ರಜನಿಕಾಂತ್​ 169ನೇ ಸಿನಿಮಾಗೆ ನಿರ್ದೇಶಕ ಫಿಕ್ಸ್​; ‘ಬೀಸ್ಟ್’ ಡೈರೆಕ್ಟರ್​ ಜತೆ ಕೈ ಜೋಡಿಸಿದ ಸೂಪರ್​ ಸ್ಟಾರ್​

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು.

ರಜನಿಕಾಂತ್​ 169ನೇ ಸಿನಿಮಾಗೆ ನಿರ್ದೇಶಕ ಫಿಕ್ಸ್​; ‘ಬೀಸ್ಟ್’ ಡೈರೆಕ್ಟರ್​ ಜತೆ ಕೈ ಜೋಡಿಸಿದ ಸೂಪರ್​ ಸ್ಟಾರ್​
ರಜನಿಕಾಂತ್​-ನೆಲ್ಸನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 08, 2022 | 1:21 PM

‘ಸೂಪರ್​ ಸ್ಟಾರ್​’ ರಜನಿಕಾಂತ್​ಗೆ (Rajanikanth) ವಯಸ್ಸು 71 ಆಗಿದೆ. ಆದಾಗ್ಯೂ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಚಿತ್ರರಂಗದಲ್ಲಿ ಈವರೆಗೆ 168 ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ರಜನಿಕಾಂತ್​​ ನಟನೆಯ ‘ಅಣ್ಣಾಥೆ’ ಚಿತ್ರ (Annaatthe Movie) ಸೂಪರ್ ಹಿಟ್​ ಆಗಿತ್ತು. ಈಗ ರಜನಿಕಾಂತ್ ನಟನೆಯ 169ನೇ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಚಿತ್ರಕ್ಕೆ ಯುವ ನಿರ್ದೇಶಕರು ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎನ್ನಲಾಗಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ನೆಲ್ಸನ್​ ದಿಲೀಪ್​ ಕುಮಾರ್ ಅವರು ‘ಬೀಸ್ಟ್’ ಚಿತ್ರದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಏಪ್ರಿಲ್​ 14ರಂದು ತೆರೆಗೆ ಬರುವ ನಿರೀಕ್ಷೆ ಇದೆ. ನೆಲ್ಸನ್​ ದಿಲೀಪ್​ ಅವರು ಈ ಮೊದಲು ‘ಡಾಕ್ಟರ್​​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅವರು ರಜನಿಕಾಂತ್​ ಜತೆ ಈಗ ಕೈಜೋಡಿಸುತ್ತಿದ್ದಾರೆ ಅನ್ನೋದು ವಿಶೇಷ.

‘ರಜನಿಕಾಂತ್ ಮತ್ತು ನೆಲ್ಸನ್ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿದ್ದಾರೆ. ಇದು ವಿಶಿಷ್ಟವಾದ ಸಿನಿಮಾ ಆಗಿರಲಿದ್ದು, ಏಪ್ರಿಲ್ ಅಂತ್ಯ/ಮೇ ಆರಂಭದಲ್ಲಿ ಚಿತ್ರ ಸೆಟ್ಟೇರಲಿದೆ. ಆ ನಂತರ ವೇಗವಾಗಿ ಶೂಟಿಂಗ್​ ಪೂರ್ಣಗೊಳಿಸಿ, ಮುಂದಿನ ವರ್ಷದ ಸಂಕ್ರಾಂತಿ ವೇಳೆಗೆ ಸಿನಿಮಾ ತೆರೆಗೆ ತರುವ ಆಲೋಚನೆಯಲ್ಲಿ ಚಿತ್ರ ತಂಡ ಇದೆ’ ಎಂದು ಮೂಲಗಳು ತಿಳಿಸಿರುವುದಾಗಿ ತಮಿಳು ಮಾಧ್ಯಮಗಳು ವರದಿ ಮಾಡಿವೆ.

ವಿಶೇಷ ವಿಡಿಯೋದೊಂದಿಗೆ ಈ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಮಾಡಲು ಚಿತ್ರತಂಡ ಪ್ಲ್ಯಾನ್​ ರೂಪಿಸಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಲಿದ್ದು, ಅನಿರುದ್ಧ್ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಮಾಡಲಿದ್ದಾರೆ.

ಬೀಸ್ಟ್​ vs ಕೆಜಿಎಫ್​ 

ಸ್ಟಾರ್​ ನಟರ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ ಅದರ ಎದುರು ಒಂದಷ್ಟು ಚಿತ್ರಗಳು ರಿಲೀಸ್​ಗೆ ಸಿದ್ಧವಾಗುತ್ತದೆ. ಈಗ ‘ಕೆಜಿಎಫ್​ 2’ ಎದುರು ದೊಡ್ಡದೊಡ್ಡ ಚಿತ್ರಗಳು ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿವೆ. ಹೊಸ ವರ್ಷದ ಪ್ರಯುಕ್ತ ‘ಬೀಸ್ಟ್​’ ಸಿನಿಮಾ ತಂಡ ಹೊಸ ಪೋಸ್ಟರ್​ ರಿಲೀಸ್​ ಮಾಡಿತ್ತು. ಈ ಪೋಸ್ಟರ್​ನಲ್ಲಿ ಏಪ್ರಿಲ್​ನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡುವ ಬಗ್ಗೆ ತಂಡ ಘೋಷಣೆ ಮಾಡಿದೆ. ಅದು ‘ಕೆಜಿಎಫ್​ 2’ ಎದುರೇ ಆಗಿರಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

‘ಕೆಜಿಎಫ್​ 2’ ತಮಿಳಿಗೂ ಡಬ್​ ಆಗಿ ತೆರೆಕಾಣುತ್ತಿದೆ. ಒಂದೊಮ್ಮೆ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್​ ಆಗದೇ ಇದ್ದರೆ ಈ ಚಿತ್ರದ ಕಮಾಯಿ ಹೆಚ್ಚಲಿದೆ. ಇದಕ್ಕೆ ತಡೆ ನೀಡಬೇಕು ಎಂದು ಪರಭಾಷಿಗರು ಪ್ಲ್ಯಾನ್​ ರೂಪಿಸಿದಂತಿದೆ. ಈ ಕಾರಣಕ್ಕೆ ಕಾಲಿವುಡ್​ನಿಂದ ‘ಬೀಸ್ಟ್​’ ಚಿತ್ರವನ್ನು ಸ್ಪರ್ಧೆಗೆ ಇಳಿಸಲು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ‘ಕೆಜಿಎಫ್​ 2’ ಎದುರು ಸ್ಪರ್ಧೆಗೆ ಇಳಿದ ತಮಿಳು ಸ್ಟಾರ್ ನಟನ ​ ಸಿನಿಮಾ; ಗೆಲ್ಲೋದು ಯಶ್​ ಎಂದ ಫ್ಯಾನ್ಸ್​

‘ಕೆಜಿಎಫ್​ 2’ ಎದುರು ಪರಭಾಷೆ ಚಿತ್ರಗಳ ಮುಖಾಮುಖಿ; ಯಶ್​ಗೆ ಪೈಪೋಟಿ ನೀಡೋರು ಯಾರೆಲ್ಲ?

Published On - 12:54 pm, Tue, 8 February 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ