ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಪಾರ ದೈವ ಭಕ್ತರು. ಅಧ್ಯಾತ್ಮದಲ್ಲಿ ಅವರು ಅಪಾರ ಆಸಕ್ತಿ ಹೊಂದಿದ್ದಾರೆ. ಈ ಮೊದಲು ಕೂಡ ಅವರು ಹಿಮಾಲಯಕ್ಕೆ ತೆರಳಿದ್ದರು. ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು, ಅಧ್ಯಾತ್ಮದ ಕಡೆಗೆ ಗಮನ ನೀಡಲು ಅವರು ಹೊರಟಿದ್ದಾರೆ. ಅಲ್ಲಿಂದ ವಾಪಸ್ ಬಂದ ಬಳಿಕ ‘ಕೂಲಿ’ ಚಿತ್ರದ ಶೂಟಿಂಗ್ನಲ್ಲಿ ಭಾಗಿ ಆಗಲಿದ್ದಾರೆ.
ನಟ ರಜನಿಕಾಂತ್ (Rajinikant) ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 73ನೇ ವಯಸ್ಸಿನಲ್ಲಿಯೂ ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈಗ ಅವರು ‘ಕೂಲಿ’ ಸಿನಿಮಾದ ಶೂಟಿಂಗ್ ಆರಂಭಿಸಬೇಕಿದೆ. ಅದಕ್ಕೂ ಮುನ್ನ ಅಧ್ಯಾತ್ಮದ ಅನುಭವ ಪಡೆಯಲು ಅವರು ಕೆಲವು ಸ್ಥಳಗಳಿಗೆ ತೆರಳಲಿದ್ದಾರೆ. ಈಗಾಗಲೇ ಕೇದರನಾಥಕ್ಕೆ ಹೋಗಿರುವ ಅವರು ಹಿಮಾಲಯಕ್ಕೂ (Himalaya) ಭೇಟಿ ನೀಡಲಿದ್ದಾರೆ. ಅಲ್ಲಿನ ಗುಹೆಗಳಲ್ಲಿ ಅಧ್ಯಾತ್ಮದ ಹೊಸ ಅನುಭವ ಪಡೆಯಲಿದ್ದಾರೆ. ಅಲ್ಲಿಂದ ವಾಪಸ್ ಬಂದ ನಂತರ ‘ಕೂಲಿ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.
ಈ ಬಾರಿಯ ತಮ್ಮ ಅಧ್ಯಾತ್ಮದ ಪಯಣವನ್ನು ಆರಂಭಿಸಲು ರಜನಿಕಾಂತ್ ಅವರು ಗುರುವಾರ (ಮೇ 30) ಮುಂಜಾನೆಯೇ ಚೆನ್ನೈನಿಂದ ಡೆಹರಾಡೂನ್ ತಲುಪಿದ್ದಾರೆ. ಡೆಹರಾಡೂನ್ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಪ್ರತಿ ವರ್ಷ ನಾನು ಹೊಸ ಅನುಭವ ಪಡೆಯುತ್ತೇನೆ. ಅದರಿಂದ ನನ್ನ ಅಧ್ಯಾತ್ಮದ ಪಯಣ ಮುಂದುವರಿಯುತ್ತದೆ. ಈ ಬಾರಿ ಕೂಡ ನನಗೆ ಹೊಸ ಅನುಭವ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದು ರಜನಿಕಾಂತ್ ಹೇಳಿದ್ದಾರೆ.
#WATCH | Dehradun, Uttarakhand: Actor Rajnikanth says, “I am going to Badrinath and Kedarnath Dham…” pic.twitter.com/vCUitnCFyW
— ANI (@ANI) May 29, 2024
‘ಇಡೀ ಜಗತ್ತಿಗೆ ಅಧ್ಯಾತ್ಮ ಬೇಕು. ಪ್ರತಿಯೊಬ್ಬ ಮನುಷ್ಯರಿಗೂ ಅದು ಮುಖ್ಯ. ಆಧ್ಯಾತ್ಮಿಕವಾಗಿ ಇರುವುದು ಎಂದರೆ ಶಾಂತಿ, ನೆಮ್ಮದಿಯಿಂದ ಇರುವುದು ಮತ್ತು ದೇವರಲ್ಲಿ ನಂಬಿಕೆ ಇಡುವುದು’ ಎಂದಿದ್ದಾರೆ ರಜನಿಕಾಂತ್. ಬದ್ರಿನಾಥ್, ಕೇದಾರನಾಥ್ ಮುಂತಾದ ಸ್ಥಳಗಳಿಗೆ ತೆರಳುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮೊದಲು ಸಹ ಅವರ ಹಿಮಾಲಯಕ್ಕೆ ತೆರಳಿದ್ದರು.
ಇದನ್ನೂ ಓದಿ: ರಜನಿಕಾಂತ್ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ
ರಜನಿಕಾಂತ್ ಅವರು ‘ವೆಟ್ಟೈಯನ್’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಜೊತೆ ನಟಿಸಿದ್ದಾರೆ. ಆ ಸಿನಿಮಾ ಅಕ್ಟೋಬರ್ನಲ್ಲಿ ಬಿಡುಗಡೆ ಆಗಲಿದೆ. ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾಗೆ ಲೋಕೇಶ್ ಕನಗರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇದೆ. 2023ರಲ್ಲಿ ರಜನಿಕಾಂತ್ ಅವರು ‘ಜೈಲರ್’ ಸಿನಿಮಾದ ಮೂಲಕ ಸೂಪರ್ ಸಕ್ಸಸ್ ಕಂಡರು. ಆ ಚಿತ್ರದ ಗೆಲುವಿನ ಬಳಿಕ ರಜನಿಕಾಂತ್ ಅವರ ಚಾರ್ಮ್ ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.