777 Charlie: ರಕ್ಷಿತ್ ಶೆಟ್ಟಿ ‘ಚಾರ್ಲಿ’ ಅಭಿನಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಫಿದಾ..!

Rakshit Shetty's 777 Charlie: ಬಾಕ್ಸಾಫೀಸ್​ನಲ್ಲಿ 777 ಚಾರ್ಲಿ ಚಿತ್ರದ ಅಬ್ಬರ ಮುಂದುವರೆದಿದ್ದು, ಧರ್ಮ ಮತ್ತು ಚಾರ್ಲಿಯ ಹೃದಯಸ್ಪರ್ಶಿ ಪ್ರಯಾಣವನ್ನು ವೀಕ್ಷಿಸಲು ದಿನದಿಂದ ದಿನಕ್ಕೆ ಜನರು ಥಿಯೇಟರ್​ನತ್ತ ಧಾವಿಸುತ್ತಿದ್ದಾರೆ.

777 Charlie: ರಕ್ಷಿತ್ ಶೆಟ್ಟಿ 'ಚಾರ್ಲಿ' ಅಭಿನಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಫಿದಾ..!
777 Charlie-Rajinikanth
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 22, 2022 | 5:54 PM

ಸ್ಯಾಂಡಲ್​ವುಡ್​ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ಅಭಿನಯ 777 ಚಾರ್ಲಿ (777 Charlie) ಚಿತ್ರದ ನಾಗಾಲೋಟ ಮುಂದುವರೆದಿದೆ. ಬಾಕ್ಸಾಫೀಸ್​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಚಾರ್ಲಿ ಮೋಡಿಯ ಬಗ್ಗೆ ಪರಭಾಷಾ ಸಿನಿಪ್ರಿಯರು ಸಹ ಹಾಡಿಹೊಗಳುತ್ತಿದ್ದಾರೆ. ಅದರಲ್ಲೂ ಖ್ಯಾತ ನಟ-ನಟಿಯರೂ ಕೂಡ ಚಿತ್ರಕ್ಕೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ಸೂಪರ್​ ಸ್ಟಾರ್ ರಜನಿಕಾಂತ್ (Rajinikanth). 777 ಚಾರ್ಲಿ ಚಿತ್ರವನ್ನು ತಲೈವಾ ರಜನಿ ವೀಕ್ಷಿಸಿ ಮೆಚ್ಚುಗೆ ಸೂಚಿಸಿರುವ ವಿಚಾರವನ್ನು ಖುದ್ದು ರಕ್ಷಿತ್ ಶೆಟ್ಟಿಯೇ ಬಹಿರಂಗಪಡಿಸಿದ್ದಾರೆ. ಅಲ್ಲದೆ ಮೇರುನಟನ ಮೆಚ್ಚುಗೆ ರಕ್ಷಿತ್ ಶೆಟ್ಟಿ ಸಂತಸಗೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಕ್ಷಿತ್ ಶೆಟ್ಟಿ, ಎಂತಹ ಅಧ್ಭುತ  ದಿನದಾರಂಭ…ಇವತ್ತು ರಜನಿಕಾಂತ್ ಅವರಿಂದ ಕರೆ ಬಂತು. ಅವರು ನಿನ್ನೆ (ಮಂಗಳವಾರ) ರಾತ್ರಿ 777 ಚಾರ್ಲಿ ಚಿತ್ರವನ್ನು ನೋಡಿದ್ದಾರೆ. ಚಿತ್ರವನ್ನು ಮೆಚ್ಚಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ನಮ್ಮ ಸಿನಿಮಾದ ಮೇಕಿಂಗ್ ಮತ್ತು ಡಿಸೈನ್ ಬಗ್ಗೆ ಮಾತನಾಡಿದರು. ಅದರಲ್ಲೂ ವಿಶೇಷವಾಗಿ ಕ್ಲೈಮ್ಯಾಕ್ಸ್​ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ಎಂದು ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಚಿತ್ರವು ಭಾವನಾತ್ಮಕ ಕೊನೆಗೊಂಡಿರುವುದರ ಬಗ್ಗೆ ರಜನಿಕಾಂತ್​ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿರುವ ರಕ್ಷಿತ್ ಶೆಟ್ಟಿ, ಸೂಪರ್ ಸ್ಟಾರ್ ಅವರಿಂದ ಈ ರೀತಿಯ ಮಾತುಗಳನ್ನು ಕೇಳಿರುವುದು ಅದ್ಭುತ ಅನುಭವ. ತುಂಬಾ ಧನ್ಯವಾದಗಳು ರಜನಿಕಾಂತ್ ಸರ್ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ತೆಲುಗು ನಟ ರಾಣಾ ದಗ್ಗುಬಾಟಿ, ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್, ತಮಿಳಿನ ಖ್ಯಾತ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್, ಮಲಯಾಳಂ ನಟ ಪೃಥ್ವಿರಾಜ್ ಸೇರಿದಂತೆ ಅನೇಕರು 777 ಚಾರ್ಲಿ ಚಿತ್ರವನ್ನು ಮೆಚ್ಚಿ ಹಾಡಿಹೊಗಳಿದ್ದರು. ಇದೀಗ ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಚಿತ್ರಕ್ಕೆ ಬಹುಪರಾಕ್ ಅಂದಿರುವುದು ಚಿತ್ರ ತಂಡದ ಖುಷಿಯನ್ನು ಇಮ್ಮಡಿಗೊಳಿಸಿದೆ.

ಸದ್ಯ ಬಾಕ್ಸಾಫೀಸ್​ನಲ್ಲಿ 777 ಚಾರ್ಲಿ ಚಿತ್ರದ ಅಬ್ಬರ ಮುಂದುವರೆದಿದ್ದು, ಧರ್ಮ ಮತ್ತು ಚಾರ್ಲಿಯ ಹೃದಯಸ್ಪರ್ಶಿ ಪ್ರಯಾಣವನ್ನು ವೀಕ್ಷಿಸಲು ದಿನದಿಂದ ದಿನಕ್ಕೆ ಜನರು ಥಿಯೇಟರ್​ನತ್ತ ಧಾವಿಸುತ್ತಿದ್ದಾರೆ. ಅಲ್ಲದೆ ಚಾರ್ಲಿಯ ತುಂಟಾಟ, ಧರ್ಮನ ಪ್ರಾಣ ಸಂಕಟವನ್ನು ವೀಕ್ಷಿಸಿ ಪ್ರೇಕ್ಷಕರು ಕಣ್ಣೀರಿನೊಂದಿಗೆ ಥಿಯೇಟರ್​ನಿಂದ ಹೊರಬರುತ್ತಿದ್ದಾರೆ. ಇದೀಗ ಚಾರ್ಲಿಯನ್ನು ವೀಕ್ಷಿಸಿರುವ ರಜನಿಕಾಂತ್ ಕೂಡ ಭಾವನಾತ್ಮಕ ಕ್ಲೈಮ್ಯಾಕ್ಸ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದರೊಂದಿಗೆ ಅದ್ಭುತ ಚಿತ್ರ ನೀಡಿದ್ದೇವೆ ಎಂಬ ಸಾರ್ಥಕತೆಯಲ್ಲಿದ್ದಾರೆ ನಿರ್ದೇಶಕ ಕಿರಣ್ ರಾಜ್ ಅ್ಯಂಡ್ ರಕ್ಷಿತ್ ಶೆಟ್ಟಿ ಟೀಮ್.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ