ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ಹೇಗಿದೆ? ವಿಮರ್ಶೆ ತಿಳಿಸಿದ ಫ್ಯಾನ್ಸ್

Coolie Movie Twitter Review: ರಜನಿಕಾಂತ್ ಅವರ 'ಕೂಲಿ' ಸಿನಿಮಾ ಇಂದು ಬಿಡುಗಡೆಯಾಗಿದೆ. ಲೋಕೇಶ್ ಕನಗರಾಜ್ ನಿರ್ದೇಶನದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಬ್ಲಾಕ್ಬಸ್ಟರ್ ಎಂದು ಹೊಗಳುತ್ತಿದ್ದರೆ, ಇನ್ನು ಕೆಲವರಿಗೆ ಸಾಧಾರಣವೆನಿಸಿದೆ. ಆಮಿರ್ ಖಾನ್, ಉಪೇಂದ್ರ, ನಾಗಾರ್ಜುನ ಕೂಡ ನಟಿಸಿದ್ದಾರೆ.

ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾ ಹೇಗಿದೆ? ವಿಮರ್ಶೆ ತಿಳಿಸಿದ ಫ್ಯಾನ್ಸ್
Rajinikanth

Updated on: Aug 14, 2025 | 12:25 PM

ರಜನಿಕಾಂತ್ ಅವರ ನಟನೆಯ ‘ಕೂಲಿ’ ಸಿನಿಮಾ ಇಂದು (ಆಗಸ್ಟ್ 14) ಬಿಡುಗಡೆ ಕಂಡಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರಕ್ಕೆ ಲೋಕೇಶ್ ಕನಗರಾಜ್ ಅವರ ನಿರ್ದೇಶನ ಇದೆ. ಈ ಸಿನಿಮಾ ನೋಡಿದವರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಸಿನಿಮಾ ಅದ್ಭುತವಾಗಿದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರಿಗೆ ಸಿನಿಮಾ ಸಾಧಾರಣ ಎನಿಸಿದೆ.

ರಜನಿಕಾಂತ್ ಸಿನಿಮಾ ಎಂಬ ಕಾರಣಕ್ಕೆ ‘ಕೂಲಿ’ ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಇನ್ನು ಚಿತ್ರದಲ್ಲಿ ಆಮಿರ್ ಖಾನ್, ಉಪೇಂದ್ರ, ನಾಗಾರ್ಜುನ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ನೋಡಲು ಸಾಕಷ್ಟು ಕಾರಣಗಳು ಅಭಿಮಾನಿಗಳಿಗೆ ಸಿಕ್ಕಿವೆ. ಸಿನಿಮಾ ನೋಡಿದ ಅನೇಕರು ಬ್ಲಾಕ್​ಬಸ್ಟರ್ ಎಂದು ಹೊಗಳುತ್ತಿದ್ದಾರೆ.

ಇದನ್ನೂ ಓದಿ
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಪವಿತ್ರಾ ಗೌಡ
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

ಕೂಲಿ ವಿಮರ್ಶೆ

‘ಜೈಲರ್’ ಸಿನಿಮಾ ರಜನಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಇದಾದ ಬಳಿಕ ರಜನಿ ಮತ್ತೊಂದು ಹಿಟ್ ಕೊಟ್ಟಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ‘ಒಂದು ಬಾರಿ ಸುಲಭದಲ್ಲಿ ನೋಡಬಹುದು. ಕೊಟ್ಟ ಕಾಸಿಗೆ ಮೋಸ ಇಲ್ಲ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ.

ರಜನಿ ವಿರೋಧಿಗಳು ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಿನಿಮಾ ನೋಡದೆಯೇ ಕೆಲವರು ನೆಗೆಟಿವ್ ವಿಮರ್ಶೆ ಹಂಚುವ ಕೆಲಸ ಮಾಡುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇದನ್ನು ನಂಬಂದಂತೆ ಅನೇಕರು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.