AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy 67: ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ

Rakshit Shetty | Thalapathy Vijay: ‘ದಳಪತಿ 67’ ಸಿನಿಮಾಗೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ ಜೊತೆ ಈ ಚಿತ್ರತಂಡ ಮಾತುಕತೆ ನಡೆಸಿದೆ ಎಂದು ವರದಿ ಆಗಿದೆ.

Thalapathy 67: ರಶ್ಮಿಕಾ ಬಳಿಕ ದಳಪತಿ ವಿಜಯ್ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ? ‘ಸಿಂಪಲ್​ ಸ್ಟಾರ್​’ಗೆ ಕಾಲಿವುಡ್​ನಲ್ಲಿ ಬೇಡಿಕೆ
ರಕ್ಷಿತ್ ಶೆಟ್ಟಿ, ದಳಪತಿ ವಿಜಯ್
TV9 Web
| Edited By: |

Updated on:Jan 17, 2023 | 3:33 PM

Share

ಕನ್ನಡದ ಸ್ಟಾರ್​ ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರಿಗೆ ಈಗ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಕಳೆದ ವರ್ಷ ಅವರು ನಟಿಸಿದ ‘777 ಚಾರ್ಲಿ’ ಸಿನಿಮಾ ದೇಶಾದ್ಯಂತ ಸದ್ದು ಮಾಡಿತ್ತು. 150 ಕೋಟಿ ರೂಪಾಯಿ ಬಿಸ್ನೆಸ್​ ಮಾಡಿದ್ದು ಆ ಸಿನಿಮಾದ ಹೆಚ್ಚುಗಾರಿಕೆ. ‘777 ಚಾರ್ಲಿ’ ಚಿತ್ರದಿಂದ ಸಿಕ್ಕ ಭಾರಿ ಯಶಸ್ಸಿನ ಬಳಿಕ ರಕ್ಷಿತ್​ ಶೆಟ್ಟಿ ಅವರಿಗೆ ಪರಭಾಷೆಯಿಂದ ಆಫರ್​ ಬರಲು ಆರಂಭಿಸಿವೆ. ಈಗ ಅವರು ಕಾಲಿವುಡ್​ನ ಖ್ಯಾತ ನಟ ‘ದಳಪತಿ’ ವಿಜಯ್ (Thalapathy Vijay)​ ನಟನೆಯ 67ನೇ ಸಿನಿಮಾದಲ್ಲಿ ಬಣ್ಣ ಹಚ್ಚುವ ಸಾಧ್ಯತೆ ದಟ್ಟವಾಗಿದೆ. ‘ದಳಪತಿ 67’ (Thalapathy 67) ಚಿತ್ರತಂಡ ರಕ್ಷಿತ್​ ಶೆಟ್ಟಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ ಎಂದು ಸುದ್ದಿ ಆಗಿದೆ.

ದಳಪತಿ ವಿಜಯ್​ ನಟನೆಯ ‘ವಾರಿಸು’ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್​ ಆಗಿ ಉತ್ತಮ ಕಮಾಯಿ ಮಾಡಿದೆ. ಆ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್​. ಈಗ ವಿಜಯ್​ ಜೊತೆ ನಟಿಸುವ ಅವಕಾಶ ರಕ್ಷಿತ್​ ಶೆಟ್ಟಿಗೂ ಸಿಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ. ‘ದಳಪತಿ 67’ ಸಿನಿಮಾಗೆ ಲೋಕೇಶ್​ ಕನಗರಾಜ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಇದರ ಶೂಟಿಂಗ್​ ಆರಂಭ ಆಗಿದೆ. ರಕ್ಷಿತ್​ ಶೆಟ್ಟಿ ಜೊತೆ ಮಾತುಕತೆ ನಡೆದಿರುವ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಘೋಷಣೆ ಆಗಿಬೇಕಿದೆ.

ಇದನ್ನೂ ಓದಿ: Rakshit Shetty: 150 ಕೋಟಿ ರೂ. ಗಳಿಸಿದ ‘777 ಚಾರ್ಲಿ’; ಪ್ರಾಣಿಗಳ ರಕ್ಷಣೆಗೆ ಶೇ.5ರಷ್ಟು ಹಣ ದೇಣಿಗೆ ನೀಡಿದ ರಕ್ಷಿತ್​ ಶೆಟ್ಟಿ

ಇದನ್ನೂ ಓದಿ
Image
Varisu Trailer: ಧೂಳೆಬ್ಬಿಸುತ್ತಿದೆ ‘ವಾರಿಸು’ ಸಿನಿಮಾ ಟ್ರೇಲರ್​; ಫ್ಯಾಮಿಲಿ ಪ್ರೇಕ್ಷಕರ ಮೇಲೆ ಕಣ್ಣಿಟ್ಟ ದಳಪತಿ ವಿಜಯ್​
Image
Katrina Kaif: ‘ದಳಪತಿ’ ವಿಜಯ್​ ಚಿತ್ರದ ಹಾಡಿಗೆ ಶಾಲಾ ಮಕ್ಕಳ ಜತೆ ಕತ್ರಿನಾ ಕೈಫ್ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ ಸೋತರೂ ಪಾರ್ಟಿ ಮಾಡಿದ ದಳಪತಿ ವಿಜಯ್; ನಿರ್ದೇಶಕ ಹೇಳಿದ್ದೇನು?
Image
‘ಕೆಜಿಎಫ್​ 2’ ಎದುರು ‘ಬೀಸ್ಟ್​’ಗೆ ಹಿನ್ನಡೆ; ಚಿತ್ರರಂಗಕ್ಕೆ ದಳಪತಿ ವಿಜಯ್​ ಮಗನ ಎಂಟ್ರಿ ಬಗ್ಗೆ ಟಾಕ್​ ಶುರು

ರಕ್ಷಿತ್​ ಶೆಟ್ಟಿ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ನಟನಾಗಿ ಮಾತ್ರವಲ್ಲದೆ, ನಿರ್ದೇಶಕ ಹಾಗೂ ನಿರ್ಮಾಪಕನಾಗಿಯೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ದಳಪತಿ ವಿಜಯ್​ ನಟನೆಯ ಸಿನಿಮಾದಲ್ಲಿ ಬಣ್ಣ ಹಚ್ಚಲು ಇನ್ನೂ ಒಪ್ಪಿಕೊಂಡಿಲ್ಲ. ಸಹಿ ಮಾಡಿದ ಬಳಿಕವಷ್ಟೇ ಪಕ್ಕಾ ಸುದ್ದಿ ಹೊರಬೀಳಲಿದೆ.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿ ಪರಿಚಯಿಸಿದ ಕಲಾವಿದೆ ರಶ್ಮಿಕಾ ಮಂದಣ್ಣ: ಭಾ.ಮ. ಹರೀಶ್ 

ಲೋಕೇಶ್​ ಕನಗರಾಜ್​ ಅವರು ಸ್ಟಾರ್​ ನಿರ್ದೇಶಕನಾಗಿ ಮಿಂಚುತ್ತಿದ್ದಾರೆ. ‘ಕೈದಿ’, ‘ಮಾಸ್ಟರ್​’, ‘ವಿಕ್ರಮ್​’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಕಮಲ್​ ಹಾಸನ್​ ನಟನೆಯ ‘ವಿಕ್ರಮ್​’ ಚಿತ್ರಕ್ಕೂ ಕಾರ್ತಿ ನಟನೆಯ ‘ಕೈದಿ’ ಚಿತ್ರಕ್ಕೂ ಲೋಕೇಶ್​ ಅವರು ಕನೆಕ್ಷನ್​ ಇಟ್ಟಿದ್ದರು. ಈಗ ‘ದಳಪತಿ 67’ ಕೂಡ ಅದೇ ಮಾದರಿಯಲ್ಲಿ ತಯಾರಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾದರೆ ಅದರಲ್ಲಿ ರಕ್ಷಿತ್​ ಶೆಟ್ಟಿಗೆ ಯಾವ ಪಾತ್ರ ಸಿಗಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆಗೆ ಹತ್ತಿರವಾಗುತ್ತಿದೆ. ಇನ್ನು, ಅವರದೇ ನಿರ್ದೇಶನದಲ್ಲಿ ಮೂಡಿಬರಲಿರುವ ‘ರಿಚರ್ಡ್​ ಆಂಟನಿ’ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:22 pm, Tue, 17 January 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ