ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ

‘ಧುರಂಧರ್’ ಚಿತ್ರಗಳಲ್ಲಿ ಜಮೀಲ್ ಜಮಾಲಿ ಪಾತ್ರ ನಿರ್ವಹಿಸಿದ ರಾಕೇಶ್ ಬೇಡಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ನಿರ್ದೇಶಕ ಆದಿತ್ಯ ಧರ್ ಒಂದು ಕೋಟಿ ರೂ. ಬೋನಸ್ ನೀಡಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್, "ನನ್ನ ಖಾತೆಗಂತೂ ಬಂದಿಲ್ಲ" ಎಂದು ಹಾಸ್ಯಮಯವಾಗಿ ಉತ್ತರಿಸುವ ಮೂಲಕ ವದಂತಿಯನ್ನು ನಿರಾಕರಿಸಿದ್ದಾರೆ.

ನನಗೆ 1 ಕೋಟಿ ರೂಪಾಯಿ ಯಾರೂ ಕೊಟ್ಟಿಲ್ಲ; ಸ್ಪಷ್ಟನೆ ಕೊಟ್ಟ ಜಮಿಲ್ ಜಮಾಲಿ
ಜಮಾಲಿ
Edited By:

Updated on: Apr 25, 2026 | 12:17 PM

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳಲ್ಲಿ ಜಮಿಲ್ ಜಮಾಲಿ ಪಾತ್ರವನ್ನು ನಿರ್ವಹಿಸುವ ಮೂಲಕ ನಟ ರಾಕೇಶ್ ಬೇಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದಾರೆ. ಈ ಚಿತ್ರಗಳ ಐತಿಹಾಸಿಕ ಯಶಸ್ಸಿನ ನಂತರ, ಈಗ ನಿರ್ದೇಶಕ ಆದಿತ್ಯ ಧರ್ ಅವರಿಗೆ ಬೋನಸ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಇತಿಹಾಸ ಸೃಷ್ಟಿಸಿವೆ. ಈ ಚಿತ್ರದೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬ ಕಲಾವಿದರು ಇದರಿಂದ ಪ್ರಯೋಜನ ಪಡೆಯುತ್ತಿದ್ದಾರೆ. ರಾಕೇಶ್ ಬೇಡಿ ಈ ಎರಡೂ ಚಿತ್ರಗಳಲ್ಲಿ ‘ಜಮೀಲ್ ಜಮಾಲಿ’ ಪಾತ್ರವನ್ನು ನಿರ್ವಹಿಸಿದ್ದಾರೆ. ಇದು ಅವರ ಜನಪ್ರಿಯತೆ ಹೆಚ್ಚಿಸಿದೆ.

ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ಮಾಪಕರು ರಾಕೇಶ್ ಕೆಲಸದಿಂದ ತುಂಬಾ ಪ್ರಭಾವಿತರಾಗಿದ್ದಾರೆ. ತಮ್ಮ ಔದಾರ್ಯವನ್ನು ಪ್ರದರ್ಶಿಸಿ, ಅವರು ರಾಕೇಶ್ ಬೇಡಿ ಅವರಿಗೆ 1 ಕೋಟಿ ರೂಪಾಯಿ ಹೆಚ್ಚು ಹಣ ನೀಡಲಾಗಿದೆ ಎಂದು ವರದಿ ಆಗಿತ್ತು. ಇದಕ್ಕೆ ಉತ್ತರಿಸಿರುವ ಅವರು, ‘ನನ್ನ ಖಾತೆಗಂತೂ ಬಂದಿಲ್ಲ.ಎಲ್ಲಿ ಬಂದಿದೆ ಹೇಳಿ ಹೋಗಿ ತೆಗೆದುಕೊಂಡು ಬರುತ್ತೇನೆ’ ಎಂದು ಉತ್ತರಿಸಿದ್ದಾರೆ.

ಅವರ ‘ಬಚ್ಚಾ ಹೈ ತು ಮೇರಾ’ ಎಂಬ ಸಂಭಾಷಣೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅವರ ಅನೇಕ ಮೀಮ್ಸ್‌ಗಳು ಸಹ ವೈರಲ್ ಆಗುತ್ತಿವೆ. ‘ಧುರಂಧರ್: ದಿ ರಿವೆಂಜ್’ ಚಿತ್ರದಲ್ಲಿ ಅವರ ಪಾತ್ರಕ್ಕೆ ದೊಡ್ಡ ಟ್ವಿಸ್ಟ್ ಇತ್ತು. ಚಿತ್ರದಲ್ಲಿ ರಣವೀರ್ ಸಿಂಗ್, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್. ಮಾಧವನ್, ಸಾರಾ ಅರ್ಜುನ್ ನಟಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಗೆದ್ದಿದ್ದಕ್ಕೆ ನಟ ರಾಕೇಶ್ ಬೇಡಿಗೆ 1 ಕೋಟಿ ರೂಪಾಯಿ ಬೋನಸ್ ಕೊಟ್ಟ ನಿರ್ಮಾಪಕರು

ರಾಕೇಶ್ ಬೇಡಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಧಾರಾವಾಹಿಗಳು ಮತ್ತು ರಂಗಭೂಮಿಯಲ್ಲೂ ಕೆಲಸ ಮಾಡಿದ್ದಾರೆ. ಆದಿತ್ಯ ಧರ್ ಅವರ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರದಲ್ಲಿ ಅವರು ಸಣ್ಣ ಪಾತ್ರವನ್ನು ನಿರ್ವಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:08 am, Sat, 25 April 26

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us