AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ ಸಿನಿಮಾದ ಸೀಕ್ವೆಲ್​ನಲ್ಲಿ ನಟಿಸೋಕೆ ಷರತ್ತುಗಳನ್ನು ಹಾಕಿದ ರಜನಿಕಾಂತ್

ಯಾವುದೇ ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್ ಬರುತ್ತದೆ. ‘ಚಂದ್ರಮುಖಿ’ ಯಶಸ್ಸಿನ ಬಳಿಕ ‘ಚಂದ್ರಮುಖಿ 2’ ಸಿನಿಮಾ ಬರುತ್ತಿದೆ. ಇದಾದ ಬಳಿಕ ‘ಚಂದ್ರಮುಖಿ 3’ ಸಿದ್ಧಪಡಿಸಲು ಪಿ. ವಾಸು ಅವರು ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ರಜನಿಕಾಂತ್ ಅವರು ಮರಳಲಿದ್ದಾರೆ. ಇದಕ್ಕೆ ಅವರು ಹಲವು ಕಂಡೀಷನ್ ಹಾಕಿದ್ದಾರೆ ಎಂದು ವರದಿ ಆಗಿದೆ.

ಹಿಟ್ ಸಿನಿಮಾದ ಸೀಕ್ವೆಲ್​ನಲ್ಲಿ ನಟಿಸೋಕೆ ಷರತ್ತುಗಳನ್ನು ಹಾಕಿದ ರಜನಿಕಾಂತ್
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on: Sep 25, 2023 | 6:51 AM

Share

ರಜನಿಕಾಂತ್ (Rajinikanth) ನಟನೆಯ ‘ಚಂದ್ರಮುಖಿ’ ಸಿನಿಮಾ ಯಶಸ್ಸು ಕಂಡಿತ್ತು. ‘ಆಪ್ತಮಿತ್ರ’ ಸಿನಿಮಾದ ರಿಮೇಕ್ ಇದಾಗಿದೆ. ಈಗ ‘ಚಂದ್ರಮುಖಿ 2’ ಸಿನಿಮಾ (Chandramukhi 2) ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ 28ರಂದು ಸಿನಿಮಾ  ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಎರಡನೇ ಪಾರ್ಟ್​ನಲ್ಲಿ ರಜನಿಕಾಂತ್ ಇಲ್ಲ. ಇದು ಅನೇಕರಿಗೆ ಬೇಸರ ಮೂಡಿಸಿದೆ. ಅವರು ಈ ಸರಣಿಯ ಮೂರನೇ ಪಾರ್ಟ್​​​ನಲ್ಲಿ ನಟಿಸೋಕೆ ರೆಡಿ ಆಗಿದ್ದಾರೆ. ಇದಕ್ಕೆ ಅವರು ಕೆಲವು ಷರತ್ತುಗಳನ್ನು ಕೂಡ ಹಾಕಿದ್ದಾರೆ. ಆ ಷರತ್ತುಗಳನ್ನು ತಂಡ ಪೂರೈಸಿದರೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ.

ಯಾವುದೇ ಸಿನಿಮಾ ಹಿಟ್ ಆದರೆ ಅದಕ್ಕೆ ಸೀಕ್ವೆಲ್ ಬರುತ್ತದೆ. ‘ಚಂದ್ರಮುಖಿ’ ಯಶಸ್ಸಿನ ಬಳಿಕ ‘ಚಂದ್ರಮುಖಿ 2’ ಸಿನಿಮಾ ಬರುತ್ತಿದೆ. ಇದಾದ ಬಳಿಕ ‘ಚಂದ್ರಮುಖಿ 3’ ಸಿದ್ಧಪಡಿಸಲು ಪಿ. ವಾಸು ಅವರು ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ರಜನಿಕಾಂತ್ ಅವರು ಮರಳಲಿದ್ದಾರೆ. ಇದಕ್ಕೆ ಅವರು ಹಲವು ಕಂಡೀಷನ್ ಹಾಕಿದ್ದಾರೆ ಎಂದು ವರದಿ ಆಗಿದೆ.

ರಜನಿಕಾಂತ್​ಗೆ ಈಗ 72 ವರ್ಷ ವಯಸ್ಸು. ಅವರು ಈಗ ಸಿನಿಮಾ ಆಯ್ಕೆ ಮಾಡಿಕೊಂಡು ನಟಿಸುತ್ತಾರೆ ಎಂದರೆ ಅದು ಅಷ್ಟು ಒಳ್ಳೆಯ ಕಥೆಯನ್ನು ಹೊಂದಿರಬೇಕು. ‘ಚಂದ್ರಮುಖಿ 3’ ಮಾಡೋಕೆ ರಜನಿ ಹಾಕಿರುವ ಕಂಡಿಷನ್ ಸಿಂಪಲ್ ಆಗಿದೆ. ಮೊದಲನೆಯದು, ‘ಚಂದ್ರಮುಖಿ 2’ ಸಿನಿಮಾ ಗೆಲ್ಲಬೇಕು. ಎರಡನೆಯದು, ‘ಚಂದ್ರಮುಖಿ 3’ ಸಿನಿಮಾದ ಕಥೆ ಉತ್ತಮವಾಗಿರಬೇಕು. ಇದೆರಡು ಕಂಡೀಷನ್ ಪಾಸ್ ಆದರೆ ಅವರು ಮೂರನೇ ಪಾರ್ಟ್​ನ ಭಾಗವಾಗಲಿದ್ದಾರೆ.

‘ಚಂದ್ರಮುಖಿ’ ಚಿತ್ರಕ್ಕೂ ‘ಚಂದ್ರಮುಖಿ 2’ ಚಿತ್ರಕ್ಕೂ ಸಣ್ಣ ಕನೆಕ್ಷನ್ ಇದೆ ಎಂದು ನಿರ್ದೇಶಕ ಪಿ. ವಾಸು ಅವರು ಹೇಳಿಕೊಂಡಿದ್ದರು. ಅದು ಯಾವ ರೀತಿಯ ಕನೆಕ್ಷನ್ ಎಂಬುದನ್ನು ಕಾದು ನೋಡಬೇಕಿದೆ. ‘ಚಂದ್ರಮುಖಿ 2’ ಚಿತ್ರದಲ್ಲಿ ಕಂಗನಾ ರಣಾವತ್ ಮೊದಲಾದವರು ನಟಿಸಿದ್ದಾರೆ.

ಇದನ್ನೂ ಓದಿ: ‘ರಜನಿಕಾಂತ್ ತಮಿಳು ಪರ ಎಂದರೆ ರಾಜ್ಯಕ್ಕೆ ಕಾಲಿಡಕೂಡದು’; ವಾಟಾಳ್ ನಾಗರಾಜ್

ರಜನಿಕಾಂತ್ ಅವರು ಸದ್ಯ ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು, ಒಟಿಟಿಯಲ್ಲಿ ರಿಲೀಸ್ ಆಗಿ ಚಿತ್ರ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯನ್ನೂ ಮೀರಿ ಚಿತ್ರ ಮೂಡಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು