ಹಿಟ್ ಕೊಟ್ಟ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್

ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ 'ತಲೈವರ್ 173' ಚಿತ್ರದ ನಿರ್ದೇಶಕರ ಬಗ್ಗೆ ಇದ್ದ ಹಲವು ದಿನಗಳ ಕುತೂಹಲಕ್ಕೆ ತೆರೆಬಿದ್ದಿದೆ. ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ 'ಓ ಮೈ ಕಡವಲೆ' ಖ್ಯಾತಿಯ ಯುವ ನಿರ್ದೇಶಕ ಅಶ್ವಥ್ ಮಾರಿಮುತ್ತು ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಪರೋಕ್ಷವಾಗಿ ಘೋಷಿಸಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದ್ದು, ರಜನಿಕಾಂತ್ ಅವರನ್ನು ಹೊಸ ಅವತಾರದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಹಿಟ್ ಕೊಟ್ಟ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್
ರಜಿನಿ-ಕಮಲ್

Updated on: Jun 02, 2026 | 2:07 PM

ಸೂಪರ್ ಸ್ಟಾರ್ ರಜನಿಕಾಂತ್ ಅವರ (Rajinikanth) ಮುಂದಿನ ಬಹುನಿರೀಕ್ಷಿತ ಚಿತ್ರ ‘ತಲೈವರ್ 173’ ನಿರ್ದೇಶಕರು ಯಾರು ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ಸಿನಿರಂಗದಲ್ಲಿ ಭಾರಿ ಚರ್ಚೆ ಆಗಿತ್ತು. ಹಲವು ದೊಡ್ಡ ನಿರ್ದೇಶಕರ ಹೆಸರುಗಳು ಈ ಪ್ರಾಜೆಕ್ಟ್ ಜೊತೆ ಕೇಳಿಬರುತ್ತಿದ್ದವು. ಆದರೆ, ಈಗ ಈ ಎಲ್ಲಾ ಚರ್ಚೆ ಮತ್ತು ಸಸ್ಪೆನ್ಸ್‌ಗಳಿಗೆ ಚಿತ್ರತಂಡ ಅಧಿಕೃತವಾಗಿ ತೆರೆ ಎಳೆದಿದ್ದು, ಚಿತ್ರದ ಹೊಸ ಸಾರಥಿಯನ್ನು ಅದ್ಧೂರಿಯಾಗಿ ಪರಿಚಯಿಸಿದೆ.

ರಜನಿಕಾಂತ್ ಅವರ 173ನೇ ಸಿನಿಮಾವನ್ನು ಕಮಲ್ ಹಾಸನ್ ಅವರು ‘ರಾಜ್ ಕಮಲ್ ಫಿಲ್ಮ್ಸ್’ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಯುವ ಹಾಗೂ ಪ್ರತಿಭಾವಂತ ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರು ನಿರ್ದೇಶನ ಮಾಡಲಿದ್ದಾರೆ ಎಂಬ ವಿಷಯ ಈಗ ಬಹಿರಂಗವಾಗಿದೆ. ಈ ಹಿಂದೆ ‘ಓ ಮೈ ಕಡವಲೆ’, ‘ಡ್ರ್ಯಾಗನ್​’ ರೀತಿಯ ಹಿಟ್ ಸಿನಿಮಾ ನೀಡಿದ್ದ ಅಶ್ವಥ್ ಮಾರಿಮುತ್ತು, ಈಗ ರಜನಿಕಾಂತ್-ಕಮಲ್ ಹಾಸನ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಸುವರ್ಣ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

‘ರಾಜ್ ಕಮಲ್ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಒಂದು ವಿಶೇಷ ವಿಡಿಯೋ ಗುಟ್ಟನ್ನು ರಟ್ಟು ಮಾಡಿದೆ. ನಿರ್ದೇಶಕ ಅಶ್ವಥ್ ಮಾರಿಮುತ್ತು ಅವರ ಜನ್ಮದಿನದ ಅಂಗವಾಗಿ ಚಿತ್ರತಂಡ ವಿಶೇಷ ಬರ್ತ್‌ಡೇ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಈ ವಿಡಿಯೋವನ್ನು ಈ ಹಿಂದೆ ಬಿಡುಗಡೆಯಾಗಿದ್ದ ‘ತಲೈವರ್ 173’ ಚಿತ್ರದ ಪ್ರಮೋ ಶೈಲಿಯಲ್ಲೇ ವಿನ್ಯಾಸಗೊಳಿಸಲಾಗಿದೆ. ಇದು ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದ್ದಂತೆ, ಚಿತ್ರದ ಚುಕ್ಕಾಣಿ ಹಿಡಿದಿರುವುದು ಅಶ್ವಥ್ ಅವರೇ ಎಂಬುದು ಅಭಿಮಾನಿಗಳಿಗೆ ಖಾತ್ರಿಯಾಗಿದೆ.

ಇದನ್ನೂ ಓದಿ: ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಈ ಹಿಂದೆ ಈ ಚಿತ್ರಕ್ಕೆ ಸಿ. ಸುಂದರ್ ನಿರ್ದೇಶನ ಮಾಡಬೇಕಿತ್ತು. ಅವರು ಸಿನಿಮಾದಿಂದ ಹೊರ ಹೋಗಿದ್ದಾರೆ. ಆದರೆ ಈಗ ನಡೆದಿರುವ ಈ ಬದಲಾವಣೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ತಲೈವರ್ ಹೊಸ ಅವತಾರದಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಈಗ ಪ್ರೇಕ್ಷಕರಲ್ಲಿ ಮನೆಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:04 pm, Tue, 2 June 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us