AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಪರೀಕ್ಷೆಗೆ ಅಮೆರಿಕಾಗೆ ತೆರಳಲಿದ್ದಾರೆ ರಜನಿಕಾಂತ್; ಸೂಪರ್ ಸ್ಟಾರ್ ಪ್ರಯಾಣಕ್ಕೆ ವಿಶೇಷ ವಿಮಾನ ವ್ಯವಸ್ಥೆ?

2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಜನಿಕಾಂತ್ ಸ್ಪರ್ಧಿಸುವವರಿದ್ದರು. ಆದರೆ, ಪಕ್ಷ ಸ್ಥಾಪನೆಗೂ ಮೊದಲು ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ರಾಜಕೀಯದಿಂದ ಅವರು ಹಿಂದೆ ಸರಿದಿದ್ದರು.

ವೈದ್ಯಕೀಯ ಪರೀಕ್ಷೆಗೆ ಅಮೆರಿಕಾಗೆ ತೆರಳಲಿದ್ದಾರೆ ರಜನಿಕಾಂತ್; ಸೂಪರ್ ಸ್ಟಾರ್ ಪ್ರಯಾಣಕ್ಕೆ ವಿಶೇಷ ವಿಮಾನ ವ್ಯವಸ್ಥೆ?
ರಜನಿಕಾಂತ್
TV9 Web
| Edited By: |

Updated on: Jun 14, 2021 | 4:46 PM

Share

ಚೆನ್ನೈ: ಭಾರತೀಯ ಚಿತ್ರರಂಗದ ಖ್ಯಾತ ನಟ, ಸೂಪರ್ ಸ್ಟಾರ್ ರಜನಿಕಾಂತ್ ವೈದ್ಯಕೀಯ ಪರೀಕ್ಷೆಗಾಗಿ ಯುಎಸ್​ಗೆ ತೆರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅದಕ್ಕಾಗಿ ಕೇಂದ್ರ ಸರ್ಕಾರದ ಬಳಿ ವಿಶೇಷ ವಿಮಾನದಲ್ಲಿ ತೆರಳಲು ಅವಕಾಶ ಕೋರಿದ್ದಾರೆ. ಕೊರೊನಾ ನಡುವೆ ವಿದೇಶ ಪ್ರಯಾಣ ನಡೆಸಲು ಸರ್ಕಾರದ ಬಳಿ ಅವಕಾಶ ಕೇಳಿಕೊಂಡಿದ್ದಾರೆ. ಇತ್ತೀಚೆಗಿನ ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರವು ರಜನಿಕಾಂತ್ ಅಮೆರಿಕಾಕ್ಕೆ ತೆರಳಲು ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಜೂನ್ 20 ರಂದು ರಜನಿಕಾಂತ್ ವಿಶೇಷ ವಿಮಾನದಲ್ಲಿ ಅಮೆರಿಕಾಗೆ ತೆರಳಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಜನಿಕಾಂತ್ ಕೊರೊನಾ ಕಾರಣದಿಂದ ಅಮೆರಿಕಾಗೆ ತೆರಳಿರಲಿಲ್ಲ. ಇದೀಗ, ಯುಎಸ್​ಗೆ ಹೋಗಲು ನಟ ರಜನಿಕಾಂತ್ ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿಶೇಷ ವಿಮಾನದಲ್ಲಿ 14 ಮಂದಿ ಪ್ರಯಾಣಿಸುವ ಅವಕಾಶ ಇರಲಿದೆ. ವಿಮಾನದಲ್ಲಿ ರಜನಿಕಾಂತ್ ಜೊತೆ, ಕೆಲ ಕುಟುಂಬದ ಸದಸ್ಯರು ಕೂಡ ವಿದೇಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಯಲಾಗಿದೆ. ರಜನಿಕಾಂತ್ ಅಳಿಯ, ಖ್ಯಾತ ನಟ ಧನುಷ್ ತನ್ನ ಮಡದಿ ಹಾಗೂ ಮಗನೊಂದಿಗೆ ಈಗಾಗಲೇ ಅಮೆರಿಕಾದಲ್ಲಿ ಇದ್ದಾರೆ. ಧನುಷ್ ತಮ್ಮ ಹಾಲಿವುಡ್ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ರಜನಿಕಾಂತ್​ಗೆ ಅಮೆರಿಕಾದಲ್ಲಿ ಮಗಳ ಆರೈಕೆಯೂ ಸಿಗಲಿದೆ.

ಈ ಮೊದಲು, ಅಣ್ಣಾಥೆ ಸಿನಿಮಾದ ಚಿತ್ರೀಕರಣಕ್ಕಾಗಿ ರಜನಿಕಾಂತ್ ಹೈದರಾಬಾದ್‌ಗೆ ತೆರಳಿದ್ದರು. ಕಳೆದ ಡಿಸೆಂಬರ್‌ನಲ್ಲಿ ಅಣ್ಣಾಥೆ ಶೂಟಿಂಗ್ ಶುರುವಾಗಿತ್ತು. ಕೆಲವೇ ದಿನಗಳಲ್ಲಿ ತಂಡದ ಕೆಲ ಮಂದಿಗೆ ಕೊರೊನಾ ಪಾಸಿಟಿವ್‌ ಆಗಿತ್ತು. ಆದ್ದರಿಂದ ಶೂಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಏಪ್ರಿಲ್ನಲ್ಲಿ ಚಿತ್ರೀಕರಣ ಮತ್ತೆ ಆರಂಭವಾಗಿತ್ತು. ನಿರಂತರವಾಗಿ ಅವರು ಸಿನಿಮಾ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು.

ಅಣ್ಣಾಥೆ ಸಿನಿಮಾಗೆ ವಿಶ್ವಾಸಮ್​ ಖ್ಯಾತಿ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.

2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಜನಿಕಾಂತ್ ಸ್ಪರ್ಧಿಸುವವರಿದ್ದರು. ಆದರೆ, ಪಕ್ಷ ಸ್ಥಾಪನೆಗೂ ಮೊದಲು ಅವರಿಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ರಾಜಕೀಯದಿಂದ ಅವರು ಹಿಂದೆ ಸರಿದಿದ್ದರು.

ಇದನ್ನೂ ಓದಿ: Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!