AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರು ಬಿಡುಗಡೆ ಆಗಲಿದೆ ರಜನೀಕಾಂತ್​ರ ಹಳೆಯ ಬ್ಲಾಕ್ ಬಸ್ಟರ್ ಸಿನಿಮಾ

Rajinikanth: ರಜನೀಕಾಂತ್​ ನಟನೆಯ 'ಜೈಲರ್' ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿದೆ. ಇದೀಗ ರಜನೀಕಾಂತ್​ರ ಹಳೆಯ ಸೂಪರ್-ಡೂಪರ್ ಹಿಟ್ ಸಿನಿಮಾ ಮರು ಬಿಡುಗಡೆ ಆಗಲಿದೆ.

ಮರು ಬಿಡುಗಡೆ ಆಗಲಿದೆ ರಜನೀಕಾಂತ್​ರ ಹಳೆಯ ಬ್ಲಾಕ್ ಬಸ್ಟರ್ ಸಿನಿಮಾ
ಮಂಜುನಾಥ ಸಿ.
|

Updated on: Nov 05, 2023 | 3:34 PM

Share

ರಜನೀಕಾಂತ್ (Rajinikanth) ಅವರಿಗಿರುವ ಸ್ಟಾರ್​ಗಿರಿ ಭಾರತದ ಇನ್ಯಾವುದೇ ನಟನಿಗಿಲ್ಲ. ಈ ವಯಸ್ಸಿನಲ್ಲಿಯೂ ರಜನೀಕಾಂತ್​ ಕೋಟ್ಯಂತರ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದ ರಜನೀಕಾಂತ್​ರ ‘ಜೈಲರ್’ ಸಿನಿಮಾ ಗಳಿಕೆಯಲ್ಲಿ ಕೆಲವು ದಾಖಲೆಗಳನ್ನೇ ಬರೆದಿದೆ. ವಯಸ್ಸಾದಷ್ಟು ರಜನೀಕಾಂತ್​ರ ಚಾರ್ಮ್ ಹೆಚ್ಚಾಗುತ್ತಲೇ ಸಾಗಿದೆ. ಈ ಚಾರ್ಮ್​ ಅನ್ನೇ ಲಾಭವನ್ನಾಗಿ ಬದಲಾಯಿಸಿಕೊಳ್ಳಲು ಕೆಲ ನಿರ್ಮಾಪಕರು ಮುಂದಾಗಿದ್ದು, ರಜನೀಕಾಂತ್​ರ ಕೆಲವು ಹಳೆಯ ಸಿನಿಮಾಗಳನ್ನು ಮರು ಬಿಡುಗಡೆ ಮಾಡಲು ಮುಂದಾಗಿದ್ದಾರೆ.

ರಜನೀಕಾಂತ್​ರ ವೃತ್ತಿ ಬದುಕಿನ ಟಾಪ್ ಹಿಟ್ ಸಿನಿಮಾಗಳಲ್ಲಿ ಮೊದಲ ಐದರಲ್ಲಿ ಎಣಿಸಲಾಗುವ ‘ಮುತ್ತು’ ಸಿನಿಮಾ ಮರು ಬಿಡುಗಡೆ ಆಗಲಿದೆ. 1996ರಲ್ಲಿ ಬಿಡುಗಡೆ ಆಗಿದ್ದ ‘ಮುತ್ತು’ ಸಿನಿಮಾ ಭಾರತ ಚಿತ್ರರಂಗದಲ್ಲಿಯೇ ಹಲವು ದಾಖಲೆಗಳನ್ನು ಬರೆದಿತ್ತು. ಗಳಿಕೆ ಮಾತ್ರವೇ ಅಲ್ಲದೆ, ಅತಿ ಹೆಚ್ಚು ದಿನ ಓಡಿದ ಸಿನಿಮಾ. ವಿದೇಶಗಳಲ್ಲಿ ಮೋಡಿ ಮಾಡಿದ ಸಿನಿಮಾ ಹೀಗೆ ಹಲವು ಬಿರುದುಗಳನ್ನು ಈ ಸಿನಿಮಾ ಗಳಿಸಿಕೊಂಡಿತ್ತು. ಇದೀಗ ಈ ಸಿನಿಮಾ ಮರು ಬಿಡುಗಡೆ ಆಗುತ್ತಿದೆ.

1995ರ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆ ಆಗಿದ್ದ ‘ಮುತ್ತು’ ಸಿನಿಮಾ ಆಗಿನ ಕಾಲದಲ್ಲಿ ಸುಮಾರು 30 ಕೋಟಿಗೂ ಹೆಚ್ಚು ಹಣ ಗಳಿಸಿತ್ತು. ವಿಶೇಷವಾಗಿ ಜಪಾನ್​ನಲ್ಲಿ ಈ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಆ ಸಿನಿಮಾದ ಬಳಿಕ ರಜನೀಕಾಂತ್​ರ ಎಲ್ಲ ಸಿನಿಮಾಗಳಿಗೂ ಜಪಾನ್​ನಲ್ಲಿ ಪ್ರತ್ಯೇಕ ಅಭಿಮಾನಿ ವರ್ತವೇ ಸೃಷ್ಟಿಯಾಯಿತು. ‘ಮುತ್ತು’ ಸಿನಿಮಾ ಭಾರತದಲ್ಲಿ ಮಾತ್ರವೇ ಅಲ್ಲದೆ ವಿದೇಶಗಳಲ್ಲಿಯೂ ಸೂಪರ್ ಹಿಟ್ ಎನಿಸಿಕೊಂಡಿತು. ಆ ಸಿನಿಮಾಕ್ಕೆ ಎಆರ್ ರೆಹಮಾನ್ ನೀಡಿದ ಹಾಡುಗಳು ಇಂದಿಗೂ ಜನಪ್ರಿಯ.

ಇದನ್ನೂ ಓದಿ:ರಜನೀಕಾಂತ್ ಹೊಸ ಸಿನಿಮಾಕ್ಕೆ ಅವರ ಅಭಿಮಾನಿಯೇ ವಿಲನ್

ಇದೀಗ ‘ಮುತ್ತು’ ಸಿನಿಮಾ ಡಿಸೆಂಬರ್ ತಿಂಗಳಿನಲ್ಲಿ ಮರು ಬಿಡುಗಡೆ ಆಗಲಿದೆ. ಡಿಸೆಂಬರ್ ತಿಂಗಳಲ್ಲಿ ‘ಸಲಾರ್’, ‘ಡಂಕಿ’ ಸೇರಿದಂತೆ ಇನ್ನೂ ಕೆಲವು ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾಗಳು ತೆರೆಗೆ ಬರಲಿವೆ. ಇದರ ನಡುವೆ ‘ಮುತ್ತು’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಸಿನಿಮಾವು ಉತ್ತಮ ಗಳಿಕೆ ಮಾಡುವ ನಿರೀಕ್ಷೆಯ ಇದೆ. ಇತ್ತೀಚೆಗೆ ಮರು ಬಿಡುಗಡೆ ಆದ ಕೆಲವು ತೆಲುಗು ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿದ್ದವು.

‘ಮುತ್ತು’ ಸಿನಿಮಾವು ಮಲಯಾಳಂನಲ್ಲಿ ಮೋಹನ್​ಲಾಲ್ ನಟಿಸಿದ್ದ ‘ತೇನ್​ಮವಿನ್ ಕೊಂಬಾತ್’ ಸಿನಿಮಾದಿಂದ ಸ್ಪೂರ್ತಿ ಪಡೆದು ಮಾಡಿದ ಸಿನಿಮಾ ಆಗಿದೆ. ‘ಮುತ್ತು’ ಸಿನಿಮಾವನ್ನು ಕೆಎಸ್ ರವಿಕುಮಾರ್ ನಿರ್ದೇಶನ ಮಾಡಿದ್ದು, ಕವಿತಾಲಯ ಪ್ರೊಡಕ್ಷನ್ ಸಂಸ್ಥೆಯವರು ನಿರ್ಮಾಣ ಮಾಡಿದ್ದಾರೆ.

ಇನ್ನು ರಜನೀಕಾಂತ್​ರ ಪ್ರಸ್ತುತ ಸಿನಿಮಾಗಳಿಗೆ ಬಂದರೆ. ರಜನೀಕಾಂತ್ ಈಗ ‘ಲಾಲ್ ಸಲಾಂ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ರಜನೀಕಾಂತ್​ರ ಪುತ್ರಿಯೇ ನಿರ್ದೇಶನ ಮಾಡುತ್ತಿದ್ದಾರೆ. ಅದರ ಜೊತೆಗೆ ‘ಜೈ ಭೀಮ್’ ಸಿನಿಮಾ ನಿರ್ದೇಶನ ಮಾಡಿದ್ದ ಟಿಜೆ ಜ್ಞಾನವೇಲು ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾದಲ್ಲಿಯೂ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್