ರಜನಿಕಾಂತ್​ ನಟನೆಯ 171ನೇ ಸಿನಿಮಾದ ಹೊಸ ಪೋಸ್ಟರ್​ ಜೊತೆ ಬಂತು ಸಿಹಿ ಸುದ್ದಿ

ನಿರ್ದೇಶಕ ಲೋಕೇಶ್​ ಕನಗರಾಜ್​ ಮತ್ತು ನಟ ರಜನಿಕಾಂತ್​ ಅವರು ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ. ಈ ಸಿನಿಮಾದ ಹೊಸ ಪೋಸ್ಟರ್​ ಅನಾವರಣ ಆಗಿದೆ. ಅದರ ಜೊತೆಗೆ ಲೋಕೇಶ್​ ಕನಗರಾಜ್​ ಅವರು ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ರಜನಿಕಾಂತ್​ ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

ರಜನಿಕಾಂತ್​ ನಟನೆಯ 171ನೇ ಸಿನಿಮಾದ ಹೊಸ ಪೋಸ್ಟರ್​ ಜೊತೆ ಬಂತು ಸಿಹಿ ಸುದ್ದಿ
ರಜನಿಕಾಂತ್​, ಲೋಕೇಶ್​ ಕನಗರಾಜ್​
Follow us
ಮದನ್​ ಕುಮಾರ್​
|

Updated on: Mar 28, 2024 | 10:44 PM

ನಟ ರಜನಿಕಾಂತ್​ (Rajinikanth) ಅವರು ಒಂದರ ಹಿಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡುತ್ತಿದ್ದಾರೆ. ಈಗ ಅವರು 170ನೇ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರಕ್ಕೆ ‘ವೆಟ್ಟಯ್ಯನ್​’ ಎಂದು ಶೀರ್ಷಿಕೆ ಇಡಲಾಗಿದೆ. ಅದಕ್ಕೆ ಟಿ.ಜೆ. ಜ್ಞಾನವೇಲ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆ ಸಿನಿಮಾದ ಬಳಿಕ 171ನೇ ಸಿನಿಮಾ ಸೆಟ್ಟೇರಲಿದೆ. ಅದಕ್ಕೆ ಲೋಕೇಶ್​ ಕನಗರಾಜ್​ (Lokesh Kanagaraj) ಅವರು ಆ್ಯಕ್ಷನ್​-ಕಟ್ ಹೇಳಲಿದ್ದಾರೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ತಲೈವರ್​ 171’ (Thalaivar 171) ಎಂದು ಕರೆಯಲಾಗುತ್ತಿದೆ. ಇದರ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ.

ಲೋಕೇಶ್​ ಕನಗರಾಜ್​ ಮತ್ತು ರಜನಿಕಾಂತ್​ ಅವರ ಕಾಂಬಿನೇಷನ್​ ಎಂಬ ಕಾರಣಕ್ಕೆ ‘ತಲೈವರ್​ 171’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದ ಪೋಸ್ಟರ್​ ಕೂಡ ಅಷ್ಟೇ ಇಂಟರೆಸ್ಟಿಂಗ್​ ಆಗಿ ಮೂಡಿಬಂದಿದೆ. ರಜನಿಕಾಂತ್​ ಅವರ ಕೈಗೆ ಬೇಡಿ ಹಾಕಲಾಗಿದೆ. ಆದರೆ ಅದು ಚಿನ್ನದ ವಾಚ್​ನಿಂದ ಮಾಡಿದ ಬೇಡಿ! ಅದನ್ನು ನೋಡಿದ ಅಭಿಮಾನಿಗಳಿಗೆ ಸಿನಿಮಾದ ಕಥೆಯ ಬಗ್ಗೆ ಕೌತುಕ ಮೂಡಿದೆ.

ಲೋಕೇಶ್​ ಕನಗರಾಜ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

ಈ ಪೋಸ್ಟರ್​ನ ಜೊತೆಯಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ಒಂದು ಗುಡ್​ ನ್ಯೂಸ್​ ನೀಡಿದ್ದಾರೆ. ಅದೇನೆಂದರೆ, ಏಪ್ರಿಲ್​ 22ರಂದು ಈ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಪ್ರತಿಷ್ಠಿತ ‘ಸನ್​ ಪಿಕ್ಚರ್ಸ್​’ ಸಂಸ್ಥೆಯು ‘ತಲೈವರ್​ 171’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಮಕ್ಕಳು, ಮೊಮ್ಮಕ್ಕಳ ಜೊತೆ ರಜನಿಕಾಂತ್​ ಸರಳ ಸುಂದರ ಹೋಳಿ ಆಚರಣೆ

ಕಾಲಿವುಡ್​ನಲ್ಲಿ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗಳ ಕಥೆಯಲ್ಲಿ ಒಂದಕ್ಕೊಂದು ಲಿಂಕ್​ ಇರುತ್ತದೆ. ಅದನ್ನು ಅವರು ಲೋಕೇಶ್​ ಸಿನಿಮ್ಯಾಟಿಕ್​ ಯೂನಿವರ್ಸ್​ ಎಂದು ಕರೆದಿದ್ದಾರೆ. ‘ಖೈದಿ’, ‘ವಿಕ್ರಮ್​’ ಸಿನಿಮಾಗಳ ಕಥೆಗಳು ಒಂದಕ್ಕೊಂದು ಬೆಸೆದುಕೊಂಡಿವೆ. ಆದರೆ ಈಗ ಅವರು ನಿರ್ದೇಶನ ಮಾಡಲಿರುವ ‘ತಲೈವರ್​ 171’ ಚಿತ್ರದಲ್ಲಿ ಆ ರೀತಿಯ ಲಿಂಕ್​ ಇರುವುದಿಲ್ಲ ಎನ್ನಲಾಗಿದೆ. ಅಲ್ಲದೇ ಇದೊಂದು ಪ್ರಯೋಗಾತ್ಮಕ ಸಿನಿಮಾ ಆಗಿರಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾ ಸೆಟ್ಟೇರುವ ಮುನ್ನವೇ ಹೈಪ್​ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ