AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ಟೆಸ್ಟರ್ ಪಾತ್ರದಲ್ಲಿ ರಾಕುಲ್​ ಪ್ರೀತ್​ ಸಿಂಗ್​; ಗಿಲ್ಲಿ ಬೆಡಗಿಗೆ ಸಿಕ್ಕಾಪಟ್ಟೆ ಬೋಲ್ಡ್​ ಅವತಾರ

ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಒಂದು ವಿಚಿತ್ರವಾದ ಪಾತ್ರ ನಿಭಾಯಿಸಲಿದ್ದಾರೆ. ಕಾಂಡೋಮ್ ಟೆಸ್ಟರ್ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಸಾರಾ ಅಲಿ ಖಾನ್ ಮತ್ತು ಅನನ್ಯಾ ಪಾಂಡೆ ಈ ಪಾತ್ರವನ್ನು ಮಾಡಲು ಒಪ್ಪಿಕೊಂಡಿರಲಿಲ್ಲ.

ಕಾಂಡೋಮ್ ಟೆಸ್ಟರ್ ಪಾತ್ರದಲ್ಲಿ ರಾಕುಲ್​ ಪ್ರೀತ್​ ಸಿಂಗ್​; ಗಿಲ್ಲಿ ಬೆಡಗಿಗೆ ಸಿಕ್ಕಾಪಟ್ಟೆ ಬೋಲ್ಡ್​ ಅವತಾರ
ರಾಕುಲ್​ ಪ್ರೀತ್​ ಸಿಂಗ್​
ಮದನ್​ ಕುಮಾರ್​
| Edited By: |

Updated on: May 27, 2021 | 5:39 PM

Share

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಟಿ ರಾಕುಲ್​ ಪ್ರೀತ್​ ಸಿಂಗ್​. ನಂತರ ಅವರು ತಮಿಳು, ತೆಲುಗು ಮತ್ತು ಹಿಂದಿಯಲ್ಲೂ ಸಿಕ್ಕಾಪಟ್ಟೆ ಫೇಮಸ್​ ಆದರು. ಚಿತ್ರರಂಗಕ್ಕೆ ಕಾಲಿಟ್ಟು 13 ವರ್ಷ ಕಳೆದ ಬಳಿಕವೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಸದ್ಯ ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ರಾಕುಲ್​ ಪ್ರೀತ್​ ಸಿಂಗ್​ ಹೊಸ ಬಗೆಯ ಪಾತ್ರಗಳ ಮೂಲಕ ಜನರನ್ನು ರಂಜಿಸಲು ಪ್ರಯತ್ನಿಸುತ್ತಿದ್ದಾರೆ.

ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಆರ್​ಎಸ್​ವಿಪಿ ಮೂಲಕ ರೋನಿ ಸ್ಕ್ರೀವ್​ವಾಲ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ತೇಜಸ್​ ದೇವುಸ್ಕರ್​ ನಿರ್ದೇಶನ ಮಾಡಲಿರುವ ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಇದರಲ್ಲಿ ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರು ಒಂದು ವಿಚಿತ್ರವಾದ ಪಾತ್ರ ನಿಭಾಯಿಸಲಿದ್ದಾರೆ. ಕಾಂಡೋಮ್​ ಟೆಸ್ಟರ್​ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ, ಕಂಪನಿಯಲ್ಲಿ ತಯಾರಾಗುವ ಕಾಂಡೋಮ್​ಗಳು ಮಾರುಕಟ್ಟೆಗೆ ಬರುವುದಕ್ಕೂ ಮುನ್ನ ಅವುಗಳು ಸರಿಯಾಗಿ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸುವ ವ್ಯಕ್ತಿಯ ಪಾತ್ರವನ್ನು ರಾಕುಲ್​ ನಿಭಾಯಿಸಲಿದ್ದಾರೆ.

ಈವರೆಗಿನ ಅನೇಕ ಸಿನಿಮಾಗಳಲ್ಲಿ ರಾಕುಲ್​ ಪ್ರೀತ್​ ಸಿಂಗ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ಕಾಂಡೋಮ್​ ಟೆಸ್ಟರ್​ ಪಾತ್ರದಲ್ಲಿ ಅವರು ಸಿಕ್ಕಾಪಟ್ಟೆ ಬೋಲ್ಡ್​ ಆಗಿ ಅಭಿನಯಿಸಲಿದ್ದಾರೆ. ಈ ಅವಕಾಶವನ್ನು ಮೊದಲು ಬಾಲಿವುಡ್​ ನಟಿಯರಾದ ಸಾರಾ ಅಲಿ ಖಾನ್​ ಮತ್ತು ಅನನ್ಯಾ ಪಾಂಡೆಗೆ ನೀಡಲಾಗಿತ್ತಂತೆ. ಆದರೆ ಆ ನಟಿಯರು ಒಪ್ಪಿಕೊಂಡಿಲ್ಲ. ಬಳಿಕ ಅದು ರಾಕುಲ್​ ಪ್ರೀತ್​ ಸಿಂಗ್​ ಪಾಲಾಗಿದೆ.

‘ಈ ಪಾತ್ರ ತುಂಬ ಎಗ್ಸೈಟಿಂಗ್​ ಆಗಿದೆ. ಹಾಗಾಗಿ ನಾನು ಚಿತ್ರದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದೇನೆ. ತುಂಬ ಮುಖ್ಯವಾದ ವಿಚಾರಗಳನ್ನು ಇದು ತಮಾಷೆಯ ದಾಟಿಯಲ್ಲಿ ಹೇಳಲಿದೆ’ ಎಂದು ಅವರು ಹೇಳಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಛತ್ರಿವಾಲಿ ಎಂದು ಶೀರ್ಷಿಕೆ ಇಡಲಾಗಿದೆ ಎಂಬ ಮಾಹಿತಿ ಇದೆ. ನೇರವಾಗಿ ಈ ಸಿನಿಮಾ ಓಟಿಟಿಯಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ:

ಟ್ರಕ್​ ಡ್ರೈವ್ ಮಾಡಿಕೊಂಡು ಜಾಲಿ ರೈಡ್​ ಹೋದ ರಾಕುಲ್​ ಪ್ರೀತ್​ ಸಿಂಗ್​

ಕನ್ನಡ ಸಿನಿರಂಗದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರಿವರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್