನ ಬಳಿ ನಡೆದಿದೆ. ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್, ಕನ್ನಡದ ನಟಿ ಶ್ರೀಲೀಲಾ ಸೇರಿದಂತೆ ಇನ್ನೂ ಹಲವು ನಟ-ನಟಿಯರು ಭಾಗವಹಿಸಿದ್ದರು.

ಇದನ್ನೂ ಓದಿ:‘ಶ್ರೀರಾಮನನ್ನು ಸಲ್ಮಾನ್, ರಜನಿಕಾಂತ್ ತರ ತೋರಿಸಿದ್ದಾರೆ’: ‘ರಾಮಾಯಣ’ ಸಿನಿಮಾ ವಿರುದ್ಧ ಮುಕೇಶ್ ಖನ್ನಾ ಕಿಡಿ

‘ಧರ್ಮನ್’ ಸಿನಿಮಾನಲ್ಲಿ ರಜನೀಕಾಂತ್ ಅವರು ವೈದ್ಯನ ಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರು ವೈದ್ಯನ ಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಿಮ್ರನ್, ರಾಶಿ ಖನ್ನಾ, ಶ್ರೀಲೀಲಾ ನಾಯಕಿಯರಾಗಿ ನಟಿಸುತ್ತಿದ್ದಾರೆ. ತೆಲುಗಿನ ಸ್ಟಾರ್ ನಟ ಆಗಿದ್ದ ರಾಮ್ ಈ ಸಿನಿಮಾನಲ್ಲಿ ವಿಲನ್ ಆಗಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಕಮಲ್ ಹಾಸನ್ ಬಂಡವಾಳ ಹೂಡಿರುವುದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Sun, 11 October 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ