‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ 'ರಿಚರ್ಡ್ ಆಂಟನಿ' ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ ಬಿ. ಶೆಟ್ಟಿ ನೀಡಿದ ಹೇಳಿಕೆ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. 'ರಿಚರ್ಡ್ ಆಂಟನಿ' ಚಿತ್ರದ ಕೆಲಸಗಳು ಇನ್ನೂ ಆರಂಭವಾಗಿಲ್ಲವೇ ಎಂದು ಪ್ರಶ್ನಿಸುವಂತೆ ಮಾಡಿದೆ. 'ಸಪ್ತ ಸಾಗರದಾಚೆ ಎಲ್ಲೋ' ನಂತರ ರಕ್ಷಿತ್ ಶೆಟ್ಟಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ
ರಕ್ಷಿತ್-ರಾಜ್

Updated on: Dec 20, 2025 | 2:49 PM

ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ.

ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್​​ನಲ್ಲಿ ಹಿಂಟ್ ಸಿಕ್ಕಿದೆ. ಓರ್ವ ಜನಸಾಮಾನ್ಯನ ಪಾತ್ರದಲ್ಲಿ ರಾಜ್ ಅವರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಸಾಕಷ್ಟು ಸಂದರ್ಶನಗಳನ್ನು ಅವರು ನೀಡುತ್ತಿದ್ದಾರೆ. ಈ ವೇಳೆ ಅವರಿಗೆ ರಕ್ಷಿತ್ ಶೆಟ್ಟಿ ಬಗ್ಗೆಯೂ ಪ್ರಶ್ನೆ ಎದುರಾಗುತ್ತಿದೆ. ಸಂದರ್ಶನ ಒಂದರಲ್ಲಿ ರಾಜ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ‘45’ ಸಿನಿಮಾ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್​ಗೆ ಶಾಕ್

ರಿಷಬ್ ಹಾಗೂ ರಾಜ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತಿದೆ. ಆದರೆ, ಇದನ್ನು ರಾಜ್ ಅಲ್ಲಗಳೆದಿದ್ದಾರೆ. ಅಲ್ಲದೆ, ಎಲ್ಲರ ಸಿನಿಮಾಗಳಲ್ಲಿ ಕೆಲಸ ಮಾಡಲು ಅವರು ಸಿದ್ಧರಿದ್ದಾರಂತೆ. ‘ರಕ್ಷಿತ್ ಅವರು ರಿಚರ್ಡ್​ ಆಂಟನಿ ಸ್ಟಾರ್ಟ್ ಮಾಡಿದ್ರು ಅಂದ್ರೆ’ ಎಂದು ಏನನ್ನೋ ಹೇಳಲು ರಾಜ್ ಮುಂದಾದರು. ‘ನಾನು ಅದರಲ್ಲಿ ಕೆಲಸ ಮಾಡಲು ರೆಡಿ’ ಎಂದು ಅವರು ಹೇಳಲು ಮುಂದಾಗಿರಬಹುದು. ಆದರೆ, ಫ್ಯಾನ್ಸ್ ಇಲ್ಲಿ ಗಮನಿಸಿದ್ದೇ ಬೇರೆ. ಈ ವಿಡಿಯೋಗೆ ಫ್ಯಾನ್ಸ್ ರಿಯಾಕ್ಟ್ ಮಾಡಿದ್ದಾರೆ.

‘ಮಾಡಿದ್ರು ಅಂದ್ರೆ’ ಎಂಬುದರ ನಿಜವಾದ ಅರ್ಥವೇನು ಎಂದು ಅನೇಕರು ಕೇಳಿದ್ದಾರೆ. ‘ಹಾಗಾದ್ರೆ ಅವರು ಸಿನಿಮಾ ಕೆಲಸನ ಇನ್ನೂ ಆರಂಭಿಸಿಲ್ಲವೇ’ ಎಂದು ಅನೇಕರು ಕೇಳುತ್ತಿದ್ದಾರೆ. 2023ರಲ್ಲಿ ಬಂದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:48 pm, Sat, 20 December 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us