AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಅಡ್ವಾನ್ಸ್ ಬುಕಿಂಗ್: ಟಿಕೆಟ್ ದರ ಬೆಂಗಳೂರಿನಲ್ಲಿ 15 ಪಟ್ಟು ಹೆಚ್ಚು

ರಜನಿಕಾಂತ್ ಅಭಿನಯದ 'ಜೈಲರ್ 2' ಸಿನಿಮಾ ಅಕ್ಟೋಬರ್ 15 ರಂದು ಬಿಡುಗಡೆಯಾಗಲಿದ್ದು, ಮುಂಗಡ ಬುಕಿಂಗ್ ಆರಂಭವಾಗಿದೆ. ಬೆಂಗಳೂರಿನಲ್ಲಿ ಟಿಕೆಟ್ ದರಗಳು ಗಗನಕ್ಕೇರಿದ್ದು, ವಿಶೇಷ ಶೋಗಳಿಗೆ ₹900 ರಿಂದ ₹2000+ ಇದೆ. ಚೆನ್ನೈನ ₹54 ಕನಿಷ್ಠ ದರಕ್ಕೆ ಹೋಲಿಸಿದರೆ, ಬೆಂಗಳೂರಿನಲ್ಲಿ 15 ಪಟ್ಟು ಹೆಚ್ಚು ದರವಿದೆ. ಈ ಬೆಲೆ ಏರಿಕೆ ಪ್ರೇಕ್ಷಕರಲ್ಲಿ ಅಸಮಾಧಾನ ಮೂಡಿಸಿದೆ.

‘ಜೈಲರ್ 2’ ಅಡ್ವಾನ್ಸ್ ಬುಕಿಂಗ್: ಟಿಕೆಟ್ ದರ ಬೆಂಗಳೂರಿನಲ್ಲಿ 15 ಪಟ್ಟು ಹೆಚ್ಚು
Jailer 2
ಮಂಜುನಾಥ ಸಿ.
|

Updated on:Oct 13, 2026 | 12:49 PM

Share

ಮುಖ್ಯಾಂಶಗಳು

  • ‘ಜೈಲರ್ 2’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ
  • ಬೆಂಗಳೂರಿನಲ್ಲೂ ಅಡ್ವನ್ಸ್ ಬುಕಿಂಗ್ ಓಪನ್ ಆಗಿದೆ
  • ಬೆಂಗಳೂರಿನಲ್ಲಿ ಟಿಕೆಟ್ ದರ ಹೆಚ್ಚಾಗಿದೆ

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದ್ದು, ತಮಿಳು ಸೇರಿದಂತೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅಕ್ಟೋಬರ್ 15ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಸಿನಿಮಾದ ಮುಂಗಡ ಬುಕಿಂಗ್ ಓಪನ್ ಆಗಿದೆ. ಸಿನಿಮಾ ರಿಲೀಸ್ ಆಗುವ ಮುಂಚೆಯೇ ಸಾವಿರಾರು ಟಿಕೆಟ್​​ಗಳು ಮುಂಗಡವಾಗಿ ಮಾರಾಟ ಆಗಿದ್ದು, ಸಿನಿಮಾ ರಿಲೀಸ್​​ಗೆ ಮುಂಚೆಯೇ 30 ಕೋಟಿಗೂ ಹೆಚ್ಚು ಗಳಿಕೆಯನ್ನು ಮುಂಗಡ ಬುಕಿಂಗ್​​ನಿಂದಲೇ ಮಾಡಲಾಗಿದೆ. ಬೆಂಗಳೂರಿನಲ್ಲೂ ಸಹ ಮುಂಗಡ ಬುಕಿಂಗ್ ಓಪನ್ ಆಗಿದ್ದು, ಟಿಕೆಟ್ ದರಗಳು ಪ್ರತಿಬಾರಿಯಂತೆ ಈ ಬಾರಿಯೂ ಗಗನಕ್ಕೇರಿವೆ.

ಪ್ರತಿಬಾರಿಯೂ ಪರಭಾಷೆ ಸಿನಿಮಾಗಳು ಬಿಡುಗಡೆ ಆದಾಗ ಟಿಕೆಟ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗುತ್ತದೆ. ‘ಜೈಲರ್ 2’ ಸಿನಿಮಾಕ್ಕೂ ಅದೇ ಮತ್ತೆ ಪುನರಾವರ್ತನೆಯಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 15ರಂದು ಬೆಳಿಗ್ಗೆ 6 ಗಂಟೆಗೆ ವಿಶೇಷ ಶೋ ಪ್ರದರ್ಶಿಸಲಾಗುತ್ತಿದ್ದು, ಈ ಶೋನ ಕನಿಷ್ಟ ಟಿಕೆಟ್ ದರವೇ 900 ರೂಪಾಯಿಗಳಿವೆ. ಕೆಲವು ಚಿತ್ರಮಂದಿರಗಳಲ್ಲಿ ವಿಶೇಷ ಶೋ ಟಿಕೆಟ್ ಬೆಲೆ 2000 ಕ್ಕಿಂತಲೂ ಹೆಚ್ಚಿದೆ. ವಿಶೇಷ ಶೋ ಹೊರತುಪಡಿಸಿ ಇತರೆ ಶೋಗಳಿಗೆ ಸಹ ಟಿಕೆಟ್ ದರ ಕಡಿಮೆ ಏನಿಲ್ಲ. ಮಲ್ಟಿಪ್ಲೆಕ್ಸ್​​ಗಳಲ್ಲಿ ಕನಿಷ್ಟ ಟಿಕೆಟ್ ದರ 400 ಕೆಲವೆಡೆ 550 ರೂಪಾಯಿಗಳಿವೆ. ಗರಿಷ್ಠ ಟಿಕೆಟ್ ದರ 1500 ಕೆಲವೆಡೆ ಇನ್ನೂ ಹೆಚ್ಚಿದೆ.

ಇನ್ನು ಇದೇ ‘ಜೈಲರ್ 2’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಚೆನ್ನೈನಲ್ಲೂ ಓಪನ್ ಆಗಿದ್ದು, ಅಲ್ಲಿಗೂ ಬೆಂಗಳೂರಿಗೂ ಟಿಕೆಟ್ ದರದಲ್ಲಿ ನೆಲ-ಆಕಾಶದಷ್ಟು ವ್ಯತ್ಯಾಸವಿದೆ. ಚೆನ್ನೈನಲ್ಲಿ ಮಲ್ಟಿಪ್ಲೆಕ್ಸ್​​ಗಳಲ್ಲಿಯೂ ಸಹ ಸರಾಸರಿ ಗರಿಷ್ಠ ದರ 185-190 ರೂಪಾಯಿಗಳು ಮಾತ್ರವೇ ಇದೆ. ಕನಿಷ್ಠ ಟಿಕೆಟ್ ದರ ಕೇವಲ 54 ರೂಪಾಯಿಗಳು ಮಾತ್ರವೇ ಇದೆ. ಬೆಂಗಳೂರಿನಲ್ಲಿ ಇದರ 15 ಪಟ್ಟು ಟಿಕೆಟ್ ದರ ಹೆಚ್ಚಿದೆ. ಚೆನ್ನೈನಲ್ಲಿ ಮೊದಲ ಶೋ 9 ಗಂಟೆಗೆ ಶುರು ಆಗಲಿದೆ. ಕರ್ನಾಟಕದಲ್ಲಿ ಬೆಳಿಗ್ಗೆ ಆರು ಗಂಟೆಗೆ ಶೋ ಪ್ರಾರಂಭ ಆಗುತ್ತಿದೆ.

ಇದನ್ನೂ ಓದಿ:ರಜನೀಕಾಂತ್ ಸಿನಿಮಾನಲ್ಲಿ ಶ್ರೀಲೀಲಾ, ಚಿತ್ರೀಕರಣದಲ್ಲಿ ಭಾಗಿ

‘ಜೈಲರ್ 2’ ಸಿನಿಮಾ ಈ ಹಿಂದೆ ಬಿಡುಗಡೆ ಆಗಿದ್ದ ‘ಜೈಲರ್’ ಸಿನಿಮಾದ ಮುಂದುವರೆದ ಭಾಗವೇ ಆಗಿದ್ದು, ಸಿನಿಮಾ ಅನ್ನು ನೆಲ್ಸನ್ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಕಲಾನಿಧಿ ಮಾರನ್. ಸಂಗೀತವನ್ನು ಅನಿರುದ್ಧ್ ರವಿಚಂದ್ರನ್ ನೀಡಿದ್ದಾರೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್, ಮೋಹನ್​​ಲಾಲ್, ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಬಾಲಿವುಡ್ ನಟ ಹೃತಿಕ್ ರೋಷನ್ ಅವರುಗಳು ನಟನೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Tue, 13 October 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ