ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್​

|

Updated on: May 30, 2024 | 9:39 PM

ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಅಪಾರ ದೈವ ಭಕ್ತರು. ಅಧ್ಯಾತ್ಮದಲ್ಲಿ ಅವರು ಅಪಾರ ಆಸಕ್ತಿ ಹೊಂದಿದ್ದಾರೆ. ಈ ಮೊದಲು ಕೂಡ ಅವರು ಹಿಮಾಲಯಕ್ಕೆ ತೆರಳಿದ್ದರು. ಸದ್ಯಕ್ಕೆ ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು, ಅಧ್ಯಾತ್ಮದ ಕಡೆಗೆ ಗಮನ ನೀಡಲು ಅವರು ಹೊರಟಿದ್ದಾರೆ. ಅಲ್ಲಿಂದ ವಾಪಸ್​ ಬಂದ ಬಳಿಕ ‘ಕೂಲಿ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ.

ಹೊಸ ಅನುಭವ ಪಡೆಯಲು ಹಿಮಾಲಯದ ಗುಹೆಗಳಿಗೆ ಹೊರಟ ರಜನಿಕಾಂತ್​
ರಜನಿಕಾಂತ್​
Follow us on

ನಟ ರಜನಿಕಾಂತ್ (Rajinikant) ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. 73ನೇ ವಯಸ್ಸಿನಲ್ಲಿಯೂ ಅವರು ಆ್ಯಕ್ಷನ್​ ಸಿನಿಮಾಗಳನ್ನು ಮಾಡುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈಗ ಅವರು ‘ಕೂಲಿ’ ಸಿನಿಮಾದ ಶೂಟಿಂಗ್​ ಆರಂಭಿಸಬೇಕಿದೆ. ಅದಕ್ಕೂ ಮುನ್ನ ಅಧ್ಯಾತ್ಮದ ಅನುಭವ ಪಡೆಯಲು ಅವರು ಕೆಲವು ಸ್ಥಳಗಳಿಗೆ ತೆರಳಲಿದ್ದಾರೆ. ಈಗಾಗಲೇ ಕೇದರನಾಥಕ್ಕೆ ಹೋಗಿರುವ ಅವರು ಹಿಮಾಲಯಕ್ಕೂ (Himalaya) ಭೇಟಿ ನೀಡಲಿದ್ದಾರೆ. ಅಲ್ಲಿನ ಗುಹೆಗಳಲ್ಲಿ ಅಧ್ಯಾತ್ಮದ ಹೊಸ ಅನುಭವ ಪಡೆಯಲಿದ್ದಾರೆ. ಅಲ್ಲಿಂದ ವಾಪಸ್​ ಬಂದ ನಂತರ ‘ಕೂಲಿ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ.

ಈ ಬಾರಿಯ ತಮ್ಮ ಅಧ್ಯಾತ್ಮದ ಪಯಣವನ್ನು ಆರಂಭಿಸಲು ರಜನಿಕಾಂತ್​ ಅವರು ಗುರುವಾರ (ಮೇ 30) ಮುಂಜಾನೆಯೇ ಚೆನ್ನೈನಿಂದ ಡೆಹರಾಡೂನ್​ ತಲುಪಿದ್ದಾರೆ. ಡೆಹರಾಡೂನ್​ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ಪ್ರತಿ ವರ್ಷ ನಾನು ಹೊಸ ಅನುಭವ ಪಡೆಯುತ್ತೇನೆ. ಅದರಿಂದ ನನ್ನ ಅಧ್ಯಾತ್ಮದ ಪಯಣ ಮುಂದುವರಿಯುತ್ತದೆ. ಈ ಬಾರಿ ಕೂಡ ನನಗೆ ಹೊಸ ಅನುಭವ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದು ರಜನಿಕಾಂತ್​ ಹೇಳಿದ್ದಾರೆ.

‘ಇಡೀ ಜಗತ್ತಿಗೆ ಅಧ್ಯಾತ್ಮ ಬೇಕು. ಪ್ರತಿಯೊಬ್ಬ ಮನುಷ್ಯರಿಗೂ ಅದು ಮುಖ್ಯ. ಆಧ್ಯಾತ್ಮಿಕವಾಗಿ ಇರುವುದು ಎಂದರೆ ಶಾಂತಿ, ನೆಮ್ಮದಿಯಿಂದ ಇರುವುದು ಮತ್ತು ದೇವರಲ್ಲಿ ನಂಬಿಕೆ ಇಡುವುದು’ ಎಂದಿದ್ದಾರೆ ರಜನಿಕಾಂತ್​. ಬದ್ರಿನಾಥ್​, ಕೇದಾರನಾಥ್​ ಮುಂತಾದ ಸ್ಥಳಗಳಿಗೆ ತೆರಳುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮೊದಲು ಸಹ ಅವರ ಹಿಮಾಲಯಕ್ಕೆ ತೆರಳಿದ್ದರು.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ರಜನಿಕಾಂತ್​ ಅವರು ‘ವೆಟ್ಟೈಯನ್​’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ನಟಿಸಿದ್ದಾರೆ. ಆ ಸಿನಿಮಾ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ರಜನಿಕಾಂತ್​ ನಟನೆಯ ‘ಕೂಲಿ’ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇದೆ. 2023ರಲ್ಲಿ ರಜನಿಕಾಂತ್​ ಅವರು ‘ಜೈಲರ್​’ ಸಿನಿಮಾದ ಮೂಲಕ ಸೂಪರ್ ಸಕ್ಸಸ್​ ಕಂಡರು. ಆ ಚಿತ್ರದ ಗೆಲುವಿನ ಬಳಿಕ ರಜನಿಕಾಂತ್​ ಅವರ ಚಾರ್ಮ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.