AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?

Rajinikanth Health update: ರಜನಿಕಾಂತ್​ ಅವರಿಗೆ ಈಗ 70 ವರ್ಷ ವಯಸ್ಸು. ಹಾಗಾಗಿ ಅನೇಕ ವಯೋಸಹಜ ಕಾಯಿಲೆಗಳು ಅವರನ್ನು ಬಾಧಿಸುತ್ತಿವೆ. ಇದರ ಜೊತೆಗೆ ತಲೈವಾಗೆ​ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

Rajinikanth: ರಜನಿಕಾಂತ್​ಗೆ ಹೃದಯದ ಸಮಸ್ಯೆ; ಆಸ್ಪತ್ರೆಗೆ ದಾಖಲಾಗಿರುವ ತಲೈವಾ ಆರೋಗ್ಯ ಸ್ಥಿತಿ ಈಗ ಹೇಗಿದೆ?
ರಜನಿಕಾಂತ್
Follow us
TV9 Web
| Updated By: ಮದನ್​ ಕುಮಾರ್​

Updated on:Oct 30, 2021 | 9:42 AM

ನಟ ರಜನಿಕಾಂತ್​ ಅಭಿಮಾನಿಗಳು ಆತಂಕಗೊಂಡಿದ್ದಾರೆ. ತಲೈವಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಗುರುವಾರ (ಅ.28) ಚೆನ್ನೈನ ಕಾವೇರಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಆಸ್ಪತ್ರೆ ಮುಂದೆಯೇ ಜಮಾಯಿಸಿದರು. ಸದ್ಯ ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ರಕ್ತನಾಳಗಳಲ್ಲಿ ಇದ್ದ ಬ್ಲಾಕ್​ ತೆಗೆಯಲು ಆಪರೇಷನ್ ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ.

ರಜನಿಕಾಂತ್​ ಅವರಿಗೆ ಈಗ 70 ವರ್ಷ ವಯಸ್ಸು. ಹಾಗಾಗಿ ಅನೇಕ ವಯೋಸಹಜ ಕಾಯಿಲೆಗಳು ಅವರನ್ನು ಬಾಧಿಸುತ್ತಿದೆ. ಆ ಕಾರಣಕ್ಕಾಗಿ ರಜನಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡ ಅಭಿಮಾನಿಗಳು ಆತಂಕಗೊಳ್ಳುತ್ತಾರೆ. ತಲೈವಾ ಆರೋಗ್ಯದ ಬಗ್ಗೆ ಅಪ್​ಡೇಟ್​ ಸಿಗುವವರೆಗೂ ಅವರ ಅಪ್ಪಟ ಅಭಿಮಾನಿಗಳು ಕಾವೇರಿ ಆಸ್ಪತ್ರೆಯ ಎದುರು ಜಾಗರಣೆ ಮಾಡಿದ್ದಾರೆ. ಪರಿಣಾಮ, ಆಸ್ಪತ್ರೆ ಸುತ್ತಮುತ್ತ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಸದ್ಯ ರಜನಿಕಾಂತ್​ ಚೇತರಿಸಿಕೊಳ್ಳುತ್ತಿರುವ ವಿಷಯ ತಿಳಿದು ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಅ.25ರಂದು ರಜನಿಕಾಂತ್​ ಅವರು ದೆಹಲಿಗೆ ತೆರಳಿ ‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿದ್ದರು. ಆ ವೇಳೆ ಅವರು ಬಹಳ ಲವಲವಿಕೆಯಿಂದಲೇ ಓಡಾಡಿಕೊಂಡಿದ್ದರು. ಅದಾಗಿ ಕೆಲವೇ ಮೂರು ದಿನ ಕಳೆಯುವುದರೊಳಗೆ ಅವರು ಆಸ್ಪತ್ರೆಗೆ ದಾಖಲಾಗುವ ಸಂದರ್ಭ ಬಂದಿದ್ದಕ್ಕೆ ಫ್ಯಾನ್ಸ್​ ಆತಂಕಗೊಂಡಿದ್ದರು. ಈಗ ಶಸ್ತ್ರ ಚಿಕಿತ್ಸೆ ಮುಗಿದಿದೆ. ಆದಷ್ಟು ಬೇಗ ಅವರು ಮನೆಗೆ ವಾಪಸ್​ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕರ್ನಾಟಕದ ಜೊತೆ ರಜನಿಕಾಂತ್​ ಅವರಿಗೆ ಒಳ್ಳೆಯ ನಂಟು ಇದೆ. ರಾಜ್​ಕುಮಾರ್​ ಫ್ಯಾಮಿಲಿ ಜೊತೆ ಅವರಿಗೆ ಹಲವು ವರ್ಷಗಳಿಂದಲೂ ಒಡನಾಟವಿದೆ. ಹಾಗಾಗಿ ಅವರು ಪುನೀತ್​ ರಾಜ್​ಕುಮಾರ್​ ಅಂತಿಮ ದರ್ಶನಕ್ಕೆ ಆಗಮಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಾರಣ ಅವರು ಈ ಸಂದರ್ಭದಲ್ಲಿ ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗುತ್ತಿಲ್ಲ.

‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ರಜನಿಕಾಂತ್​ ಅವರು ತಮ್ಮ ಬೆಂಗಳೂರಿನ ಗೆಳಯ ರಾಜ್​ ಬಹದ್ದೂರ್​ ಅವರನ್ನು ನೆನಪು ಮಾಡಿಕೊಂಡಿದ್ದರು. ತಮ್ಮ ಗುರು ಕೆ. ಬಾಲಚಂದರ್​ ಹಾಗೂ ಅಭಿಮಾನಿಗಳಿಗೂ ಧನ್ಯವಾದ ಅರ್ಪಿಸಿದ್ದರು. ಪ್ರಸ್ತುತ ರಜನಿ ಅಭಿನಯದ ‘ಅಣ್ಣಾತೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ನ.4ರಂದು ಈ ಚಿತ್ರ ರಿಲೀಸ್​ ಆಗಲಿದೆ.

ಇದನ್ನೂ ಓದಿ:

Rajinikanth: ರಜನಿಕಾಂತ್​ಗೆ ಅಷ್ಟು ಚೆನ್ನಾಗಿ ತಮಿಳು ಕಲಿಸಿದ್ದು ಯಾರು? ಎರಡೇ ತಿಂಗಳಲ್ಲಿ ಬದಲಾಗಿತ್ತು ಬದುಕು

‘ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ’ ಬಗ್ಗೆ ರಜನಿ​ಕಾಂತ್​ ಸ್ನೇಹಿತ ರಾಜ್ ​ಬಹದ್ದೂರ್​ ಮೊದಲ ಪ್ರತಿಕ್ರಿಯೆ ಏನು?

Published On - 9:20 am, Sat, 30 October 21

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ