AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ ‘ಧರ್ಮನ್’

ಸೂಪರ್‌ಸ್ಟಾರ್ ರಜನಿಕಾಂತ್ ಅವರ 173ನೇ ಚಿತ್ರಕ್ಕೆ 'ಧರ್ಮನ್' ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಚಾಕುವಿನೊಂದಿಗೆ ರಗಡ್ ಲುಕ್‌ನಲ್ಲಿ ರಜನಿಕಾಂತ್ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನ, ಅನಿರುದ್ಧ್ ಸಂಗೀತವಿದೆ. 'ಜೈಲರ್ 2' ಮುಗಿದ ನಂತರ 'ಧರ್ಮನ್' ಚಿತ್ರೀಕರಣ ಆರಂಭವಾಗಲಿದೆ.

ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ 'ಧರ್ಮನ್'
ರಜನಿಕಾಂತ್ Image Credit source: Dharman Movie
ರಾಜೇಶ್ ದುಗ್ಗುಮನೆ
|

Updated on:Jun 24, 2026 | 10:53 AM

Share

ಭಾರತೀಯ ಚಿತ್ರರಂಗದ ಖ್ಯಾತ ನಟ ಸೂಪರ್‌ಸ್ಟಾರ್ ರಜನಿಕಾಂತ್ 75ನೇ ವಯಸ್ಸಿನಲ್ಲೂ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ‘ತಲೈವರ್ 173’ ಸಿನುಮಾ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗ ಸಿನಿಮಾದ ಅಧಿಕೃತ ಶೀರ್ಷಿಕೆ ರಿವೀಲ್ ಆಗಿದೆ. ಈ ಚಿತ್ರಕ್ಕೆ ‘ಧರ್ಮನ್’ ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದೆ.

  • ರಕ್ತಸಿಕ್ತ ಕತ್ತಿ ಹಿಡಿದು ಬಂದ ‘ಧರ್ಮನ್’
  • ಕಮಲ್ ಹಾಸನ್ ನಿರ್ಮಾಣದಲ್ಲಿ ತಲೈವರ್ ಅಬ್ಬರ
  • ವೈರಲ್ ಆಯ್ತು ‘ಧರ್ಮನ್’ ಫಸ್ಟ್ ಲುಕ್ ಪೋಸ್ಟರ್

ಬಿಡುಗಡೆ ಆಗಿರುವ ಮೊದಲ ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ನೀಲಿ ಬಣ್ಣದ ಡಾಕ್ಟರ್ ಸೂಟ್ ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಕೈಯಲ್ಲಿ ರಕ್ತಸಿಕ್ತವಾಗಿರುವ ಸರ್ಜಿಕಲ್ ಕತ್ತಿ ಹಿಡಿದು ವಿಭಿನ್ನ ಹಾಗೂ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಆಪರೇಷನ್ ಥಿಯೇಟರ್‌ನ ಲೈಟ್‌ಗಳಿವೆ. ಒಡೆದು ಹೋದ ಗಾಜಿನ ಕಿಟಕಿಗಳು ಇವೆ. ಇದು ಆ್ಯಕ್ಷನ್ ಎಂಟರ್‌ಟೈನರ್ ಆಗಿರಲಿದೆ ಎಂಬುದಕ್ಕೆ ಪೋಸ್ಟರ್ ಸಾಕ್ಷಿ ನುಡಿಯುತ್ತಿದೆ.

ಇದನ್ನೂ ಓದಿ: ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್

ಈ ಬಿಗ್ ಬಜೆಟ್ ಸಿನಿಮಾವನ್ನು ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ (RKFI) ಸಂಸ್ಥೆ ಅರ್ಪಿಸುತ್ತಿದ್ದು, ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನವಿದ್ದು, ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಅವರ ಸಂಗೀತ ಹಾಗೂ ಅನ್ಬರಿವ್ ಅವರ ಸಾಹಸ ನಿರ್ದೇಶನವಿದೆ.

ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ ಎನ್ನಲಾಗಿದೆ. ಈ ಚಿತ್ರ ಈ ವರ್ಷವೇ ತೆರೆಗೆ ಬರಲಿದೆ. ಇದಾದ ಬಳಿಕ ಅವರು ‘ಧರ್ಮನ್’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ರಜನಿಕಾಂತ್ ಅವರು ಶೀಘ್ರವೇ ಚಿತ್ರರಂಗಕ್ಕೆ ಗುಡ್​ಬೈ ಹೇಳಲಿದ್ದಾರೆ ಎಂಬ ವದಂತಿಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Wed, 24 June 26

Follow Us
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ