AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ

ರಜನಿಕಾಂತ್ 'ಜೈಲರ್ 2' ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಅವರ ಕೊನೆಯ ಸಿನಿಮಾ ಕುರಿತು ಚರ್ಚೆ ನಡೆಯುತ್ತಿದೆ. ರಜನಿ ಮಗಳು ಸೌಂದರ್ಯಾ ಇದನ್ನು ನಿರ್ಮಿಸುವ ಸಾಧ್ಯತೆ ಇದೆ. ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮೊದಲು ಸ್ಮರಣೀಯ ಚಿತ್ರ ನೀಡಲು ಅವರು ಬಯಸುತ್ತಾರೆ. ಅಂತಿಮ ಚಿತ್ರವು ಅಭಿಮಾನಿಗಳಿಗೆ ಭಾವನಾತ್ಮಕವಾಗಿ ಹತ್ತಿರವಾಗಿದ್ದು, ಓಟಿಟಿ ಹಕ್ಕುಗಳಿಗೂ ಹೆಚ್ಚಿನ ಬೆಲೆ ಬರಬಹುದು.

ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ
ರಜನಿಕಾಂತ್
ರಾಜೇಶ್ ದುಗ್ಗುಮನೆ
|

Updated on:Feb 18, 2026 | 2:49 PM

Share

ರಜನಿಕಾಂತ್ (Rajinikanth) ಅವರು ಸದ್ಯ ‘ಜೈಲರ್ 2’ ಸಿನಿಮಾ ಶೂಟ್​​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್ ವಿವಿಧ ಹಂತಗಳಲ್ಲಿ ಭರದಿಂದ ಸಾಗಿದೆ. ಹೀಗಿರುವಾಗಲೇ ರಜನಿಕಾಂತ್ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚಿತ್ರವನ್ನು ರಜನಿ ಮಗಳೇ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಆಸೆಯನ್ನು ಈಡೇರಿಸಲು ರಜನಿ ಕೂಡ ಒಪ್ಪಿದ್ದಾರಂತೆ.

ಹಲವು ವರ್ಷ ಚಿತ್ರರಂಗದಲ್ಲಿ ಶ್ರಮಿಸಿ ನಂತರ ವೃತ್ತಿ ಜೀವನಕ್ಕೆ ಗುಡ್​​​ಬೈ ಹೇಳಬೇಕು ಎಂದರೆ ಭಾವನಾತ್ಮಕವಾಗಿ ಅದು ನಿಜಕ್ಕೂ ಚಾಲೆಂಜಿಂಗ್ ಅನ್ನಿಸೋ ವಿಷಯ. ಕೊನೆಯ ಸಿನಿಮಾ ಮೆಮೊರೆಬಲ್ ಆಗಿರಬೇಕು ಎಂದು ಅನೇಕರು ಬಯಸುತ್ತಾರೆ. ಈ ಎಲ್ಲಾ ಕಾರಣದಿಂದ ಸೌಂದರ್ಯಾ ರಜನಿಕಾಂತ್ ಅವರು ಸಿನಿಮಾನ ನಿರ್ಮಾಣ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಸಾಮಾನ್ಯವಾಗಿ ಕೊನೆಯ ಸಿನಿಮಾ ಎಂದಾಗ ಬಿಸ್ನೆಸ್ ದೃಷ್ಟಿಯಲ್ಲೂ ಹೆಚ್ಚು ಲಾಭ ತಂದುಕೊಡುತ್ತದೆ. ರಜನಿ ಅವರನ್ನು ಇನ್ನೆಂದೂ ದೊಡ್ಡ ಪರದೆ ಮೇಲೆ ನೋಡಲು ಸಾಧ್ಯವಿಲ್ಲ ಎಂಬ ಭಾವಾನಾತ್ಮಕ ನೆಲೆಗಟ್ಟಿನ ಮೇಲೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾನ ವೀಕ್ಷಿಸಲು ತೆರೆಳುತ್ತಾರೆ. ಇನ್ನು, ಟಿವಿ ಹಾಗೂ ಒಟಿಟಿ ಹಕ್ಕುಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ಬಿಕರಿ ಆಗುವ ಸಾಧ್ಯತೆ ಇರುತ್ತದೆ.

ರಜನಿಕಾಂತ್ ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಶ್ರಮಿಸಿದ್ದಾರೆ. ಅವರ ದೇಹ ಆ್ಯಕ್ಷನ್ ದೃಶ್ಯಗಳನ್ನು ಮಾಡಲು ಸ್ಪಂದಿಸುತ್ತಿಲ್ಲ. ಹೀಗಾಗಿ ಡ್ಯೂಪ್ ಬಳಸಿ ಈ ರೀತಿಯ ದೃಶ್ಯಗಳನ್ನು ಸೆರೆ ಹಿಡಿಯಬೇಕಿದೆ. ಇದೆಲ್ಲದರ ಮಧ್ಯೆ ನಟಿಸಲು ಸಾಕಷ್ಟು ಶ್ರಮ ಹಾಕಲೇಬೇಕು. ಈ ಎಲ್ಲಾ ಕಾರಣದಿಂದ ವಿಶ್ರಾಂತಿ ಪಡೆಯುವ ಆಲೋಚನೆಯಲ್ಲಿ ಅವರಿದ್ದಾರೆ.

ಇದನ್ನೂ ಓದಿ: ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು?

ರಜನಿಕಾಂತ್ ಇನ್ನೂ ಕೆಲವು ಸಿನಿಮಾಗಳನ್ನು ಮಾಡುತ್ತಾರೆ ಎಂಬ ವರದಿ ಕೂಡ ಇದೆ. ಅವರು ಕಮಲ್ ಹಾಸನ್ ಜೊತೆ ಸಿನಿಮಾ ಒಂದನ್ನು ಮಾಡಬೇಕಿದೆ. ಇದಾದ ಬಳಿಕ ಅವರ ಕೊನೆಯ ಸಿನಿಮಾ ಸೆಟ್ಟೇರುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಅಷ್ಟೇ ಅಲ್ಲ, ಕೊನೆಯ ಸಿನಿಮಾಗೆ ನಿರ್ದೇಶನ ಮಾಡುವವರು ಯಾರು ಎಂಬ ಕುತೂಹಲವೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:48 pm, Wed, 18 February 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!