ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಹಾಯ ಮಾಡದೆ ಸುಮ್ಮನಿರುವ ಕಂಗನಾಗೆ ಕ್ಲಾಸ್​
ನಟಿ ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Apr 29, 2021 | 5:59 PM

ನಟಿ ಕಂಗನಾ ರಣಾವತ್​ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಯಾವಾಗಲೂ ದೇಶ ಮೊದಲು ಎನ್ನುವ ಅವರು, ಇದೇ ವಿಚಾರಕ್ಕೆ ಅನೇಕ ಬಾರಿ ಮಾತಿಗೆ ಇಳಿದಿದ್ದಿದೆ. ಸಹ ನಟರ ಜತೆ ಟ್ವಿಟರ್​ನಲ್ಲಿ ಪರಸ್ಪರ ಕೆಸರೆರೆಚಾಟ ಮಾಡಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಅವರು ಏನೂ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದೇ ಕಾರಣಕ್ಕೆ ಕಂಗನಾಗೆ ನಟಿ ರಾಖಿ ಸಾವಂತ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಬಿಗ್​ ಬಾಸ್​ 14ರಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಖಿ ಸಾವಂತ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಅವರು ಕಂಗನಾ ವಿರುದ್ಧ ನೇರವಾಗಿ ಹರಿಹಾಯ್ದಿದ್ದಾರೆ.

ರಾಖಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ರಾಖಿ ಎರಡೆರಡು ಮಾಸ್ಕ್​ ಹಾಕಿಕೊಂಡಿದ್ದಾರೆ. ಅಲ್ಲದೆ, ಕೈಯಲ್ಲಿ ಸ್ಯಾನಿಟೈಸರ್​ ಕೂಡ ಹಿಡಿದು, ಗಾಳಿಯಲ್ಲಿ ಹಾರಿಸಿದ್ದಾರೆ. ಎಲ್ಲರೂ ಸೇಫ್​ ಆಗಿರಿ. ಕುಟುಂಬವನ್ನು ಸುರಕ್ಷಿತವಾಗಿ ನೋಡಿಕೊಳ್ಳಿ ಎಂದು ರಾಖಿ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ.

ಇತ್ತೀಚೆಗೆ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ದೇಶದ ಸ್ಥಿತಿ ಉತ್ತಮವಾಗಿಲ್ಲ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಖಿ, ಕಂಗನಾ ನಿಮ್ಮ ಬಳಿ ಸಾಕಷ್ಟು ಹಣವಿದೆ. ಈ ಹಣದಿಂದ ಆಕ್ಸಿಜನ್​ ಸಿಲಿಂಡರ್​ ಖರೀದಿಸಿ ಕಷ್ಟದಲ್ಲಿದ್ದವರಿಗೆ ನೀಡಿ. ಈ ಮೂಲಕ ಎಲ್ಲರಿಗೂ ಸಹಾಯ ಮಾಡಿ ಎಂದಿದ್ದಾರೆ.

ಕಂಗನಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟು 15 ವರ್ಷ ಕಳೆದಿದೆ. ಇದೇ ಖುಷಿಯಲ್ಲಿ ಅವರು ಸಾಲು ಸಾಲು ಟ್ವೀಟ್​ ಮಾಡಿದ್ದರು. ಅಲ್ಲದೆ, ತಮ್ಮನ್ನು ತಾವು ಶಾರುಖ್​ ಖಾನ್​ಗೆ ಹೋಲಿಕೆ ಮಾಡಿಕೊಂಡು ಟ್ರೋಲ್​ ಆಗಿದ್ದರು. ಅವರ ನಟನೆಯ ಥಲೈವಿ ಸಿನಿಮಾ ಕೊರೊನಾ ಕಾರಣಕ್ಕೆ ವಿಳಂಬವಾಗಿದೆ.

ಇದನ್ನೂ ಓದಿ: ಶಾರುಖ್ ಖಾನ್​​​​​​ಗಿಂತ ನಾನು ಗ್ರೇಟ್​ ಎಂದ ಕಂಗನಾ ರಣಾವತ್​; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ