Yashoda Trailer: ‘ಯಶೋದಾ’ ಟ್ರೇಲರ್​​ ಬಿಡುಗಡೆ; ಸಮಂತಾಗೆ ಸಾಥ್​ ನೀಡಿದ ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ

Samantha | Yashoda Movie Trailer: ‘ಯಶೋದಾ’ ಚಿತ್ರದಲ್ಲಿ ಸಮಂತಾ ಅವರು ಭರ್ಜರಿ ಆ್ಯಕ್ಷನ್​ ಮೆರೆದಿದ್ದಾರೆ ಎಂಬುದಕ್ಕೆ ಟ್ರೇಲರ್​ ಮೂಲಕ ಸುಳಿವು ಸಿಕ್ಕಿದೆ. ನವೆಂಬರ್​ 11ರಂದು ದೇಶಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ.

Yashoda Trailer: ‘ಯಶೋದಾ’ ಟ್ರೇಲರ್​​ ಬಿಡುಗಡೆ; ಸಮಂತಾಗೆ ಸಾಥ್​ ನೀಡಿದ ‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ
ಸಮಂತಾ ರುತ್ ಪ್ರಭು
Follow us
TV9 Web
| Updated By: ಮದನ್​ ಕುಮಾರ್​

Updated on:Oct 28, 2022 | 12:58 PM

ಇತ್ತೀಚಿನ ವರ್ಷಗಳಲ್ಲಿ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರ ಆಯ್ಕೆ ಬದಲಾಗಿದೆ. ತಮ್ಮ ಪಾತ್ರಕ್ಕೆ ಹೆಚ್ಚು ಮಹತ್ವ ಇರುವಂತಹ ಸಿನಿಮಾಗೆ ಅವರು ಮೊದಲ ಆದ್ಯತೆ ನೀಡುತ್ತಿದ್ದಾರೆ. ಅವರು ಈಗ ನಟಿಸುತ್ತಿರುವ ಬಹುತೇಕ ಚಿತ್ರಗಳು ಮಹಿಳಾಪ್ರಧಾನ ಕಥೆಯನ್ನು ಒಳಗೊಂಡಿವೆ. ಅವರ ಬಹುನಿರೀಕ್ಷಿತ ‘ಯಶೋದಾ’ ಸಿನಿಮಾ (Yashoda Movie) ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸಮಂತಾ ಅವರು ಬಾಡಿಗೆ ತಾಯಿಯ ಪಾತ್ರ ಮಾಡಿದ್ದಾರೆ. ಟ್ರೇಲರ್​ನಲ್ಲಿ ಈ ವಿಚಾರ ಬಹಿರಂಗ ಆಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ರಿಲೀಸ್​ ಆಗುತ್ತಿದೆ. ರಕ್ಷಿತ್​ ಶೆಟ್ಟಿ (Rakshit Shetty) ಅವರು ಕನ್ನಡದಲ್ಲಿ ಈ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

ಸ್ಟಾರ್​ ಹೀರೋಗಳ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುವ ಟ್ರೆಂಡ್​ ಜೋರಾಗಿದೆ. ನಟಿಯರು ಕೂಡ ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಮಂತಾ ಅವರ ‘ಯಶೋದಾ’ ಚಿತ್ರ ಬಿಡುಗಡೆ ಆಗುತ್ತಿದೆ. ಕನ್ನಡದಲ್ಲಿ ರಕ್ಷಿತ್​ ಶೆಟ್ಟಿ, ಹಿಂದಿಯಲ್ಲಿ ವರುಣ್​ ಧವನ್​, ತೆಲುಗಿನಲ್ಲಿ ವಿಜಯ್​ ದೇವರಕೊಂಡ, ತಮಿಳಿನಲ್ಲಿ ಸೂರ್ಯ ಹಾಗೂ ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್​ ಅವರು ಟ್ರೇಲರ್​ ಅನಾವರಣ ಮಾಡಿದ್ದಾರೆ. ಇವರೆಲ್ಲರಿಗೂ ಚಿತ್ರದ ನಿರ್ಮಾಪಕ ಶಿವಲೆಂಕ ಕೃಷ್ಣ ಪ್ರಸಾದ್ ​ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

‘ಯಶೋದಾ’ ಚಿತ್ರದಲ್ಲಿ ಸಮಂತಾ ಅವರು ಭರ್ಜರಿ ಆ್ಯಕ್ಷನ್​ ಮೆರೆದಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಎರಡು ಶೇಡ್​ನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಇದು ಅಭಿಮಾನಿಗಳಿಗೆ ಸಖತ್​ ಇಷ್ಟ ಆಗಿದೆ. ನವೆಂಬರ್​ 11ರಂದು ದೇಶಾದ್ಯಂತ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸಮಂತಾ ಜೊತೆ ವರಲಕ್ಷ್ಮಿ ಶರತ್‌ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮಾ, ಸಂಪತ್ ರಾಜ್, ಮಧುರಿಮಾ, ಕಲ್ಪಿಕಾ ಗಣೇಶ್, ದಿವ್ಯಾ ಶ್ರೀಪಾದ, ಪ್ರಿಯಾಂಕಾ ಶರ್ಮಾ ಮುಂತಾದವರು ನಟಿಸಿದ್ದಾರೆ.

‘ಟ್ರೇಲರ್​ ನೋಡಿದ ಎಲ್ಲ ಭಾಷೆಯ ಪ್ರೇಕ್ಷಕರಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬಿಡುಗಡೆಯಾದ ತಕ್ಷಣವೇ ಇದು ವೈರಲ್ ಆಗಿದೆ. ಈಗಾಗಲೇ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಸಮಂತಾ ಅವರ ಅಭಿನಯ, ಮಣಿಶರ್ಮಾ ಅವರ ಹಿನ್ನೆಲೆ ಸಂಗೀತಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಟ್ರೇಲರ್​ನಲ್ಲಿ ಕಥೆಯ ಮೂಲ ಎಳೆ ಏನೆಂಬುದನ್ನು ನಾವು ಬಹಿರಂಗಪಡಿಸಿದ್ದರೂ ಕೂಡ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಪೂರ್ತಿ ಸಿನಿಮಾ ನೋಡಿ ಥ್ರಿಲ್ ಆಗುತ್ತಾರೆ ಎನ್ನುವ ಭರವಸೆ ನಮಗಿದೆ’ ಎಂದು ನಿರ್ಮಾಪಕ ಶಿವಲೆಂಕ ಕೃಷ್ಣ ಪ್ರಸಾದ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Fri, 28 October 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು