AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್ ಜೈಲ್​​ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ

ಬಾಲಿವುಡ್ ನಟ ರಾಜಪಾಲ್ ಯಾದವ್ ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಕಾರಣ ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮುರಳಿ ಪ್ರಾಜೆಕ್ಟ್ಸ್ ಸಲ್ಲಿಸಿದ್ದ ದೂರಿನ ಪ್ರಕಾರ ನಟನ ಚೆಕ್ ಬೌನ್ಸ್ ಆಗಿತ್ತು. ಪ್ರಕರಣದ ಇತಿಹಾಸವನ್ನು ಪರಿಗಣಿಸಿ, ನ್ಯಾಯಾಲಯವು ಮತ್ತಷ್ಟು ಅವಕಾಶ ನೀಡಲು ನಿರಾಕರಿಸಿದೆ. ಯಾವುದೇ ವ್ಯಕ್ತಿಯು ಹಿನ್ನೆಲೆಯ ಕಾರಣಕ್ಕೆ ವಿಶೇಷ ಪರಿಗಣನೆ ನಿರೀಕ್ಷಿಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ತಿಹಾರ್ ಜೈಲ್​​ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ
ರಾಜ್​​ಪಾಲ್-ತಿಹಾರ್ ಜೈಲ್
ರಾಜೇಶ್ ದುಗ್ಗುಮನೆ
|

Updated on: Feb 06, 2026 | 10:12 AM

Share

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ (ರಾಜ್​ಪಾಲ್ ಯಾದವ್) ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ.

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ ಪತ್ನಿ ಕೊಟ್ಟ ಚೆಕ್ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2018ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್​ ಪಾಲ್ ಯಾದವ್ ಹಾಗೂ ಆತನ ಪತ್ನಿ ಅಪರಾಧಿ ಎಂದು ಘೋಷಣೆ ಮಾಡಿತ್ತು. 2019ರಲ್ಲಿ ಸೆಷನ್ ಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿಯಿತು.

2019ರಲ್ಲಿ ಈ ಪ್ರಕರಣವನ್ನು ದೆಹಲಿ ಕೋರ್ಟ್​​ ಅಲ್ಲಿ ರಾಜ್​​ಪಾಲ್ ಯಾದವ್ ಪ್ರಶ್ನೆ ಮಾಡಿದರು. ಸೆಟಲ್​​ಮೆಂಟ್​ಗೆ ದಾರಿ ಹುಡುಕುತ್ತಿದ್ದೇವೆ ಎಂದು ಹೇಳಿದ ಕಾರಣದಿಂದ 2024ರಲ್ಲಿ ಹೈಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ, ಈವರೆಗೆ ನಟ ಹಣವನ್ನು ಹಿಂದಿರುಗಿಸಿಲ್ಲ. ಹೀಗಾಗಿ, ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ. ಹೆಚ್ಚುವರಿಯಾಗಿ ಕೆಲ ವಾರ ಅವಕಾಶ ಕೊಟ್ಟರೆ ಹಣ ಹೊಂದಿಸಲು ಪ್ರಯತ್ನಿಸೋದಾಗಿ ರಾಜ್​​ಪಾಲ್ ಪರ ವಕೀಲರು ಹೇಳಿದ್ದರು. ಆದರೆ, ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು. ಬುಧವಾರ ನಾಲ್ಕು ಗಂಟೆ ಒಳಗೆ ಸರೆಂಡರ್ ಆಗಲು ಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ಓದಿ: ಪತ್ರಕರ್ತನ ಮೊಬೈಲ್ ಕಿತ್ತುಕೊಂಡು ಎಸೆದ ಹಾಸ್ಯ ನಟ ರಾಜ್​ಪಾಲ್ ಯಾದವ್

‘ಯಾವುದೇ ವ್ಯಕ್ತಿ ನಿರ್ದಿಷ್ಟ ಹಿನ್ನೆಲೆ ಅಥವಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ಈ ನ್ಯಾಯಾಲಯವು ಅವರಿಗೆ ವಿಶೇಷ ಅವಕಾಶ ನೀಡುತ್ತದೆ ಎಂದು ನಿರೀಕ್ಷಿಸಬೇಡಿ. ನಿರಂತರವಾಗಿ ಅದೇ ತಪ್ಪು ಆಗುತ್ತಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್