‘ಪೊನ್ನಿಯಿನ್​ ಸೆಲ್ವನ್​’ ಚಿತ್ರದ ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ; ಗಮನ ಸೆಳೆದ ಐಶ್ವರ್ಯಾ, ವಿಕ್ರಮ್

ಚಿತ್ರದ ಟೀಸರ್​​ನಲ್ಲಿ ಐಶ್ವರ್ಯಾ ರೈ ಅವರ ಪಾತ್ರ ಹೈಲೈಟ್ ಆಗಿದೆ.  ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ.

‘ಪೊನ್ನಿಯಿನ್​ ಸೆಲ್ವನ್​’ ಚಿತ್ರದ ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ; ಗಮನ ಸೆಳೆದ ಐಶ್ವರ್ಯಾ, ವಿಕ್ರಮ್
ಐಶ್ವರ್ಯಾ-ವಿಕ್ರಮ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 08, 2022 | 7:06 PM

ಮಣಿರತ್ನಂ (Mani Ratnam) ನಿರ್ದೇಶನದ ಸಿನಿಮಾಗಳ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇರುತ್ತದೆ. ಅದೇ ರೀತಿ ಅವರ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರ () ಕೂಡ ಸಾಕಷ್ಟು ಕೌತುಕ ಮೂಡಿಸಿದೆ. ಈ ಚಿತ್ರದ ಟೀಸರ್ ಇಂದು (ಜುಲೈ 8) ರಿಲೀಸ್ ಆಗಿದೆ. ಈ ಟೀಸರ್​ನಲ್ಲಿ ಹಲವು ಪಾತ್ರಗಳು ಗಮನ ಸೆಳೆದಿವೆ. ಅಷ್ಟೇ ಅಲ್ಲ, ಸಿನಿಮಾಗಾಗಿ ಹಾಕಿದ ಸೆಟ್​ ಎಲ್ಲರ ಗಮನ ಸೆಳೆಯುತ್ತಿದೆ. ಕನ್ನಡದಲ್ಲಿ ಈ ಟೀಸರ್​ ಅನ್ನು ರಕ್ಷಿತ್ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ ಅನ್ನೋದು ವಿಶೇಷ.

‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಲು ಹಲವು ಕಾರಣಗಳಿವೆ. ಈ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹುಟ್ಟಿಸಿದೆ. ಈ ಚಿತ್ರದಲ್ಲಿ ಅನೇಕ ಸ್ಟಾರ್​ಗಳು ನಟಿಸುತ್ತಿದ್ದಾರೆ. ಐಶ್ವರ್ಯಾ ರೈ, ವಿಕ್ರಮ್​, ಜಯಮ್​ ರವಿ, ಕಾರ್ತಿ, ತ್ರಿಷಾ, ಆರ್​. ಶರತ್​ಕಮಾರ್​, ಶೋಭಿತಾ ಧೂಲಿಪಾಲಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಟೀಸರ್​ನಲ್ಲಿ ಇವರು ನಿರ್ವಹಿಸಿರುವ ಪಾತ್ರಗಳ ಅನಾವರಣ ಆಗಿದೆ.

ಇದನ್ನೂ ಓದಿ
Image
30 ವರ್ಷಗಳ ಹಿಂದೆ ಐಶ್ವರ್ಯಾ ರೈ ಹೇಗಿದ್ರು ಗೊತ್ತಾ? ಇಲ್ಲಿದೆ ಫೋಟೋ
Image
ಪಾರ್ಟಿಯಲ್ಲಿ ಸಲ್ಮಾನ್​ ಖಾನ್​ ಕಂಡು ಗಂಡನಿಂದಲೇ ಅಂತರ ಕಾಯ್ದುಕೊಂಡ ಐಶ್ವರ್ಯಾ ರೈ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ
Image
ವೈರಲ್ ಆಯ್ತು ಅಭಿಷೇಕ್ ಬಚ್ಚನ್- ಐಶ್ವರ್ಯಾ ರೈ ಮದುವೆಯ ಚಿತ್ರ; ಫೋಟೋದ ಅಸಲಿಯತ್ತನ್ನು ತೆರೆದಿಟ್ಟ ನಟ

ಚಿತ್ರದ ಟೀಸರ್​​ನಲ್ಲಿ ಐಶ್ವರ್ಯಾ ರೈ ಅವರ ಪಾತ್ರ ಹೈಲೈಟ್ ಆಗಿದೆ.  ಮಣಿರತ್ನಂ ಮತ್ತು ಐಶ್ವರ್ಯಾ ರೈ ಅವರು ಜೊತೆಯಾಗಿ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಚಿಯಾನ್ ವಿಕ್ರಮ್ ಕೂಡ ಮಿಂಚಿದ್ದಾರೆ. ಅದ್ದೂರಿಯಾಗಿ ಈ ಟೀಸರ್​ ರಿಲೀಸ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ವಿಕ್ರಮ್ ತೆರಳಬೇಕಿತ್ತು. ಆದರೆ, ಅನಾರೋಗ್ಯ ಕಾರಣದಿಂದ ಅವರು ಕಾರ್ಯಕ್ರಮಕ್ಕೆ ತೆರಳೋಕೆ ಸಾಧ್ಯವಾಗಿಲ್ಲ.

ಇದನ್ನೂ ಓದಿ: Ponniyin Selvan: ‘ನಮ್ಮ ರಾಣಿ ಮತ್ತೆ ಬಂದರು’: ಐಶ್ವರ್ಯಾ ರೈ ಗೆಟಪ್​ ನೋಡಿ ಖುಷಿಯಿಂದ ಕಮೆಂಟ್​ ಮಾಡಿದ ಫ್ಯಾನ್ಸ್​

ಕಲ್ಕಿ ಕೃಷ್ಣಮೂರ್ತಿ ಅವರು 1955ರಲ್ಲಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕಾದಂಬರಿ ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ತಮಿಳು, ಹಿಂದಿ, ಕನ್ನಡ, ಮಲಯಾಳಂ ಮತ್ತು ತೆಲುಗು ಭಾಷೆಯಲ್ಲಿ ಇದು ಬಿಡುಗಡೆ ಆಗಲಿದೆ ಎಂಬುದು ವಿಶೇಷ. ಐಶ್ವರ್ಯಾ ರೈ ಅವರ ವೃತ್ತಿಜೀವನದಲ್ಲಿ ಇದು ಮಹತ್ವದ ಚಿತ್ರ ಆಗಲಿದೆ. ಇದರಲ್ಲಿ ಅವರು ನಂದಿನಿ ಎಂಬ ರಾಣಿಯ ಪಾತ್ರ ಮಾಡುತ್ತಿದ್ದಾರೆ.

ಚಿತ್ರತಂಡದವರು ಹಂಚಿಕೊಂಡಿರುವ ಈ ಟೀಸರ್​​ ಅಭಿಮಾನಿಗಳಿಗೆ ಸಖತ್​ ಇಷ್ಟ ಆಗಿದೆ. ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. 2022ರ ಸೆ.30ರಂದು ಈ ಚಿತ್ರ ಬಿಡುಗಡೆ ಆಗಲಿದೆ.

Published On - 7:06 pm, Fri, 8 July 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್