ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?

ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಸಾಕಷ್ಟು ನಗರಗಳಲ್ಲಿ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ, ವಿನಾಕಾರಣ ಯಾರೂ ಮನೆಯಿಂದ ಹೊರಬರುವಂತಿಲ್ಲ.

ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಖಿ ಸಾವಂತ್​ಗೆ ಮಂಗಳಾರತಿ; ಅವರು ಮಾಡಿದ ತಪ್ಪೇನು?
ರಾಖಿ ಸಾವಂತ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 01, 2021 | 4:19 PM

ನಟಿ ರಾಖಿ ಸಾವಂತ್​ ಸೆಲೆಬ್ರಿಟಿಯಾದರೂ ವಿವಾದದ ಮೂಲಕವೇ ಹೆಚ್ಚು ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಅವರು ನಟಿ ಕಂಗನಾ ರಣಾವತ್​ ವಿರುದ್ಧ ನೇರವಾಗಿಯೇ ಹರಿಹಾಯ್ದಿದ್ದರು. ಈ ಮೂಲಕ ಕಂಗನಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ರಾಖಿ ಸಾವಂತ್​ ಮತ್ತೆ ಸುದ್ದಿಯಾಗಿದ್ದಾರೆ. ಈ ಬಾರಿ ಅಭಿಮಾನಿಗಳೇ ರಾಖಿಗೆ ಮಂಗಳಾರತಿ ಮಾಡಿದ್ದಾರೆ. ಅಷ್ಟಕ್ಕೂ ರಾಖಿ ಮಾಡಿದ ತಪ್ಪೇನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಭಾರತದಲ್ಲಿ ಕೊರೊನಾ ವೈರಸ್​ ಮಿತಿ ಮೀರಿ ಹರಡುತ್ತಿದೆ. ಅದನ್ನು ನಿಯಂತ್ರಿಸೋಕೆ ಅನೇಕ ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದಕ್ಕೆ ಮಹಾರಾಷ್ಟ್ರ ಕೂಡ ಹೊರತಾಗಿಲ್ಲ. ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಸಾಕಷ್ಟು ನಗರಗಳಲ್ಲಿ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ, ವಿನಾಕಾರಣ ಯಾರೂ ಮನೆಯಿಂದ ಹೊರಬರುವಂತಿಲ್ಲ.

ಬೇರೆಯವರಿಗೆ ಪಾಠ ಮಾಡುವ ರಾಖಿ ಸಾವಂತ್​ ಲಾಕ್​ಡೌನ್​​ ಆದಮೇಲೆ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಹಾಗೆಯೇ ಆಗಿದೆ. ಮುಂಬೈನ ಕಾಫಿ ಶಾಪ್​ ಒಂದಕ್ಕೆ ರಾಖಿ ಬಂದಿದ್ದರು. ನಂತರ ಕ್ಯಾಮೆರಾ ಕಾಣುತ್ತಿದ್ದಂತೆ ಅವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕೈಯಲ್ಲಿ ಸ್ಯಾನಿಟೈಸರ್ ಹಿಡಿದು ಸ್ಕೂಟರ್​ ಏರಿದ್ದಾರೆ. ಸ್ಕೂಟರ್​ಗೆ ಸ್ಯಾನಿಟೈಸರ್​ ಹಾಕಿ, ಕೊರೊನಾ ಹೋಗು. ಇಲ್ಲದಿದ್ದರೆ ನಾನು ನಿನ್ನನ್ನು ಸುಟ್ಟು ಹಾಕಿಬಿಡುತ್ತೇನೆ ಎಂದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಅನೇಕರು ರಾಖಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ರಾಖಿ ಯಾಕೆ ಪದೇಪದೇ ಹೊರಗೆ ಕಾಣಿಸಿಕೊಳ್ಳುತ್ತಾರೆ? ಅವರಿಗೆ ಲಾಕ್​ಡೌನ್​ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಕೂಡ ಆಗ್ರಹಿಸಿದ್ದಾರೆ.

ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ರಾಖಿ ಕಾಣಿಸಿಕೊಂಡಿದ್ದರು. ಬಿಗ್​ ಬಾಸ್​ ಮನೆಯಲ್ಲೂ ಅವರು ಸಾಕಷ್ಟು ವಿವಾದಗಳನ್ನು ಸೃಷ್ಟಿ ಮಾಡಿದ್ದರು. ಬಿಗ್​ ಬಾಸ್​ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ